ವಧು ವರರ ಹೊಸಬೆಳಕು ಸಮಾವೇಶ: ಹೆಚ್.ಐ.ವಿ ಸೊಂಕಿತರಿಗೆ ಆಶಾಕಿರಣ

Source: so news | By MV Bhatkal | Published on 17th March 2019, 12:53 AM | State News | Don't Miss |


ಹಾಸನ: ಹೊಸಬೆಳಕು ವಧು ವರರ ಸಮಾವೇಶ ಹೆಚ್.ಐ.ವಿ/ಏಡ್ಸ್ ಸೋಂಕಿತರ ಪಾಲಿನ ಹೊಸ ಆಶಾಕಿರಣವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ. ಕೆ.ಎನ್.ವಿಜಯಪ್ರಕಾಶ್ ಅಭಿಪ್ರಾಯ ಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ ಹಾಸನ, ಇತರೆ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೆಬೀಡಿನ ಪುಷ್ಪಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಹೆಚ್.ಐ.ವಿ ವಧು-ವರರ ಸಮಾವೇಶ ಹೊಸಬೆಳಕು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನೋವು, ಸಂಕಷ್ಟಗಳಿಂದ ಎದೆಗುಂದದೆ ಸವಾಲಿನ ಸಂಕೋಲೆಗಳನ್ನು ದಾಟಿ ದೃಡ ಸಂಕಲ್ಪದಿಂದ ಹೊಸ ಬದುಕು ಕಟ್ಟಿಕೊಳ್ಳಬೇಕು ಆ ಮೂಲಕ ಇತರರಿಗೂ ಮಾದರಿಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಕೆ. ಎನ್ ವಿಜಯ ಪ್ರಕಾಶ್ ತಿಳಿಸಿದರು.
ಹೆಚ್.ಐ.ವಿ /ಏಡ್ಸ್ ಸೋಂಕಿತರು ಧನಾತ್ಮಕ ಚಿಂತನೆಗಳಿಂದ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬಹುದು ಹಾಗೂ ಉತ್ತಮ ಜೀವನ ಶೈಲಿಯಿಂದ ತಮ್ಮ ವೈಯಕ್ತಿಕ ಹಾಗೂ ಕೌಟುಂಬಿಕ ಬದುಕನ್ನು ಸುಧಾರಿಸಿಕೊಳ್ಳಬಹುದು ಎಂದು ಅವರು ಹೇಳಿದರು.
ಹೆಚ್.ಐ.ವಿ/ಏಡ್ಸ್ ಸೋಂಕು ನಿಯಂತ್ರಣ ಹಾಗೂ ತಡೆಗೆ ಎಲ್ಲರ ಸಹಕಾರವು ಅಗತ್ಯ ಬಾಳ ಸಂಗಾತಿಗಳ ಆಯ್ಕೆಯು ಇದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಅಂತಹವರಿಗೆ ಹೊಸಬೆಳಕು ಎಂಬ ವಧುವರರ ವೇದಿಕೆ ಉತ್ತಮ ಅವಕಾಶಗಳನ್ನು ಸೃಷ್ಟಿಸಿದ್ದು ಇದಕ್ಕಾಗಿ ರಾಜ್ಯ ಹಾಗೂ ಜಿಲ್ಲೆಯಲ್ಲಿ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಯ ಪ್ರಯತ್ನ ಅಭಿನಂದನಾರ್ಹ ಎಂದು ಡಾ. ಕೆ.ಎನ್ ವಿಜಯಪ್ರಕಾಶ್ ಹೇಳಿದರು.
ಹೆಚ್.ಐ.ವಿ ಸೋಂಕಿತರ ಭಾವನೆಗಳಿಗೆ ಸಮಾಜವೂ ಸ್ಪಂದಿಸಿ ಅವರ ಜೀವನ ಮಟ್ಟ ಸುಧಾರಣೆಗೆ ನೆರವಾಗಬೇಕಿದೆ ಅದೇ ರೀತಿ ಹೆಚ್.ಐ.ವಿ/ಏಡ್ಸ್ ಸೋಂಕಿತರು ಸಮಾಜಕ್ಕೆ ಪೂರಕವಾಗಿ ತಮ್ಮ ಬದುಕನ್ನು ನಡೆಸಬೇಕಿದೆ ಎಂದು ಅವರು ಹೇಳಿದರು.
