ಸಂಶಯಾಸ್ಪದ ಕೌಟುಂಬಿಕ ಕಲಹ ಪೊಲೀಸ್ ಇಲಾಖೆಗೆ ನೀಡಲು ಸಿಇಒ ಸೂಚನೆ

Source: so news | By MV Bhatkal | Published on 22nd June 2019, 12:07 PM | Coastal News | Don't Miss |

ಕಾರವಾರ: ಸಂಶಯಾಸ್ಪದ ಕೌಟುಂಬಿಕ ಕಲಹದಂತಹ ಯಾವುದೇ ಪ್ರಕರಣಗಳು ಸಾಂತ್ವನ ಕೇಂದ್ರಕ್ಕೆ ಬಂದರೆ ಶಿಶು ಅಭಿವೃದ್ಧಿ ಅಧಿಕಾರಿಗಳ ಮೂಲಕ ತಕ್ಷಣ ಪೊಲೀಸ್ ಇಲಾಖೆಗೆ ಶಿಫಾರಸು ಮಾಡುವಂತೆ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ಸಾಂತ್ವನ ಕೇಂದ್ರದ ಸಮಾಲೋಚಕರಿಗೆ ಸೂಚಿಸಿದ್ದಾರೆ.

ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ವರದಕ್ಷಿಣೆ ನಿರ್ಮೂಲನಾ ಜಿಲ್ಲಾ ಮಟ್ಟದ ಸಮಿತಿ ಹಾಗೂ ಸಾಂತ್ವನ ಕೇಂದ್ರಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು, ಸಾಂತ್ವನ ಕೇಂದ್ರಗಳಲ್ಲಿ ಮಹಿಳೆಯರಿಗೆ ಸಾಂತ್ವನ ನೀಡುವ ಸಂಬಂಧ ಸಮಲೋಚನೆಗಳನ್ನು ಮಾಡುವಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು. ಒಂದೊಮ್ಮೆ ಸಂಶಯಾಸ್ಪದ ಕೌಟುಂಬಿಕ ಕಲಹ, ವರದಕ್ಷಿಣೆ ಕಿರುಕುಳ ಪ್ರಕರಣವೆಂದು ಮೇಲ್ನೋಟಕ್ಕೆ ಗೊತ್ತಾದರೆ ತಕ್ಷಣ ಆ ಪ್ರಕರಣವನ್ನು ಪೊಲೀಸ್ ಇಲಾಖೆಗೆ ವರ್ಗಾಯಿಸಬೇಕು ಎಂದರು.

ನ್ಯಾಯಾಲಯ ಮೆಟ್ಟಿಲೇರಿದ ಪ್ರಕರಣಗಳನ್ನು ಹೊರತುಪಡಿಸಿ ತಮ್ಮ ಹಂತದಲ್ಲಿ ಬಗೆಹರಿಸುವ ಪ್ರಕರಣಗಳನ್ನು ಆದಷ್ಟು ವೇಗವಾಗಿ ಬಗೆಹರಿಸಿ ನೊಂದ ಮಹಿಳೆ ಕುಟುಂಬದೊಂದಿಗೆ ಬಾಳು ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಸಾಂತ್ವನ ಕೇಂದ್ರ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.

ಕೆಲವು ಪ್ರಕರಣಗಳನ್ನು ವಿಚಾರಣೆಗೆ ಬಾರದ ಕುಟುಂಬಗಳಿಗೆ ಸಮಾಲೋಚಕರು ಪೊಲೀಸ್ ಠಾಣೆಗೆ ಹೋಗುವ ಮುನ್ನ ಮೂರು ಬಾರಿ ನೋಟಿಸ್ ನೀಡಿ, ಆಗಲೂ ವಿಚಾರಣೆಗೆ ಬರದಿದ್ದರೆ ಸ್ಥಳೀಯ ತಾಲೂಕಿನ ಶಿಶು ಅಭಿವೃದ್ಧಿ ಅಧಿಕಾರಿಗಳ ಮೂಲಕ ಒಂದು ನೋಟಿಸ್ ಕೊಡಿಸಿ ಅಂತಿಮವಾಗಿ ಪೊಲೀಸ್ ಸಹಕಾರ ಪಡೆಯುವಂತೆ ಸಲಹೆ ಮಾಡಿದರು.

ಶಿಶು ಅಭಿವೃದ್ಧಿ ಅಧಿಕಾರಿಗಳು ಕನಿಷ್ಠ ತಿಂಗಳಿಗೊಮ್ಮೆಯಾದರೂ ಸಾಂತ್ವನ ಕೇಂದ್ರಕ್ಕೆ ಭೇಟಿ ನೀಡಿ ಪ್ರಕರಣಗಳ ಕುರಿತು ಮಾಹಿತಿ ಪಡೆದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಿಗೆ ವರದಿ ಸಲ್ಲಿಸಬೇಕು. ಅಲ್ಲದೆ ಶಿಶು ಅಭಿವೃಧ್ಧಿ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಪ್ರವಾಸ ಮಾಡಿದ ಬಗ್ಗೆ ಚಲನ ವಲನ ಪುಸ್ತಕದಲ್ಲಿ ನಮೂದಿಸಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ರಾಜೇಂದ್ರ ಬೇಕಲ್, ಡಿವೈಎಸ್‍ಪಿ ಮಾರಿಹಾಳ್ ಸೇರಿದಂತೆ ಜಿಲ್ಲೆಯ ಎಲ್ಲ ಶಿಶು ಅಭಿವೃದ್ಧಿ ಅಧಿಕಾರಿಗಳು, ಸಾಂತ್ವನ ಕೇಂದ್ರಗಳ ಸಮಾಲೋಚಕರು ಮತ್ತಿತರರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...