ಚುನಾವಣಾ ಅಕ್ರಮ ತಡೆಗೆ ಗೋವಾ ಜತೆ ಡಿಸಿ ಸೌಹಾರ್ದ ಸಭೆ

Source: so news | By MV Bhatkal | Published on 11th April 2019, 12:23 AM | Coastal News | Don't Miss |

ಕಾರವಾರ: ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತ ನೆರೆಯ ಗೋವಾ ರಾಜ್ಯದೊಂದಿಗೆ ಸೌಹಾರ್ದ ಸಭೆ ನಡೆಸಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಕಟ್ಟನಿಟ್ಟಿನಿಂದ ಪಾಲಿಸುವ ಸಂಬಂಧ ಕರ್ನಾಟಕದ ನೆರೆಯ ರಾಜ್ಯವಾಗಿರುವ ಗೋವಾದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ಕಾರವಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೌಹಾರ್ದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಈ ಸಭೆ ಅತ್ಯಂತ ಮಹತ್ವದ್ದಾಗಿದ್ದು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಉತ್ತರ ಕನ್ನಡ ಅಬಕಾರಿ ಇಲಾಖೆ, ಕೋಸ್ಟ್‍ಗಾರ್ಡ್ ಸೇರಿದಂತೆ ವಿವಿಧ ಇಲಾಖೆಗಳು ವಶಪಡಿಸಿಕೊಳ್ಳಲಾದ ಅಕ್ರಮ ಮದ್ಯ ಸರಬರಾಜು, ಕಾನೂನು ಉಲ್ಲಂಘಿಸಿ ಗೋವಾ ರಾಜ್ಯದ ಮದ್ಯವನ್ನು ಸಂಗ್ರಹದ ಮೇಲೆ ನಡೆಸಿದ ದಾಳಿ ಇತ್ಯಾದಿ ವಿಷಯಗಳನ್ನು ಚರ್ಚಿಸಲಾಯಿತು. ಅಲ್ಲದೆ, ಉತ್ತರ ಕನ್ನಡ ಗೋವಾದ ಗಡಿ ಜಿಲ್ಲೆಯಾಗಿರುವುದರಿಂದ ಗಡಿ ಜಿಲ್ಲೆಯ ಚೆಕ್‍ಪೋಸ್ಟ್‍ಗಳಲ್ಲಿಯೇ ಪ್ರಮುಖವಾಗಿ ಅಕ್ರಮಗಳನ್ನು ತಡೆಯಬೇಕಿದೆ. ಇದಕ್ಕೆ ಗೋವಾ ರಾಜ್ಯದ ಸಹಕಾರ ಬೇಕೆಂದು ಜಿಲ್ಲಾಧಿಕಾರಿ ಡಾ.ಹರೀಶ್‍ಕುಮಾರ್ ಸಭೆಯಲ್ಲಿ ತಿಳಿಸಿದರು.
ದಕ್ಷಿಣ ಗೋವಾದ ಹೆಚ್ಚುವರಿ ಡಿಸ್ಟ್ರಿಕ್ಟ್ ಕಲೆಕ್ಟರ್-1 ಅಗ್ನೆಲ್ ಫರ್ನಾಂಡಿಸ್ ಈಗಾಗಲೇ ಗೋವಾದಲ್ಲಿ ಕೂಡಾ ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಂಡಗಳನ್ನು ರಚಿಸಲಾಗಿದೆ ಹಾಗೂ ಈಗಾಗಲೇ ಅಕ್ರಮ ಮದ್ಯ ಮಾರಾಟ, ಸಾಗಾಟದ ಬಗ್ಗೆಯೂ ಪ್ರಕರಣಗಳನ್ನು ದಾಖಲಿಸಲಾಗಿದೆ. ವಿಶೇಷವಾಗಿ ಕರ್ನಾಟಕದ ಗಡಿ ಭಾಗದಲ್ಲಿ ತನಿಖಾ ತಂಡಗಳನ್ನು ಬಿಗಿಗೊಳಿಸಲಾಗಿದ್ದು ಕರ್ನಾಟಕದ ಪೊಲೀಸರು, ಅಬಕಾರಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲಾಗಿದೆ ಎಂದರು.
ಅಲ್ಲದೆ ಎರಡೂ ರಾಜ್ಯಗಳ ಈ ರೀತಿಯ ಮಾಹಿತಿ ವಿನಿಮಯ ಅತ್ಯಂತ ಅಗತ್ಯವಿತ್ತು. ಕರ್ನಾಟಕದಿಂದ ಇಂತಹ ಸಹಕಾರವನ್ನು ಗೋವಾ ರಾಜ್ಯ ಕೂಡಾ ಬಯಸಿತ್ತು ಎಂದೂ ಅವರು ಹೇಳಿದರು.
ಈವರೆಗೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಕೈಗೊಳ್ಳಲಾದ ಕ್ರಮಗಳ ಬಗ್ಗೆ ವಿವರ ನೀಡಿದ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ಅವರು ಚುನಾವಣಾ ನಂತರವೂ ಇಂತಹ ಸೌಹಾದರ್ ಸಭೆಗಳ ಅವಶ್ಯಕತೆ ಇದ್ದು ತಿಂಗಳಿಗೊಮ್ಮೆ ಸಭೆ ನಡೆಸುವ ಅಗತ್ಯವಿದ್ದು ಈ ಬಗ್ಗೆ ಸರ್ಕಾರದ ಗಮನಕ್ಕೆ ತರುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ವಿನಾಯಕ ಪಾಟೀಲ್ ಅವರು ಗೋವಾದಿಂದ ಅಕ್ರಮವಾಗಿ ಮಾದಕ ದ್ರವ್ಯಗಳನ್ನು ಸರಬರಜು ಆಗುತ್ತಿರುವ ಬಗ್ಗೆಯೂ ಮಾಹಿತಿಯಿದ್ದು ಗೋವಾ ರಾಜ್ಯದಲ್ಲಿ ಇದಕ್ಕೆ ಗಡಿವಾಣ ಹಾಕುವ ಅಗತ್ಯವಿದೆ ಎಂದರು.
ಸಭೆಯಲ್ಲಿ ಎರಡೂ ರಾಜ್ಯಗಳು ಕೈಗೊಂಡ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು.
ಉತ್ತರ ಕನ್ನಡ ಅಬಕಾರಿ ಉಪಾಯುಕ್ತ ಎಲ್.ವಿ.ಮಂಜುನಾಥ್, ದಕ್ಷಿಣ ಗೋವಾ ಅಬಕಾರಿ ಅಧೀಕ್ಷಕ ಪಿಯಾದೆದ್ ಫರ್ನಾಂಡಿಸ್, ದಕ್ಷಿಣ ಗೋವಾದ ಸಾರಿಗೆ ಉಪ ನಿರ್ದೇಶಕ ಪ್ರಕಾಶ್ ಅಜ್‍ವೆಡೊ,  ಕಾಣಕೋನ ತಹಸೀಲ್ದಾರ್ ಜಾನ್ ಫರ್ನಾಂಡಿಸ್,  ಕೋಸ್ಟ್‍ಗಾರ್ಡ್ ಕಮಾಂಡೆಂಟ್ ಎ.ಎಸ್.ನಂದ, ಉತ್ತರ ಕನ್ನಡ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶಾಲ್, ಆದಾಯ ತೆರಿಗೆ ನಿರೀಕ್ಷಕ ದಿನೇಶ್ ಕುಮಾರ್, ಅಬಕಾರಿ ನಿರೀಕ್ಷಕ ಪ್ರಮೋದ್ ಜುವೆಂಕರ್ ಉಪಸ್ಥಿತರಿದ್ದರು.
ಪ್ರೊಬೇಷನರ್ ಐಎಎಸ್ ಅಧಿಕಾರಿ ದಿಲೀಶ್ ಸಸಿ ಅವರು ವಂದಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...