ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಅಭಿನಂದಿಸಿ-ಅರ್ಚನೆ ಮಾಡಿದ ಮಹಿಳೆಯರಿಗೆ ಕೈ ಮುಗಿದ ಮುಖ್ಯಮಂತ್ರಿಗಳು.

Source: SO News | By Laxmi Tanaya | Published on 14th July 2023, 9:42 PM | State News | Don't Miss |

ಸರ್ವಜನಾಂಗದ ಶಾಂತಿಯ ತೋಟ ಸೃಷ್ಟಿಸಿ ರಾಜ್ಯ ಕಟ್ಟುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ*


ಬೆಂಗಳೂರು  :  ಸಮಾನ ಅವಕಾಶಗಳಿಂದ ನೆಮ್ಮದಿ ಶಾಂತಿಯಿಂದ, ಸರ್ವಜನಾಂಗದ ಶಾಂತಿಯ ತೋಟವನ್ನು ಸೃಷ್ಟಿಸುವ ಮೂಲಕ ರಾಜ್ಯದಲ್ಲಿ ಕಟ್ಟುತ್ತೇವೆಂಬ ನಂಬಿಕೆಯಿಂದ ಜನರು ಕಾಂಗ್ರೆಸ್ ನ್ನು  ಅಧಿಕಾರಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರಿಸುತ್ತಾ ಮಾತನಾಡಿದರು.

 ರಾಜ್ಯದ ಜನರು ಯಾವತ್ತು ಬಿಜೆಪಿಯವರಿಗೆ ಆರ್ಶೀವಾದ ಮಾಡಿಲ್ಲ. ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದು, ಮ್ಯಾಂಡೇಟ್ ಇಲ್ಲದೆ ಆಡಳಿತ ನಡೆಸಿದ್ದಾರೆ  ಎಂದರು.

ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ : ಪ್ರಧಾನಿ ನರೇಂದ್ರ ಮೋದಿಯವರನ್ನು ಕರೆಸಿ ರೋಡ್ ಶೋ ಮಾಡಿಸುವುದು ಮತ್ತು ನಡ್ಡಾರವರು ನರೇಂದ್ರ ಮೋದಿಯವರನ್ನು ನೋಡಿ ಮತ ನೀಡಿ ಎಂದರೂ ಜನ ಮತ ನೀಡಲಿಲ್ಲ ಎಂದರು. ಇನ್ನು ಮುಂದೆ ಪ್ರಧಾನಿ ಮೋದಿಯವರ ಮೇಲೆ ಅವಲಂಬಿತರಾಗಬೇಡಿ. ಅವರು ಬಂದ ಕಡೆಯಲೆಲ್ಲಾ ಬಿಜೆಪಿ ಸೋತಿದೆ.  1980 ರಲ್ಲಿ ಜನತಾ ಲೋಕದಳದಿಂದ ಲೋಕಸಭಾ ಸ್ಪರ್ಧಿಯಾಗಿದ್ದೆ. ಆ ಸಂದರ್ಭದಲ್ಲಿ ಮಂಜುನಾಥ್ ಎಂದು ಕಾಂಗ್ರೆಸ್ ಅವರ ಅಭ್ಯರ್ಥಿಯಾಗಿದ್ದಾಗ, ಇಂದಿರಾ ಗಾಂಧಿ ಹೆಸರು ಹೇಳಿ, ಚುನಾವಣೆ ಗೆಲ್ಲುತ್ತೀರಿ ಎಂದು ಅವರಿಗೆ ಹೇಳಿದರು. ಆ ಕಾಲದಲ್ಲಿಯೂ ಕಾಂಗ್ರೆಸ್ ನವರಿಗೆ ಅಲ್ಲ, ಇಂದಿರಾಗಾಂಧಿ ಹೆಸರು ಹೇಳಿದರೆ ಚುನಾವಣೆ ಗೆಲ್ಲುತ್ತಿದ್ದರು. ಅಂತೆಯೇ, ಮೋದಿಯವರಿಗೂ ಹೆಸರು ಇತ್ತು. ಆದರೆ ಈಗ ಅದು ಮಂಕಾಗುತ್ತಿದೆ. ಪ್ರಧಾನಿ ಮೋದಿಯವರು ಜನಪ್ರಿಯ ನಾಯಕ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಈಗ ಮಂಕಾಗುತ್ತಿದೆ. ಮೇಲಿದ್ದವರು ಕೆಳಗೆ , ಕೆಳಗಿದ್ದವರು ಮೇಲೆ ಬರಬೇಕು. ಕರ್ನಾಟಕದಿಂದಲೇ ಬಿಜೆಪಿಯ ಅವನತಿ ಪ್ರಾರಂಭವಾಗಿದೆ ಎಂದರು.

