ಪಠ್ಯ ಪರಿಷ್ಕರಣೆ ರದ್ದುಗೊಳಿಸಲು ಆಗ್ರಹ; ಕವಿಶೈಲದಿಂದ ತೀರ್ಥಹಳ್ಳಿಯವರೆಗೆ ಪಾದಯಾತ್ರೆ

Source: Vb | By I.G. Bhatkali | Published on 16th June 2022, 10:44 AM | State News |

ಶಿವಮೊಗ್ಗ: ಬಹುತ್ವದ ವಿರೋಧಿ ಧೋರಣೆ ಮನೋಭಾವದ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯ ಪಠ್ಯ ಪರಿಷ್ಕರಣೆಯನ್ನು ರದ್ದುಗೊಳಿಸಿ, ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿಯ ಪಠ್ಯವನ್ನೇ ಮುಂದುವರಿಸಬೇಕೆಂದು ಆಗ್ರಹಿಸಿ ಕುಪ್ಪಳ್ಳಿಯ ಕವಿಶೈಲದಿಂದ ತೀರ್ಥಹಳ್ಳಿಯವರೆಗೆ ಮಾಜಿ ಶಾಸಕ ಕಿಮ್ಮನೆ ರತ್ನಾಕರ ನೇತೃತ್ವದಲ್ಲಿ ಸಾಹಿತಿಗಳು, ಬುದ್ಧಿಜೀವಿಗಳು, ವಿದ್ವಾಂಸರು, ಸರ್ವ ಸಂಘಟನೆಗಳು, ಪಾದಯಾತ್ರೆ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಠ್ಯ ಪರಿಷ್ಕರಣೆ ಸಮಿತಿಯಿಂದ ಆಗಿರುವ ವೈದಿಕೀಕರಣ, ಅಸಮಾನತೆ, ನಾಡಗೀತೆಗೆ ಅಪಮಾನ, ರಾಷ್ಟ್ರಕವಿ ಕುವೆಂಪುಗೆ ಅವಹೇಳನ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್,

ಹಿಂದುತ್ವ ವಾದಕ್ಕೆ ಕರ್ನಾಟಕ ಪ್ರಯೋಗಭೂಮಿಯಲ್ಲ
10 ದೇಶದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಕೋಮುವಾದಿ ನಿರ್ಮಾಣವಾಗಿದೆ. ಸಂಘಟನೆಗಳ ಪ್ರಚೋದನೆಯಿಂದ ಮಕ್ಕಳು ಉತ್ತಮ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ದೇಶ ಕೆಟ್ಟುವ ಮನಸ್ಸುಗಳಿಗೆ ವಿಕಾರ ವಿಷಯ ತುಂಬಲಾಗುತ್ತಿದೆ. ನಾಡಗೀತೆ ಹಾಡುವ ನೈತಿಕ ಅಧಿಕಾರ ಸರಕಾರಕ್ಕಿಲ್ಲ. ಲಿಂಗಾಯತ ಧರ್ಮ ಕನ್ನಡ ವಚನ ಧರ್ಮ. ಹಿಂದುತ್ವ ವಾದಕ್ಕೆ ಕರ್ನಾಟಕ ಪ್ರಯೋಗಭೂಮಿಯಲ್ಲ.

ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಸಾಹಿತಿ

ಶಂಕರಾಚಾರ್ಯರಿಗೆ ಅಗೌರವ ತೋರಿರುವ ಚಕ್ರತೀರ್ಥ ನೇತೃತ್ವದ ಪಠ್ಯ ಪರಿಷ್ಕರಣಾ ಸಮಿತಿ ಮತ್ತು ಅದನ್ನು ಬೆಂಬಲಿಸುತ್ತಿರುವ ರಾಜ್ಯ ಸರಕಾರದ ಧೋರಣೆ ಖಂಡಿಸಿ ಕವಿಶೈಲದಲ್ಲಿ ಪ್ರತಿಭಟನಾಕಾರರು ಕನ್ನಡದ ಕಹಳೆ ಮೊಳಗಿಸಿದರು. ಕವಿಶೈಲದಲ್ಲಿ ಕುವೆಂಪು ಅವರ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ನಂತರ ಈ ಬೃಹತ್‌ ಪಾದಯಾತ್ರೆಗೆ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹಾಗೂ ಖ್ಯಾತ ಸಾಹಿತಿ ಪ್ರೊ. ಎಸ್.ಜಿ. ಸಿದ್ದರಾಮಯ್ಯ ಚಾಲನೆ ನೀಡಿದರು.

ಪ್ರೊ. ಎಸ್‌.ಜಿ.ಸಿದ್ದರಾಮಯ್ಯ ಮಾತನಾಡಿ, ಪಠ್ಯಕ್ರಮ ಪರಿಷ್ಠರಣೆಗೆ ಸರಕಾರ ಅನಧಿಕೃತ ನೇಮಕಾತಿ ಮಾಡಿದೆ. ಆದೇಶವನ್ನು ಉಲ್ಲಂಘಿಸಿ ಮಾಡಿದ ಅಕ್ರಮ ಪಠ್ಯ ಪರಿಷ್ಕರಣೆಯನ್ನು ಈ ಸರಕಾರ ಸಕ್ರಮಗೊಳಿಸಿದ ರೀತಿಯಿಂದ ಇಡೀ ಕನ್ನಡ ಪ್ರಜೆಗೆ ಅಪಮಾನವಾಗಿದೆ. ನಾಡಿನ ಕನ್ನಡ ಪ್ರಜೆ, ಭಾರತದ ಸಂಕೇತವಾದ ನಾಡಗೀತೆ 'ಜೈ ಭಾರತ ಜನನಿಯ ತನುಜಾತೆ, ಜಯಹೇ ಕರ್ನಾಟಕ ಮಾತೆ' ಎಂಬ ನುಡಿಯನ್ನು ತಿರುಚಿರುವುದು ಬರೀ ರಾಷ್ಟ್ರಕವಿಗಲ್ಲ, ಇಡೀ ಕನ್ನಡಕ್ಕೆ ಮಾಡಿದ ಅವಮಾನ. ಅಂತಹ ವ್ಯಕ್ತಿಯನ್ನು ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷನನ್ನಾಗಿ ಮಾಡಿದ್ದು, ಸರಕಾರದ ಬೇಜವಾಬ್ದಾರಿ ನಡೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಸಿಕೊಳ್ಳುವ ಶಿಕ್ಷಣವನ್ನು ಮಕ್ಕಳಿಗೆ ಕೊಡುವುದನ್ನು ಬಿಟ್ಟು, ದೇಶಭಕ್ತಿಯ ಹೆಸರಿನಲ್ಲಿ ದ್ವೇಷವನ್ನು ಪ್ರಚೋದಿಸುವ ಪಠ್ಯಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಡಬೇಕೇ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಈ ಹೋರಾಟ ಪಕ್ಷಾತೀತವಾಗಿ ನಡೆಯುತ್ತಿದೆ.

Read These Next

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...