ಭೂ ಮಾಪಕ ರಾಮಕೃಷ್ಣರ ಮೇಲೆ ಹಲ್ಲೆ; ದೂರು ದಾಖಲು

Source: sonews | By Staff Correspondent | Published on 26th February 2020, 10:32 PM | State News |

ಶ್ರೀನಿವಾಸಪುರ: ತಾಲ್ಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಕೆ.ಎನ್.ರಾಮಕೃಷ್ಣಪ್ಪ ಅವರ ಮೇಲೆ ವ್ಯಕ್ತಿಯೊಬ್ಬರು ತೀವ್ರ ಹಲ್ಲೆ ನಡೆಸಿರುವ ಘಟನೆ ಬುಧವಾರ ಪಟ್ಟಣದಲ್ಲಿ ನಡೆದಿದೆ.

ರಾಮಕೃಷ್ಣಪ್ಪ ಅವರನ್ನು ತಾಲ್ಲೂಕಿನ ಯದರೂರು ಗ್ರಾಮದ ಸಮೀಪ ಅರ್ಜಿದಾರ ನಿಬ್ಬಾವುಲ್ಲಾ ಅವರ ರಿ ಸ.ನಂ 211/2 ಜಮೀನು ಅಳತೆ ಮಾಡಿ ಹದ್ದುಬಸ್ತು ಮಾಡಿಕೊಡಲು ನಿಯೋಜಿಸಲಾಗಿತ್ತು. ಜಮೀನಿನ ಬಾಜುದಾರರಿಗೆ ಮುಂಚಿತವಾಗಿಯೇ ನೋಟಿಸ್‌ ನೀಡಿ ಫೆ.25 ರಂದು ಬಾಜೂದಾರರು ಹಾಗೂ ಪೊಲೀಸ್ ಸಿಬ್ಬಂದಿ ಸಮಕ್ಷಮದಲ್ಲಿ ಅಳತೆ ಮಾಡಿ ಗಡಿ ಗುರುತಿಸಲಾಗಿತ್ತು ಎಂದು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಮೇಲ್ವಿಚಾರಕ ಜಗದೀಶ್ ತಿಳಿಸಿದ್ದಾರೆ.

ಭೂಮಾಪಕ ಕೆ.ಎನ್‌.ರಾಮಕೃಷ್ಣಪ್ಪ ಬುಧವಾರ ಪಟ್ಟಣದ ಹೋಟೆಲ್‌ ಒಂದರಲ್ಲಿ ಊಟ ಮಾಡುತ್ತಿದ್ದಾಗ, ಅಳತೆ ಮಾಡಲಾಗಿದ್ದ ಜಮೀನಿನ ಬಾಜೂದಾರ ಯದರೂರು ಗ್ರಾಮದ ಚೌಡಪ್ಪ ಇದ್ದಕ್ಕಿದಂತೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ಗಾಯಾಳು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕು ಭೂಮಾಪಕರ ಸಂಘದ ಅಧ್ಯಕ್ಷ ಆಂಜಿನಪ್ಪ ಹಲ್ಲೆಯನ್ನು ಖಂಡಿಸಿದ್ದಾರೆ. ಹಲ್ಲೆ ಮಾಡಿರುವ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. 

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...