ಧರ್ಮಗಳ ನಡುವೆ ಬೆಂಕಿಯಿಡುವುದು ನಮ್ಮ ಪರಂಪರೆಯಲ್ಲ :
ಕರ್ನಾಟಕದ ಒಂದು ಸಾವಿರ ವರ್ಷಗಳ ಪರಂಪರೆಯನ್ನು ಭಾಷಣದಲ್ಲಿ ಮಾಡಿಕೊಟ್ಟಿದ್ದಾರೆ.  ಕವಿರಾಜಮಾರ್ಗ ಶ್ರೀ ವಿಜಯ ದಲ್ಲಿ ಪರಧರ್ಮವನ್ನು , ಜೀವನ ಮಾರ್ಗಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದೇ ಆಸ್ತಿ ಮತ್ತುಒಡವೆ ಎಂದು ಅದರಲ್ಲಿ ತಿಳಿಸಿದ್ದಾರೆ.  ಅದೇ ಸಮಾಜದ ಆಸ್ತಿ ಎಂದು ಅಲ್ಲಿ ತಿಳಿಸಲಾಗಿದೆ. ನಮ್ಮ ದೇಶದಲ್ಲಿ ಧರ್ಮಗಳು  ಬೇರೆ ಇರಬಹುದು . ಆದರೆ ಎಲ್ಲ ಧರ್ಮಗಳ ಸಾರ ಒಂದೇ . ಮನುಷ್ಯರ ನಡುವೆ ಗೋಡೆ ಕಟ್ಟುವುದು, ಧರ್ಮಗಳ ನಡುವೆ ಬೆಂಕಿ ಇಡುವುದು ಅಮಾನವೀಯವಾದುದು. ಅದು ನಮ್ಮ ಪರಂಪರೆ ಅಲ್ಲ.  ಎಲ್ಲರದರಲ್ಲೂ  ವೈರುಧ್ಯಗಳಿದ್ದರೂ , ಏಕತೆಯನ್ನು ಕಾಣಬೇಕು. ಅದರಲ್ಲಿ ನಂಬಿಕೆ ಇಟ್ಟವರು ನಾವು. ಯಾವುದು ಒಂದು ಧರ್ಮ, ಜಾತಿಗೆ ಅಂಟಿಕೊಂಡವರಲ್ಲ ಎಂದರು.

