ಪರಿಷತ್ತಿನಲ್ಲಿ ಇಂದು ಹಲವು ವಿಧೇಯಕಗಳ ಮಂಡನೆ

Source: sonews | By Staff Correspondent | Published on 23rd September 2020, 7:18 PM | State News |

ಬೆಂಗಳೂರು: “ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ 2020” ನ್ನು ಕಂದಾಯ ಸಚಿವರ ಆರ್.ಅಶೋಕ್ ಅವರ ಪರವಾಗಿ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದರು. ಕ್ಷೇತ್ರದ ಅಭಿವೃದ್ಧಿಗಾಗಿ 3 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಕೈಗಾರಿಕಾ ವಿವಾದಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2020ನ್ನು ಕಾರ್ಮಿಕ ಮತ್ತು ಸಕ್ಕರೆ ಸಚಿವ ಆರಬೈಲ್ ಹೆಬ್ಬಾರ ಶಿವರಾಮ್ ಮಂಡಿಸಿದರು.   ಈ ಸಂದರ್ಭದಲ್ಲಿ ಕಾಂಗ್ರೆಸ್ ಸದಸ್ಯರಾದ ನಾರಾಯಣಸ್ವಾಮಿ ಮಾತನಾಡಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವಂತೆ ತಿದ್ದುಪಡಿ ಮಾಡಿ ಅಂಗೀಕರಿಸಬೇಕೆಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಮುಂದುವರೆದು ಮಾತಾನಾಡಿದ ವಿಧಾನಪರಿಷತ್ ಸದಸ್ಯೆ ಡಾ: ತೇಜಸ್ವಿನ ಗೌಡ ಅವರು ಕೈಗಾರಿಕೆಗಳಿಗೆ ಕೃಷಿ ಭೂಮಿಯನ್ನು ನೀಡದೆ, ಬಂಜರು ಭೂಮಿಯನ್ನು ಅಭಿವೃದ್ಧಿಗಾಗಿ ನೀಡಬೇಕು.  ಖಾಸಗಿ ಸಂಸ್ಥೆಯವರಿಗೆ ನೀಡಿದಾಗ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡುವುದರೊಂದಿಗೆ ಉದ್ಯೋಗ ಮತ್ತು ಜೀವನಕ್ಕೆ  ಭದ್ರತೆ ಒದಗಿಸಬೇಕೆಂದು ಒತ್ತಾಯಿಸಿದರು.   
ಇದೇ ಸಂದರ್ಭದಲ್ಲಿ ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ 2020, ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ 2020, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃಧ್ಧಿ) ವಿಧೇಯಕ (ತಿದ್ದುಪಡಿ) 2020ನ್ನು ಅಂಗೀಕರಿಸಲಾಯಿತು. 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...