ಯುವಕರಿಂದಲೇ ದೇಶದ ಬದಲಾವಣೆ ಸಾಧ್ಯ -ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್

Source: SO News | By Laxmi Tanaya | Published on 16th January 2023, 10:51 PM | State News | Don't Miss |

ಧಾರವಾಡ : ಧಾರವಾಡ ಕೃಷಿ ವಿಶ್ವ ವಿದ್ಯಾಲಯದ  ಸಭಾ ಭವನದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಯುವ ಜನೋತ್ಸವ ಸಮಾರೋಪ ಸಮಾರಂಭದಲ್ಲಿ ಕೇಂದ್ರ ಯುವ ಸಬಲೀಕರಣ ಇಲಾಖೆ ಹಾಗೂ ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಮಾತನಾಡಿ, ಧಾರವಾಡದಲ್ಲಿ ನಡೆದ 26ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ ದೇಶದ ವಿವಿಧದೆಯಿಂದ ಆಗಮಿಸಿ ಪಾಲ್ಗೊಂಡು ಯಶಸ್ವಿಗೊಳಿಸಿದ್ದಿರಿ, ತಮಗೆಲ್ಲ ಅಭಿನಂದನೆಗಳು ಎಂದರು. 

26ನೇ ರಾಷ್ಟ್ರೀಯ ಯುವ ಜನೋತ್ಸವ ಅತ್ಯಂತ ಯಶಸ್ವಿಗೊಂಡಿದೆ. ಹಸಿರು ಮಯವಾದ ಕಾರ್ಯಕ್ರಮ ಮತ್ತು ಪ್ಲಾಸ್ಟಿಕ್ ಮುಕ್ತ ಸಮಾರಂಭ ಇದಾಗಿದೆ. ನಿಮ್ಮಲ್ಲಿನ ಅನುಭವ, ಜ್ಞಾನ ಕೌಶಲ ಹಂಚಿಕೊಳ್ಳಲು ಇದೊಂದು ಉತ್ತಮ ವೇದಿಕೆಯಾಗಿದೆ. 
ಪ್ರಧಾನಿಗಳು ಹೇಳಿದಂತೆ ದೇಶದ ಯುವ ಜನರ ಕೈಯಲ್ಲಿ ದೇಶದ ಗುರಿ ಶಕ್ತಿ ಅಡಗಿದೆ ಅದು ಸರಿಯಾದ ದೃಷ್ಟಿಯೆಡೆಗೆ ಸಾಗಬೇಕಿದೆ ಎಂದರು.

ಕೋವಿಡ್ ಸಂದರ್ಭದಲ್ಲಿ ದೇಶದ ಆರ್ಥಿಕ ಮಟ್ಟ ಸಂಪೂರ್ಣ ಸ್ತಬ್ದವಾದರು ಹೆದರದೇ ರಾಷ್ಟ್ರದ ಜನರ ಜೀವನಕ್ಕಿಂತ ಜೀವ ಮುಖ್ಯವೆಂದು ಸೋಂಕು ನಿಯಂತ್ರಣಕ್ಕಾಗಿ ಕಠಿಣ ಕ್ರಮ ಕೈಗೊಳ್ಳಲಾಯಿತು. ನಂತರ ದೇಶವಾಸಿಗಳಿಗೆ ಉಚಿತ ಲಸಿಕೆ ನೀಡಿದರು.

ಸ್ಟಾರ್ಟ್ ಅಪ್, ಡಿಜಿಟಲ್ ಇಂಡಿಯಾ, ಆತ್ಮ ನಿರ್ಭರ ಭಾರತ ಯೋಜನೆಗಳನ್ನು ಜಾರಿಗೊಳಿಸಿ, 80 ಸಾವಿರ ಕಂಪನಿಗಳಿಗೆ ಯುನಿಕಾರ್ನ್ ಬ್ರಾಂಡ್ ಲಭಿಸಿದೆ. ಇದರಿಂದ ರಕ್ಷಣಾ ಕ್ಷೇತ್ರದಲ್ಲಿ 400 ಉತ್ಪನ್ನಗಳನ್ನು ದೇಶದಲ್ಲಿಯೇ ಉತ್ಪಾದನೆ ಮಾಡಲು ಸಾಧ್ಯವಾಗಿದೆ ಎಂದರು.

ಈ ಯುವ ಜನನೋತ್ಸವದಲ್ಲಿ ಪ್ರಥಮಬಾರಿಗೆ ಯುವ ಶೃಂಗ ಸಭೆ ಯಶ್ವಿಯಾಗಿದೆ. ಇದನ್ನು ಎಲ್ಲ ರಾಜ್ಯಗಳ ಕಾಲೇಜುಗಳಿಗೆ ವಿಸ್ತರಿಸಲಾಗುವುದು. ಸ್ವಚ್ಚ ಸುಂದರವಾದ ಭಷ್ಟಾಚಾರ ಮುಕ್ತ ಭಾರತ ನಿರ್ಮಾಣವಾಗಿದೆ ಎಂದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...