ಜಾತ್ಯಾತೀತೆಯ ಸಿದ್ಧಾಂತಕ್ಕೆ ಕಾಂಗ್ರೆಸ್ ಬದ್ಧ : ಎಲ್ಲ ಧರ್ಮ, ಜಾತಿ, ಆಚಾರಗಳನ್ನು ಗೌರವಿಸುತ್ತೇವೆ. ಮನುಷ್ಯ ಜಾತಿ ತಾನೊಂದೆ ವಲಂ ಎಂದು  ಆದಿಕವಿ ಪಂಪ ಹೇಳಿದರು.  ನಾವೆಲ್ಲರೂ ಮಾನವತಾವಾದಿಗಳು. ಇದೇ ನಮ್ಮ ಸಂವಿಧಾನದಲ್ಲಿರುವದರಿಂದ , ಸಂವಿಧಾನದ ಹೊರತಾಗಿ ಬೇರೆ ಯಾವುದಕ್ಕೂ ತಲೆಬಾಗುವುದಿಲ್ಲ. ಈ ಸಿದ್ದಾಂತಕ್ಕೆ ಕಾಂಗ್ರೆಸ್ ಪಕ್ಷ ಬದ್ಧತೆಯಾಗಿದೆ. ಇದನ್ನೇ ಜಾತ್ಯಾತೀತೆ ಎಂದು ಸಂವಿಧಾನ ತಿಳಿಸಿದೆ. ಭಾರತ ದೇಶದಲ್ಲಿ 142 ಕೋಟಿ ಜನತೆ ಇದೆ.  ಅಷ್ಟು ಜನರೆಲ್ಲರೂ ಒಂದೇ , ನಾವೆಲ್ಲಾ ಭಾರತೀಯರೇ . ಯಾರದೋ ಸ್ವಾರ್ಥಕ್ಕಾಗಿ ಜಾತಿ ಮಾಡಲ್ಪಟ್ಟಿತ್ತು. 850 ವರ್ಷಗಳ ಹಿಂದೆಯೆ ಬಸವಣ್ಣನವರು ಹೇಳಿದಂತೆ , ಕಾಯಕ ಮತ್ತು ದಾಸೋಹ.  ವೃತ್ತಿಯಲ್ಲಿ ಯಾರು ಮೇಲೂ ಅಲ್ಲ  ಕೀಳೂ ಅಲ್ಲ.  ಅನುಭವ ಮಂಟಪ  ಅಲ್ಲಿಂದಲೇ ಬಂದಿದ್ದು .  ವಿಧಾನಮಂಡಲದ ಪರಿಕಲ್ಪನೆ ಅಲ್ಲಿಂದಲೇ ಬಂದಿದೆ.  ಜಾತಿ ಪದ್ದತಿಯಲ್ಲಿ ಮೇಲೊಬ್ಬ , ಕೆಳಗೊಬ್ಬ ಎಂಬ ಬೇಧಭಾವ ಇದೆ.  Vertical society ಯನ್ನು   horizontal society  ಯಾಗಿ ಮಾಡಬೇಕು.  ಮನುಷ್ಯರನ್ನು ಮೇಲೆ ಕೆಳಗೆ ಮಾಡಬಾರದು , ಎಲ್ಲರೂ ಸಮಾನಾಗಿರಬೇಕು  ಎಂದರು.

ಮನುಷ್ಯ – ಮನುಷ್ಯರ ನಡುವೆ ಗೋಡೆ ಕಟ್ಟಬಾರದು : ಬಿಜೆಪಿಯವರಿಗೆ ಜಾತಿಯತೆ ಮಾಡಬೇಡಿ ಎಂದು ಬಹಳ ಬಾರಿ ಹೇಳಿದ್ದೇನೆ. ನಾವೇ , ನಮ್ಮ ಧರ್ಮವೇ ಶ್ರೇಷ್ಠ ಎನ್ನಬಾರದು. ಇದನ್ನು ಜನ ಒಪ್ಪಲ್ಲ. 5 ಚುನಾವಣೆಯಲ್ಲಿಯೂ ಜನ ನಿಮ್ಮನ್ನು ನಂಬಲ್ಲ. ಹಿಟ್ಲರ್ ಬಗ್ಗೆ ಮಾತನಾಡಿದರೆ ಬಿಜೆಪಿಯವರಿಗೆ ಯಾಕೆ  ಬೇಸರ?   ಹಿಟ್ಲರ್ ಒಬ್ಬ  ಮತಾಂಧ , ಬಿಜೆಪಿಯವರು ಅವನ ಪರವೇ ?    ಮನುಷ್ಯ – ಮನುಷ್ಯರ ನಡುವೆ ಗೋಡೆ ಕಟ್ಟಬಾರದು. ಜಾತಿ ನಡುವೆ ಬೆಂಕಿ ಹಚ್ಚಿದರೆ ಅದು ನಮ್ಮನ್ನೆ ಸುಡುತ್ತದೆ.  ನಮ್ಮ ಸಮಾಜ ಒಳಿತಿಗೆ ಏನು ಮಾಡಬೇಕು. ರಾಜಕೀಯವಾಗಿ, ಸಾಮಾಜಿಕವಾಗಿ ಅಸಮಾನತೆ ಇದ್ದು , ಅದನ್ನು ಹೋಗಲಾಡಿಸಬೇಕು.  1949 , ನವೆಂಬರ್ 29 ನಲ್ಲಿ ಅಂಬೇಡ್ಕರ್ ಅವರು ಐತಿಹಾಸಿಕ ಭಾಷಣ ಮಾಡಿದರು.  ನಾವು ಎಲ್ಲರಿಗೂ ಸಮಾನತೆ ನೀಡಿದ್ದೇವೆ. ಒಂದು ಮತ , ಒಂದು ಮೌಲ್ಯ ಎಂದಿದ್ದಾರೆ. ಆದರೆ  ಸಾಮಾಜಿಕವಾಗಿ , ಆರ್ಥಿಕವಾಗಿ ಅಸಮಾನತೆ ಇದೆ . ಪ್ರಜಾಪ್ರಭುತ್ವದ ಸೌಧ ಧ್ವಂಸವಾಗುತ್ತದೆ ಎಂದು ಆಗಲೇ ಎಚ್ಚರಿಕೆ ನೀಡಿದ್ದರು ಎಂದರು.  

