ಶಿರಸಿ :ಕಾರು ಬಡಿದು ಪಾದಾಚಾರಿ ಸಾವು

Source: so news | By Manju Naik | Published on 19th April 2019, 11:34 PM | Coastal News | Don't Miss |

ಶಿರಸಿ: ನಗರದ ದೇವಿಕೆರೆ ಬಳಿ ಅತಿಯಾಗಿ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಗುದ್ದಿದ ಪರಿಣಾಮವಾಗಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ತಗುಲಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವು ಕಂಡ ಘಟನೆ ವರದಿಯಾಗಿದೆ.
ಅತಿಯಾದ ವೇಗದಿಂದ ಮತ್ತು ನಿಷ್ಕಾಳಜಿಯಿಂದ ವ್ಯಕ್ತಿಯೊರ್ವ ಕಾರನ್ನು ಚಲಾಗಿಸಿಕೊಂಡು ಬಂದು ಬೈಕ್‍ಗೆ ಡಿಕ್ಕಿ ಹೊಡೆದು ನಂತರ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಗುದ್ದಿದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇದಾಗಿದೆ.
ಎಸ್.ಬಿ.ಐ ಕಾಲೋನಿಯ ಗಂಗಾಧರ ಹೆಗಡೆ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ತಮ್ಮ ದಿನನಿತ್ಯದ ಕೆಲಸಕ್ಕೆ ತೆರಳುತ್ತಿರುವಾಗ ಕಾರು ಗುದ್ದಿ ಪಕ್ಕದಲ್ಲಿದ್ದ ಗಟಾರಕ್ಕೆ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕುರಿತು  ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಮುಂಡಗೋಡ: ಛತ್ರಪತಿ ಶಿವಾಜಿ ಎಲ್ಲ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದ : ಎಲ್.ಟಿ.ಪಾಟೀಲ್

ಎಲ್ಲ ಧರ್ಮಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದು ಧರ್ಮವನ್ನು ಉಳಿಸಿ ಸಂರಕ್ಷಣೆ ಮಾಡಿದ ಛತ್ರಪತಿ ಶಿವಾಜಿ. 17ನೇ ಶತಮಾನದಲ್ಲಿ ...