ಕೋವಿಡ್-19 ಲಾಕ್‍ಡೌನ್ ಸಂದರ್ಭದಲ್ಲಿ ಪೊಲೀಸರ ಕೊಡುಗೆ ಅಪಾರ: ಸಿಎಂ ಯಡಿಯೂರಪ್ಪ

Source: uni | By MV Bhatkal | Published on 21st June 2020, 12:34 AM | State News | Don't Miss |

 

ಬೆಂಗಳೂರು: ರಾಜ್ಯ ಪೊಲೀಸ್ ಪಡೆ ಅತ್ಯಂತ ವಿಶ್ವಾಸಾರ್ಹ ಮತ್ತು ದಕ್ಷ ಪೊಲೀಸ್ ಪಡೆ ಎಂದು ಇಡೀ ದೇಶದಲ್ಲಿ ಹೆಸರಾಗಿದ್ದು, ಕೋವಿಡ್ 19 ಸಂಕಷ್ಟ ಸಂದರ್ಭದಲ್ಲಿ ಪೊಲೀಸರು ಜೀವ ಲೆಕ್ಕೆಸದೇ ಕಾರ್ಯನಿರ್ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಪೊಲೀಸ್ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಹಾಗೂ ವೈರ್‍ ಲೆಸ್ ತರಬೇತಿ ಶಾಲೆಯನ್ನು ಆನ್‍ಲೈನ್ ವೀಡಿಯೋ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಪೊಲೀಸ್ ಸಿಬ್ಬಂದಿ ಮುಂಚೂಣಿಯ ಕೊರೋನಾ ಯೋಧರಿಗಾಗಿ ಕೆಲಸ ಮಾಡಿದ್ದಾರೆ. ತಮಗೆ ಸೋಂಕು ತಗಲುವ ಅಪಾಯವಿದ್ದರೂ, ತಮ್ಮ ಪ್ರಾಣದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಅಲ್ಲದೆ ಲಾಕ್‍ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ವಲಸೆ ಕಾರ್ಮಿಕರಿಗೆ ನೆರವು ನೀಡಿ, ಮಾನವೀಯತೆ ಮೆರೆದಿದ್ದಾರೆ. ನಿಸ್ವಾರ್ಥ ಸೇವೆ ಸಲ್ಲಿಸುವ ಪೊಲೀಸರ ಕುಟುಂಬದವರಿಗೆ ಅಗತ್ಯ ಸೌಲಭ್ಯ ಒದಗಿಸುವ ಹೊಣೆ ಸರ್ಕಾರದ್ದಾಗಿದ್ದು, ಇದನ್ನು ಸಮರ್ಪಕವಾಗಿ ನಿಭಾಯಿಸಲಿದೆ ಎಂದು ಹೇಳಿದರು.

ಪೋಲಿಸ್ ಪಡೆಗೆ ಆಧುನಿಕ ತಂತ್ರಜ್ಞಾನ ಕುರಿತು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ವೈರ್‍ಲೆಸ್ ಶಾಲೆಯನ್ನು ಆರಂಭಿಸಲಾಗಿದೆ. ಪೋಲೀಸ್ ಯೋಗಕ್ಷೇಮ ಸರ್ಕಾರದ ಆದ್ಯತೆಯಾಗಿದ್ದು, ಅವರಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಸುರಕ್ಷತೆ ಒದಗಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಅಂತೆಯೇ ಬದಲಾದ ಕಾಲಮಾನಕ್ಕೆ ತಕ್ಕಂತೆ ಪೋಲೀಸ್ ಇಲಾಖೆಯ ಸುಗಮ ಕಾರ್ಯ ನಿರ್ವಹಣೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು. ಪೊಲೀಸರು ಅಪರಾಧಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿ ಜನಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಆಶಿಸಿದರು.

ಬಿನ್ನಿಮಿಲ್, ಕೆಂಗೇರಿ, ಕೆ.ಆರ್.ಪುರಂ ಆಸ್ಟಿನ್ ಟೌನ್‍ನಲ್ಲಿ ಒಟ್ಟು 646 ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ, ಈ ಪೈಕಿ ಇಂದು 454 ವಸತಿ ಗೃಹಗಳು ಉದ್ಘಾಟನೆಗೊಂಡಿದೆ. ಪೊಲೀಸ್ ಆಯುಕ್ತರು, ಬೆಂಗಳೂರು ನಗರ ಘಟಕದ ಅಧೀನದಲ್ಲಿ 1,638 ವಸತಿ ಗೃಹ ಕಟ್ಟಡಗಳ ಕಾಮಗಾರಿಯು ಪ್ರಗತಿಯಲ್ಲಿದ್ದು, ಸದರಿ ಕಾಮಗಾರಿಗಳು ಪೂರ್ಣಗೊಂಡ ನಂತರ ಒಟ್ಟು 8,352 ವಸತಿ ಗೃಹಗಳು ವಾಸಕ್ಕೆ ಲಭ್ಯವಿದೆ ಎಂದು ಹೇಳಿದರು.
ಪೊಲೀಸ್ ವಸತಿ ಗೃಹಗಳನ್ನು ಪೊಲೀಸ್ ಆಯುಕ್ತರು, ಬೆಂಗಳೂರು ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗಳಿಗೆ ಮತ್ತು ಬೆಂಗಳೂರು ನಗರದಲ್ಲಿನ ವಿವಿಧ ಪೊಲೀಸ್ ಘಟಕಗಳ ಅಧಿಕಾರಿ, ಸಿಬ್ಬಂದಿಗಳಿಗೂ ಸಹ ಹಂಚಿಕೆ ಮಾಡಲಾಗುತ್ತಿದೆ. ಜೇಷ್ಟತಾ ಪಟ್ಟಿಯನ್ನು ಅನುಸರಿಸಿ ಗೃಹ ಹಂಚಿಕೆಯನ್ನು ಪಾರದರ್ಶಕವಾಗಿ ನಡೆಸಲು ಕ್ರಮ ವಹಿಸಲಾಗಿದೆ ಎಂದರು.
ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಮಾತನಾಡಿ, ಪೊಲೀಸರಿಗೆ ವಸತಿ ಸೌಲಭ್ಯ ಹೆಚ್ಚಿಸಲು ಕ್ರಮ ಕೈಗೊಳ್ಳುತ್ತಿದ್ದು, ಇದಕ್ಕೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕು. ಪೊಲೀಸರಿಗಾಗಿ ಒಟ್ಟು 10 ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದರು.
ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಇತರ ಅಧಿಕಾರಿಗಳು ಉಪಸ್ಥಿತರಿದ್ದರು

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...