ಮುಂದಿನ ವರ್ಷದ ಜೂನ್ ವರೆಗೂ ಏಷ್ಯಾ ಕಪ್ ಮುಂದೂಡಿಕೆ

Source: PTI | Published on 10th July 2020, 2:22 AM | Sports News | Don't Miss |

 

ನವದೆಹಲಿ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷದ ಸೆಪ್ಟೆಂಬರ್ ನಲ್ಲಿ  ನಡೆಯಬೇಕಾಗಿದ್ದ ಏಷ್ಯಾ ಕಪ್ ಟೂರ್ನಿಯನ್ನು ಮುಂದಿನ ವರ್ಷದ ಜೂನ್ ಗೆ ಏಷ್ಯಾ ಕ್ರಿಕೆಟ್ ಸಮಿತಿ ಮುಂದೂಡಿದೆ.
ಈ ನಿರ್ಧಾರದಿಂದಾಗಿ ಸೆಪ್ಟೆಂಬರ್ ನಿಂದ ನವೆಂಬರ್ ವರೆಗೂ ಐಪಿಎಲ್ ನಡೆಸಲು ಪ್ರಯತ್ನಿಸುತ್ತಿರುವ ಸಂಘಟಕರಿಗೆ ಹಾದಿ ಸುಗಮವಾದಂತಾಗಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದ ಪ್ರಭಾವವನ್ನು ಎಚ್ಚರಿಕೆಯಿಂದ ಪರಿಗಣಿಸಿ ಎಸಿಸಿ ಕಾರ್ಯಕಾರಿ ಮಂಡಳಿ ಸೆಪ್ಟೆಂಬರ್ ನಲ್ಲಿ ನಡೆಯಬೇಕಾಗಿದ್ದ ಏಷ್ಯಾ ಕಪ್ ಪಂದ್ಯಾವಳಿಯವನ್ನು ಮುಂದೂಡಲು ನಿರ್ಧರಿಸಿದೆ ಎಂದು ಏಷ್ಯನ್ ಕ್ರಿಕೆಟ್ ಸಮಿತಿ ಟ್ವೀಟ್ ಮಾಡಿದೆ.
ಈ ಬಾರಿ ಪಾಕಿಸ್ತಾನ ಏಷ್ಯಾ ಕಪ್ ಅತಿಥ್ಯ ವಹಿಸಬೇಕಾಗಿತ್ತು. ಆದರೆ, ಭದ್ರತೆ ಕಾರಣ ಶ್ರೀಲಂಕಾದಲ್ಲಿ ಪಂದ್ಯಾವಳಿ ಆಯೋಜಿಸಲು ಸಿದ್ಧತೆ ನಡೆಸಲಾಗಿತ್ತು

Read These Next

ಕೋಸ್ಟಲ್ ಎಕನಾಮಿಕ್ ಝೋನ್ ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ-ಅನಂತ್ ಕುಮಾರ್ ಹೆಗಡೆ

ಭಟ್ಕಳ: ಕರಾವಳಿಯ ತಾಲೂಕುಗಳ ಅಭಿವೃದ್ಧಿಯು ಬಂದರ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಾಗುವುದು. ಈಗಾಗಲೇ ಕೋಸ್ಟಲ್ ಎಕನಾಮಿಕ್ ಝೋನ್ ...

ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಿರಸಿಯ ಸನ್ನಿಧಿ ಹೆಗಡೆಯ ಮನದಿಂಗಿತ

ಭಟ್ಕಳ: ಕೊರೋನಾ ಲಾಕ್ಡೌನ್ ಸದೂಪಯೋಗಗೊಂಡಿದ್ದು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ ಎಂದು 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ...