ಬೆಂಗಳೂರು: ರಾಜ್ಯದ ಯುವ ಪರಿಸರವಾದಿ ಬಂಧನ

Source: Agencies | By S O News | Published on 16th February 2021, 10:46 AM | National News |

ಬೆಂಗಳೂರು: ಅಂತರ್‌ರಾಷ್ಟ್ರೀಯ ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಟೂಲ್ ಕಿಟ್ ಪ್ರಕರಣ ಸಂಬಂಧ ಬೆಂಗಳೂರು ಮೂಲದ ಯುವ ಪರಿಸರವಾದಿಯನ್ನು ಹೊಸದಿಲ್ಲಿ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

21 ವರ್ಷದ ದಿಶಾ ರವಿ ಬಂಧಿತ ಪರಿಸರವಾದಿ ಆಗಿದ್ದು, ಈಕೆ 'ಫೈಡೇಸ್ ಫಾರ್ ಪ್ಯೂಚರ್' ಅಭಿಯಾನದ ಸಹ ಸ್ಥಾಪಕಿಯೂ ಹೌದು ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಿರಂತರ ಹೋರಾಟ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಸ್ವೀಡನ್‌ನ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ಬರ್ಗ್ ಈ ತಿಂಗಳ ಆರಂಭದಲ್ಲಿ ಟೂಲ್ ಕಿಟ್ ಅನ್ನು ಟೀಟ್ ಮಾಡಿದ್ದರು. ಈ ಟ್ವಿಟ್ ಜಾಗತಿಕ ಗಮನ ಸೆಳೆದ ಬೆನ್ನಲ್ಲೇ, ವಿವಾದವೂ ಅಂಟಿಕೊಂಡಿದೆ ಎಂದು ಆರೋಪಿಸಿ ಫೆ.4ರಂದು ಹೊಸದಿಲ್ಲಿ ಅಪರಾಧ ವಿಭಾಗದ ಪೊಲೀಸರು ಟೂಲ್ ಕಿಟ್ ಬಗ್ಗೆ ಪ್ರಕರಣ ದಾಖಲಿಸಿದ್ದರು.

ಇದಾದ ಬಳಿಕ ತನಿಖೆ ನಡೆಸಿರುವ ಹೊಸದಿಲ್ಲಿ ಅಪರಾಧ ವಿಭಾಗದ ಪೊಲೀಸರು, ರೈತರ ಪ್ರತಿಭಟನೆ ವೇಳೆ ಗಲಭೆಗೆ ಕುಮ್ಮಕ್ಕು ನೀಡಿದ್ದಾರೆ ಮತ್ತು ಹಿಂಸಾಚಾರದ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಪ್ರಚೋದನೆ ನೀಡಿದ್ದಾರೆಂಬ ಆರೋಪದಡಿ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿಶಾ ರವಿ ಅವರನ್ನು ಬಂಧಿಸಿದ್ದಾರೆ.

ಬಂಧಿತ ದಿಶಾ ರವಿ ವಿರುದ್ಧ ದೇಶದ್ರೋಹ, ಅಪರಾಧ ಒಳಸಂಚು ಸೇರಿದಂತೆ ಐಪಿಸಿ ಸೆಕ್ಷನ್ 124 ಎ, 120 ಎ ಹಾಗೂ 153 ಎ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

7 ದಿನ ಪೊಲೀಸ್ ಕಸ್ಟಡಿಗೆ:  ಆರೋಪಿಯನ್ನು ಬಂಧಿಸಿರುವುದಾಗಿ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಉಪ ಪೊಲೀಸ್ ಆಯುಕ್ತರಿಗೆ ಪ್ರಾಥಮಿಕ ಮಾಹಿತಿ ನೀಡಿದ ಹೊಸದಿಲ್ಲಿ ಅಪರಾಧ ವಿಭಾಗದ ಪೊಲೀಸರು, ಆನಂತರ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯವು ದಿಶಾ ಅವರನ್ನು 7 ದಿನಗಳ ಕಾಲ ಪೊಲೀಸರ ವಿಶೇಷ ಸೆಲ್ ಕಸ್ಟಡಿಗೆ ಒಪಿಸಿದೆ ಎಂದು ತಿಳಿದುಬಂದಿದೆ.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...