ನಾವು ಜನರ ಜೇಬಿಗೆ ದುಡ್ಡು ಹಾಕುತ್ತಿದ್ದೇವೆ : ರಾಜ್ಯದಲ್ಲಿ ಸಮಾನತೆ, ಸಾಮರಸ್ಯ ಇರಬೇಕು.  ಉತ್ತರ ಯೂರೋಪ್ ದೇಶಗಳಲ್ಲಿ  Universal basic income ನ್ನು ಪಾಲಿಸುತ್ತಿದ್ದಾರೆ. ಅದಕ್ಕೆ ನಾವು ಜನರ ಜೇಬಿಗೆ ದುಡ್ಡು ಹಾಕುತ್ತಿದ್ದೇವೆ.  ಪಂಚ ಗ್ಯಾರೆಂಟಿಗಳ ಮೂಲಕ ಎಲ್ಲರಿಗೂ 5000 ರೂ. ಸಿಗುತ್ತದೆ.ಬಿಜೆಪಿಯವರು, ಅಕ್ಕಿ ಗೋಧಿ ಮೇಲೆ, ಹಾಲು ಮೊಸರು, ಪೆನ್ನು ಪೆನ್ಸಿಲ್ ಮೇಲೆ ಜಿಎಸ್ ಟಿ ಹಾಕುವ ಮೂಲಕ ಜೇಬಿನಿಂದ ಹಣ ಕಿತ್ತರು. ನಾವು ನೀಡುವ ಗೃಹ ಲಕ್ಷ್ಮಿ, ಗೃಹ ಜ್ಯೋತಿ , ಅನ್ನಭಾಗ್ಯ, ಶಕ್ತಿ, ಯುವನಿಧಿ ಗಳ ಮೂಲಕ ವರ್ಷಕ್ಕೆ ಸುಮಾರು 52,000 ಕೋಟಿಗೂ ಹೆಚ್ಚು ಖರ್ಚಾಗುತ್ತದೆ. ಜನರಿಗೆ ಮಾಹೆಯಾನ ಸುಮಾರು 5 ಸಾವಿರ ನೀಡಲಾಗುತ್ತವೆ. ಜನರ ಕೈಯಲ್ಲಿ ದುಡ್ಡು ಇದ್ದರೆ , ವ್ಯಾಪಾರ , ವಹಿವಾಟು ನಡೆಯುತ್ತದೆ. ಕರೋನಾ ಸಂದರ್ಭದಲ್ಲಿ ಜನರ ಕೈಯಲ್ಲಿ ದುಡ್ಡು ಇರದೇ ತೊಂದರೆ ಅನುಭವಿಸಿದರು.  ಗ್ಯಾರೆಂಟಿಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಿಗಳೇ ಹೇಳಿದ್ದಾರೆ. ಆದರೆ ನಾವು ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಹಾಗೂ ರಾಜ್ಯ ದಿವಾಳಿಯಾಗುವುದಕ್ಕೂ ಬಿಡುವುದಿಲ್ಲ ಎಂದರು.

