2023ರ ಚುನಾವಣೆಗೆ ಜಿಲ್ಲಾಡಳಿತ ಸಿದ್ದ. ನೀತಿಸಂಹಿತೆ ಜಾರಿ.

Source: SO News | By Laxmi Tanaya | Published on 29th March 2023, 10:32 PM | Coastal News |

ಕಾರವಾರ : ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಬುಧವಾರ ಚುನಾವಣೆ ಆಯೋಗವು ನೀತಿ ಸಂಹಿತೆಯನ್ನು ಜಾರಿ ಮಾಡಿದ್ದು ಅದರಂತೆ ಸಕಲ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

 ಇಲ್ಲಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ  ರಾಜಕೀಯ ಪಕ್ಷಗಳ ಸಭೆಯಲ್ಲಿ ಮಾತನಾಡಿದ ಅವರು  ಚುನಾವಣೆ ನೀತಿ ಸಂಹಿತೆಯನ್ನು ಪಾಲನೆಯಲ್ಲಿ ಅಧಿಕಾರಿಗಳೊಂದಿಗೆ ರಾಜಕೀಯ ಪಕ್ಷಗಳ ಸಹಕಾರವು ಅತಿ ಅವಶ್ಯಕವಾಗಿರುತ್ತದೆ ಎಂದರು.

ರಾಜಕೀಯ ಪಕ್ಷಗಳು ಸಮಾರಂಭಗಳನ್ನು ಮಾಡುವಂತಹ ಸಂದರ್ಭದಲ್ಲಿ ಚುನಾವಣೆ ಅಧಿಕಾರಿಗಳಿಂದ ಪೂರ್ವಾನುಮತಿ  ಪಡೆದುಕೊಳ್ಳಬೇಕು  ಹಾಗೂ  ಜಾಹೀರಾತುಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸುವ ಮುಂಚಿತವಾಗಿ ಸಂಬಂಧಪಟ್ಟ ಚುನಾವಣೆ ಅಧಿಕಾರಿಗಳಿಂದ ಅನುಮತಿಯನ್ನು ಪಡೆದುಕೊಂಡು ಪ್ರಕಟಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 25 ಚೆಕ್ ಪೋಸ್ಟ್ ಗಳನ್ನು  ಸ್ಥಾಪಿಸಿದ್ದು  ಅಂತರ್ ರಾಜ್ಯ, ಅಂತರ್  ಜಿಲ್ಲಾ ಹಾಗೂ ಜಿಲ್ಲಾ ವ್ಯಾಪ್ತಿ ಒಳಗಡೆ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ  ಇಂತಹ ಚೆಕ್ ಪೋಸ್ಟ್ ಗಳಲ್ಲಿ ಹಣಕಾಸಿನ ವ್ಯವಹಾರಗಳಾಗಲಿ ಅಥವಾ ಮತದಾರರಿಗೆ ಆಮಿಷ ಒಡ್ಡುವಂತಹ ಪರಿಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ವಹಿಸಲಾಗುವುದು ಎಂದರು.

ರಾಜಕೀಯ ವ್ಯಕ್ತಿಗಳು ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವದನ್ನು ಕಡಿಮೆ ಮಾಡಿಕೊಳ್ಳುವುದು ಒಂದು ವೇಳೆ ಭಾಗವಹಿಸಿದ್ದಲ್ಲಿ ಪಕ್ಷದ ಕುರಿತು ಪ್ರಚಾರ ಮಾಡುವುದು ಕಂಡುಬಂದಲ್ಲಿ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜಕೀಯ ವ್ಯಕ್ತಿಗಳು ಸೋಶಿಯಲ್ ಮೀಡಿಯಾದಲ್ಲಿ ಭಾಗವಹಿಸುವಿಕೆಯನ್ನು ಆದಷ್ಟು ಕಡಿಮೆ ಮಾಡಿಕೊಳ್ಳಬೇಕು. ಈಗಾಗಲೇ ಸೋಶಿಯಲ್ ಮೀಡಿಯಾ ಸೆಲ್ ಆರಂಭಿಸಿದ್ದು ಇದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಎಂದರು.

80 ವರ್ಷ ಪೂರೈಸಿದ ಹಿರಿಯ ನಾಗರಿಕರಿಗೆ , ಅಂಗವಿಕಲರಿಗೆ  ಅಂಚೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ ಹಾಗೂ ಅವರ ಇಚ್ಛೆ ಅನುಸಾರವಾಗಿ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಜಯಂತ್ ಎಚ್ ವಿ, ಚುನಾವಣೆ ಶಿರಸ್ತೆದಾರ ಶೇಖ್, ಕಾಂಗ್ರೆಸ್ ಪಕ್ಷದಿಂದ ಕೆ . ಶಂಭು ಶೆಟ್ಟಿ , ಬಿಜೆಪಿ ಪಕ್ಷದಿಂದ ಮನೋಜ್ ಭಟ್ , ಜೆಡಿಎಸ್ ಪಕ್ಷದಿಂದ ಸಂದೀಪ್ ಬಂಟ್  ಉಪಸ್ಥಿತರಿದ್ದರು.

Read These Next

ಉತ್ತರಕನ್ನಡ ಜಿಲ್ಲೆಯಲ್ಲಿ ಗರ್ಭಿಣಿಯರ ಆರೋಗ್ಯದ ದತ್ತು ಯೋಜನೆಗೆ ಅಭೂತಪೂರ್ವ ಯಶಸ್ಸು

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರ ಆರೋಗ್ಯವನ್ನು ಸುರಕ್ಷಿತವಾಗಿ ಕಾಪಾಡುವ ದೃಷ್ಠಿಯಿಂದ, ಜಿಲ್ಲಾಧಿಕಾರಿ ...

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಕ್ಕಳ ಗುರುತು ಬಹಿರಂಗ ಪಡಿಸದೇ ಇರುವಂತೆ ಜಿಲ್ಲಾಧಿಕಾರಿ ಮನವಿ

ಒಂದು ವೇಳೆ ಪ್ರಕಟವಾದಲ್ಲಿ, ಪ್ರಕಟಿ ಪಡಿಸಿದವರ ವಿರುದ್ಧ, ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯ್ದೆ 2015, ತಿದ್ದುಪಡಿ ಕಾಯ್ದೆ ...