ವಿಜೃಂಭಣೆಯಿದ ಜರುಗಿದ ಮುರ್ಡೇಶ್ವರದ ಮಾತೋಬಾರ ಬ್ರಹ್ಮರಥೋತ್ಸವ

Source: so news | By MV Bhatkal | Published on 20th January 2023, 11:27 PM | Coastal News | Don't Miss |

ಭಟ್ಕಳ:ಪ್ರತಿ ವರ್ಷ ಮಕರ ಸಂಕ್ರಮಣದ ಪುಣ್ಯ ಕಾಲದಲ್ಲಿ 
ಪ್ರಸಿದ್ದ ಪ್ರವಾಸಿ ತಾಣವಾದ ಮುರ್ಡೇಶ್ವರದ ಮಾತೋಬಾರ ಶ್ರೀ ಮುರ್ಡೇಶ್ವರ ದೇವರ ರಥೋತ್ಸವ ಕಾರ್ಯಕ್ರಮ ಸಾವಿರಾರು ಭಕ್ತಾಧಿಗಳ ಹರ್ಷೋದ್ಗಾರಗಳ ನಡುವೆ ವಿಜೃಂಭಣೆಯಿದ ಶುಕ್ರವಾರ ಸಂಜೆ ನಡೆಯಿತು.
 ಜನವರಿ ೧೫ರಿಂದ ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿ ಜ೨೦ರಂದು ಮಹಾರಥೋತ್ಸವ  ಜರುಗಿತು. ಮಹಾರಥೋತ್ಸವದ ಅಂಗವಾಗಿ ಬೆಳಿಗ್ಗೆಯಿಂದಲೆ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹೋಮ ಹವನಗಳನ್ನು ವಿಧಿವತ್ತಾಗಿ ನಡೆಸಲಾಯಿತು. ಮಧ್ಯಾಹ್ನ ದಿಂದ ಸಾವಿರಾರು  ಭಕ್ತಾಧಿಗಳು ರಥಕಾಣಿಕೆ ನೀಡಿ ಪೂಜೆ ಪುರಸ್ಕಾರ  ನೆರವೇರಿಸಿ ರಥೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಜೆ ೫.೩೦ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಮಾಹಾರಥವನ್ನು ದೇವಸ್ಥಾನದ  ಕೆರೆಯ ಸುತ್ತ ಭಕ್ತಾದಿಗಳ ಜಯಘೋಷದೊಂದಿಗೆ ಎಳೆಯಲಾಯಿತು.  ರಥೋತ್ಸವದ  ಸಂದರ್ಬದಲ್ಲಿ ಸೂಮಾರು ೧೦ಸಾವಿರಕ್ಕೂ ಅಧಿಕ ಭಕ್ತಾಧಿಗಳು ಪಾಲ್ಗೊಂಡಿದ್ದರು ಎನ್ನಲಾಗಿದೆ. ಶಾಸಕ ಸುನೀಲ ನಾಯ್ಕ, ಮಾಜಿ ಶಾಸಕ ಮಂಕಾಳ ವೈದ್ಯ, ತಹಸೀಲ್ದಾರ ಅಶೋಕ ಭಟ್, ದೇವಸ್ಥಾನದ ಟ್ರಸ್ಟಿಗಳು,  ಆನಂದ ಶೆಟ್ಟಿ, ಸೇರಿದಂತೆ ವಿವಿಧ ಗಣ್ಯರು ಭಾಗವಹಿಸಿದ್ದರು. ದೂರದಿಂದ ಬಂದಿರುವ ಭಕ್ತರಹಿತ ದೃಷ್ಟಿ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಉತ್ತಮ ಬಂದೋಬಸ್ತ ನೀಡಿದ್ದರು. ಭಕ್ತರ ವಾಹನ ಪಾರ್ಕಿಂಗಿಗಾಗಿ ಪೇ ಎಂಡ್ ಪಾರ್ಕ ಸೌಲಭ್ಯ ಒದಗಿಸಲಾಗಿತ್ತು.

Read These Next

ಕುಂದಾಪುರ: ತಾಯಿಯ ಕೊಳೆತ ಮೃತದೇಹದೊಂದಿಗೆ 3 ದಿನ ಕಳೆದ ವಿಕಲಚೇತನ ಮಗಳು – ಆಸ್ಪತ್ರೆಯಲ್ಲಿ ನಿಧನ

ಮನೆಯಲ್ಲೇ ಮೃತಪಟ್ಟು ಕೊಳೆತ ಸ್ಥಿತಿಯಲ್ಲಿದ್ದ ತಾಯಿಯ ಮೃತದೇಹದ ಜೊತೆ ಅನ್ನಾಹಾರ ಇಲ್ಲದೇ ಮೂರು ನಾಲ್ಕು ದಿನ ಕಳೆದ 32ರ ಹರೆಯದ ...

ರಸ್ತೆಯಲ್ಲಿ ಕಸ ಎಸೆಯುವುದನ್ನು ತಪ್ಪಿಸಲು ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮರಾ ಕಣ್ಗಾವಲು

ಸ್ಥಳೀಯ ಜನರ ಸಹಕಾರದಿಂದ ಹನೀಫಾಬಾದ್ ರಸ್ತೆಯಲ್ಲಿ ಮೂರು, ಜಾಮಿಯಾಬಾದ್ ರಸ್ತೆಯಲ್ಲಿ ಮೂರು, ಮಿನಾ ರಸ್ತೆಯಲ್ಲಿ ಒಂದು ಕ್ಯಾಮೆರಾ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...