ವಿರೋಧ ಪಕ್ಷದವರದು ಅವಿವೇಕದ ತರ್ಕ : 20 ಮೇ ರಂದು ಅಧಿಕಾರಕ್ಕೆ ಬಂದ ತಕ್ಷಣ , ಸರ್ಕಾರ 5 ಗ್ಯಾರೆಂಟಿಗಳಿಗೆ ತಾತ್ವಿಕ  ಅನುಮೋದನೆ ನೀಡಿತು.  ಜೂನ್ 8 ರಂದು ಯಾವ ಯೋಜನೆಗಳು ಯಾವಾಗ ಜಾರಿಯಾಗಬೇಕೆಂದೂ ನಿರ್ಧರಿಸಲಾಯಿತು. ಆಯವ್ಯಯದಲ್ಲಿ 5 ಗ್ಯಾರೆಂಟಿಗಳಿಗೂ ಹಣ ನಿಗದಿಪಡಿಸಲಾಗಿದೆ.  ಇಷ್ಟು ಹಣ ಎಲ್ಲಿಂದ ಬರುತ್ತದೆ , ರಾಜ್ಯ ಹೇಗೆ ನಡೆಸುತ್ತಾರೆ ಎಂದು ಟೀಕಿಸಿದರು.  ಗ್ಯಾರೆಂಟಿಗಳಿಗೆ ಷರತ್ತುಗಳನ್ನು ಹಾಕಿದ್ದಿರಿ ಎಂದು ಈಗ ಟೀಕಿಸುತ್ತಿದ್ದಾರೆ. ಷರತ್ತುಗಳಿಲ್ಲದೇ ಯೋಜನೆ ಜಾರಿ ಮಾಡಿ ಎಂದು ಹೋರಾಟ ಮಾಡಿದರು. ಗೃಹ ಜ್ಯೋತಿಯಡಿ ಎಲ್ಲರಿಗೂ 200 ಯೂನಿಟ್ ಕೊಡಿ ಎನ್ನುವುದು ಅವಿವೇಕದ ತರ್ಕ .  ಬಿಜೆಪಿಯವರು  7 ಜಿಲ್ಲೆಗಳಲ್ಲಿ ಮತಗಳನ್ನೇ ಪಡೆದಿಲ್ಲ.  ಬಿಜೆಪಿ ಮುಕ್ತ ಭಾರತವನ್ನು ಮಾಡುತ್ತೇವೆ ಎಂದು ನಾವು ಹೇಳುವುದಿಲ್ಲ. ಬಿಜೆಪಿಯವರು ಎಂದಿಗೂ ಅಧಿಕಾರಕ್ಕೆ ಬರಬಾರದು . ರಾಜ್ಯ ಅಭಿವೃದ್ಧಿ ಆಗಲ್ಲ. ಜನಪರ ಕೆಲಸಗಳು ಆಗಲ್ಲ. ದಲಿತರಿಗೆ , ಬಡವರಿಗೆ , ರೈತರಿಗೆ ನ್ಯಾಯ ಸಿಗುವುದಿಲ್ಲ. ಬಿಜೆಪಿಯವರು ವಿರೋಧಪಕ್ಷದಲ್ಲಿ ಸಕ್ರಿಯವಾಗಿದ್ದಾರೆ. ರಾಜ್ಯದ ಜನತೆಯ ನಿರೀಕ್ಷೆಗೆ ತಕ್ಕಂತೆ ಮಾತನಾಡುತ್ತೇನೆ. ನಮ್ಮ ಸರ್ಕಾರದಿಂದ ರಾಜ್ಯದ ಜನತೆ ಸಂತುಷ್ಟರಾಗಿದ್ದಾರೆ ಎಂದರು.

ಶಕ್ತಿ ಯೋಜನೆಗೆ ಧರ್ಮಸ್ಥಳದ ಧರ್ಮಾಧಿಕಾರಿಗಳ ಮೆಚ್ಚುಗೆ :
ಧರ್ಮಸ್ಥಳದ ಧರ್ಮಾಧಿಕಾರಿಯವರು ಪತ್ರ ಮುಖೇನ ಶಕ್ತಿ ಯೋಜನೆಯ ಮೂಲಕ ಮಹಿಳೆಯರು ಅಲ್ಲಿಗೆ ಬಂದು ಮುಖ್ಯಮಂತ್ರಿಗಳ ಹೆಸರಿನಲ್ಲಿ ಪೂಜೆ ಮಾಡಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ .  ಮಹಿಳಾ ಮೀಸಲಾತಿ ಹೆಚ್ಚಿಸಿದವರು ಕಾಂಗ್ರೆಸ್ ನವರು.  ಈಗ ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸರ್ಕಾರದಲ್ಲಿದ್ದು, ಬಿಜೆಪಿಯವರು ಅದನ್ನು ಮಾಡಿಸಲಿ  ಎಂದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...