ಗೋಕರ್ಣ ಮಹಾಬಲೇಶ್ವರ ದೇವಾಲಯದ ಹೊಣೆ ಇನ್ಮುಂದೆ ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿಗೆ. ರಾಮಚಂದ್ರಪುರ ಮಠಕ್ಕೆ ಹಿನ್ನಡೆ.

Source: SO News | By Laxmi Tanaya | Published on 19th April 2021, 8:41 PM | National News |

ನವದೆಹಲಿ : ‌ಉತ್ತರಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣದ ಪುರಾಣ ಪ್ರಸಿದ್ದ ಶ್ರೀ ಮಹಾಬಲೇಶ್ವರ ದೇವಾಲಯವನ್ನ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದ ಸಮಿತಿಗೆ ನೀಡುವಂತೆ ಸುಪ್ರಿಮಕೋರ್ಟ್ ಮಹತ್ವದ ಆದೇಶ ನೀಡಿದೆ

ಮುಜರಾಯಿ ಇಲಾಖೆಯ ಆಡಳಿತದಲ್ಲಿದ್ದ ದೇವಾಲಯವನ್ನು 2008ರ ಮೇ ತಿಂಗಳಿನಲ್ಲಿ ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಅಂದಿನ ಬಿ ಎಸ್ ಯಡಿಯೂರಪ್ಪನವರ ಬಿಜೆಪಿ ಸರ್ಕಾರ ನೀಡಿತ್ತು. ಇದಕ್ಕೆ ಗೋಕರ್ಣ ರಕ್ಷಣಾ ಸಮಿತಿ ವಿರೋಧ ವ್ಯಕ್ತಪಡಿಸಿತ್ತು. ಬಾಲಚಂದ್ರ ದೀಕ್ಷಿತ್ ಹಾಗೂ ಇತರರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 10 ವರ್ಷಗಳ ವಿಚಾರಣೆಯ ಬಳಿಕ 2018ರಲ್ಲಿ ಹೈಕೋರ್ಟ್ ವಿಭಾಗೀಯ ಪೀಠವು ರಾಮಚಂದ್ರಾಪುರ ಮಠದ ವಿರುದ್ಧ ತೀರ್ಪು ನೀಡಿತ್ತು. ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದಲ್ಲಿ ದೇವಸ್ಥಾನದ ನಿರ್ವಹಣೆಯನ್ನು ನೋಡಿಕೊಳ್ಳಲು ಸಮಿತಿ ರಚಿಸುವಂತೆ ಸರ್ಕಾರಕ್ಕೆ ಸೂಚಿಸಿತ್ತು. 

ಈ ತೀರ್ಪಿನ ವಿರುದ್ಧ ರಾಮಚಂದ್ರಾಪುರ ಮಠವು ಸುಪ್ರೀಂಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಹೀಗಾಗಿ ಸುಪ್ರಿಮಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಹೀಗಾಗಿ ದೇವಸ್ಥಾನವನ್ನು ಮತ್ತೆ ರಾಮಚಂದ್ರಾಪುರ ಮಠ ನಡೆಸಿಕೊಂಡು ಬಂದಿದೆ. ಪ್ರಕರಣದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಸಿಜೆಐ ಬೊಬ್ಡೆ ನೇತೃತ್ವದ ಪೀಠ ಸೋಮವಾರ ತಡೆಯಾಜ್ಞೆ ತೆರವುಗೊಳಿಸಿ ನಿವೃತ್ತ ನ್ಯಾಯಮೂರ್ತಿ  ಬಿ.ಎನ್.ಶ್ರೀಕೃಷ್ಣ ನೇತೃತ್ವದಲ್ಲಿ  ಸಮಿತಿ ರಚಿಸಿ, ಗೋಕರ್ಣ ಮಹಾಬಲೇಶ್ವರ ದೇವಾಲಯ ಆಡಳಿತದ ಉಸ್ತುವಾರಿಯನ್ನು ಸಮಿತಿಗೆ ವಹಿಸುವಂತೆ  ಆದೇಶಿಸಿದೆ.

ಸುಪ್ರಿಮ್ ಆದೇಶದಿಂದ ಅನುವಂಶೀಯ ಅರ್ಚಕರಿಂದ ಸಂಭ್ರಮಾಚರಣೆ
ಸುಪ್ರೀ‌ಂ ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಗೋಕರ್ಣದ ಅನುವಂಶೀಯ ಅರ್ಚಕರು, ದೇಗುಲದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು. ಸಾರ್ವಜನಿಕರಿಗೆ ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದ್ದಾರೆ.ಬ ಕೇವಲ ಗೋಕರ್ಣಕ್ಕಷ್ಟೇ ಅಲ್ಲ, ಇದು ನಾಡಿನ ಎಲ್ಲರಿಗೂ ಸಂದ ಜಯ ಎಂದು ಅನುವಂಶೀಯ ಅರ್ಚಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...