ಇದೇ ವೇಳೆ ಪ್ರತಿಯೊಬ್ಬ ಮತದಾರರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸುವ ಮೂಲಕ ತಮ್ಮ ಕರ್ತವ್ಯ ಪಾಲನೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ಪೀಪ್ ಸಮಿತಿ ಅಧ್ಯಕ್ಷರಾದ ಡಾ. ಕೆ.ಎನ್. ವಿಜಯಪ್ರಕಾಶ್ ಅವರು ಮನವಿ ಮಾಡಿದರು. 
ಜಿಲ್ಲಾ ಏಡ್ಸ್ ಹಾಗೂ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ|| ನಾಗೇಶ್ ಆರಾದ್ಯ ಮಾತನಾಡಿ ಜಿಲ್ಲೆಯಲ್ಲಿ ಈವರೆಗೆ ಸುಮಾರು 10,950 ಕ್ಕೂ ಹೆಚ್ಚು ಜನರಲ್ಲಿ ಹೆಚ್.ಐ.ವಿ ಸೋಂಕು ಪತ್ತೆ ಹಚ್ಚಲಾಗಿದೆ. ಇನ್ನೂ ಪರೀಕ್ಷೆಗೆ ಒಳಪಡದ ಹಲವರು ಇದ್ದಾರೆ ಇವರ ಜೀವನ ಮಟ್ಟ ಸುದಾರಣೆ ಹಾಗೂ ಸೋಂಕಿತರಿಗೆ ಪರಸ್ಪರ ತಮ್ಮ ಸಂಗಾತಿಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸುವ ಸಲುವಾಗಿ ಹೊಸಬೆಳಕು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಸೋಂಕಿತರಿಗೆ ಸರಿಯಾದ ಚಿಕಿತ್ಸೆಯ ಜೊತೆಗೆ ಅವರ ಜೀವನ ಶೈಲಿಯು ಉತ್ತಮಗೊಳ್ಳಲು ಅನೇಕ ಸವಲತ್ತುಗಳು ಸಿಗಬೇಕಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಸಹಾಯಕ ನಿರ್ದೇಶಕರಾದ ಗೋವಿಂದರಾಜು ಅವರು ಮಾತನಾಡಿ ಸೋಂಕಿತ ಸಮುದಾಯದವರ ಹಿತಕಾಯುವ ಸಲುವಾಗಿ ರಾಜ್ಯ ಮಟ್ಟದಿಂದ ವಿಭಾಗ ಮಟ್ಟದಿಂದ ವಧುವರರ ಸಮಾವೇಶ ನಡೆಸಲಾಗುತ್ತಿದ್ದು, ಈಗಾಗಲೇ 30ಕ್ಕೂ ಹೆಚ್ಚು ಜೋಡಿಗಳು ತಮ್ಮ ಬಾಳ ಸಂಗಾತಿಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎಂದರು.
ಹೆಚ್.ಐ.ವಿ/ಏಡ್ಸ್ ಸೋಂಕಿತರ ಜಾಗೃತಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶ್ರೀನಿವಾಸ್ ಅವರು ಹೆಚ್.ಐ.ವಿ. ಸೋಂಕಿತರ ಜೀವನ ಸಮಸ್ಯೆ, ಸವಾಲು, ಅವಕಾಶ ಹಾಗೂ ಸಮಾಜದಿಂದ ಬೇಕಿರುವ ನೆರವುಗಳ ಬಗ್ಗೆ ವಿವರಿಸಿದರು. 
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧೆಡೆಯಿಂದ 150 ಕ್ಕೂ ಹೆಚ್ಚಿನ ಸೊಂಕಿತರು ತಮ್ಮ ಜೀವನ ಸಂಗಾತಿಗಳ ಆಯ್ಕೆಗಾಗಿ ಭಾಗವಹಿಸಿದ್ದರು. ಪ್ರತಿಯೊಬ್ಬರಿಗೂ ಆಪ್ತಸಮಾಲೋಚನೆಯ ಜೊತೆಗೆ ಮಾರ್ಗದರ್ಶನ ನೀಡಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ|| ಸತೀಶ್ ಕುಮಾರ್ ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಬೋದಿಸಿದರು. ಬೇಲೂರು ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ|| ವಿಜಯ್ ಆಡಳಿತಾಧಿಕಾರಿ ಡಾ|| ನರಸೇಗೌಡ, ಹಾಸನ ತಾಲ್ಲೂಕು ಆರೋಗ್ಯಾಧಿಕಾರಿ ಡಾ ವಿಜಯ್, ಮೇಲ್ವಿಚಾರಕಾರದ ರವಿಕುಮಾರ, ಕೆಂಚೆಗೌಡ, ಧರಣೇಶ್ ಮತ್ತಿತರರು ಹಾಜರಿದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...