ಕುಖ್ಯಾತ ಬೈಕ್ ಕಳ್ಳನ ಬಂಧನ

Source: sonews | By Staff Correspondent | Published on 11th September 2019, 11:18 PM | State News | Don't Miss |

ಕೋಲಾರ : ಕೋಲಾರ ಗ್ರಾಮಾಂತರ ಠಾಣಾ ಸರಹದ್ದಿನಲ್ಲಿ ಕಳವು ಪ್ರಕರಣಗಳು ತಡೆಗಟ್ಟುವ ಹಾಗೂ ಪತ್ತೆ ಮಾಡುವ ಸಲುವಾಗಿ ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದು, ಸೆಪ್ಟೆಂಬರ್ 10 ರಂದು  ಅಪರಾಧ ಸಿಬ್ಬಂದಿಯವರು ಗಸ್ತಿನಲ್ಲಿದ್ದಾಗ ಕೋಲಾರ ಗ್ರಾಮಾಂತರ ಠಾಣಾ ಸರಹದ್ದಿನ ಅಮ್ಮೇರಹಳ್ಳಿ ಬಳಿ ದ್ವಿಚಕ್ರ ವಾಹನ ಕಳುವು ಮಾಡುತ್ತಿದ್ದ ಅರೋಪಿಯಾದ ವೆಂಕಿತ್ ಕುಮಾರ್@ವ ವೆಂಕಿ (21) ಬಿನ್ ನಾರಾಯಣಸ್ವಾಮಿ, ಈತನು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಗೌರಿಪೇಟೆ 3 ನೇ ಕ್ರಾಸ್ ಚೀಟಿ ಲಕ್ಷಮ್ಮ ಅವರ ಮನೆಯಲ್ಲಿ ಬಾಡಿಗೆ  ವಾಸವಿದ್ದು, ಈತನ ಸ್ವಂತ ಊರು ಗಿರ್ನಹಳ್ಳಿ ಆಗಿದ್ದು, ಈ ಆರೋಪಿಯಿಂದ  65 ಸಾವಿರ ಬೆಲೆ ಬಾಳುವ ಒಂದು ಜುಪಿಟರ್ ದ್ವಿಚಕ್ರವಾಹನ ಮತ್ತು 35 ಸಾವಿರ ಬೆಲೆ ಬಾಳುವ ಹೆವಿ ಡ್ಯೂಡಿ, ಟಿವಿಎಸ್ ದ್ವಿಚಕ್ರವಾಹನವನ್ನು ಸೇರಿ ಒಟ್ಟು ಒಂದು ಲಕ್ಷ ಬೆಲೆ ಬಾಳುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.  

ಈ ದಾಳಿಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಯಾದ ಖಾಸೀಂಖಾನ್, ಕೃಷ್ಣಮೂರ್ತಿ, ಅರುಣ್ ಕುಮಾರ್, ರಮೇಶ್ ಬಾಬು, ಮುನಿರಾಜು ಭಾಗವಹಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರ್ತಿಕ್ ರೆಡ್ಡಿ ಅವರು ತಿಳಿಸಿದ್ದಾರೆ.

 

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...