ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

Source: SO News | By Laxmi Tanaya | Published on 4th December 2021, 7:03 AM | State News | Don't Miss |

ಮಂಡ್ಯ- ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅಭ್ಯರ್ಥಿಗಳಿಗೆ ಹಾಗೂ ಏಜೆಂಟರುಗಳಿಗೆ  ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಏಜೆಂಟರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣೆ  ನೀತಿ ಸಂಹಿತೆ ಉಲ್ಲಂಘನೆ, ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆಯಾಗದಂತೆ ಹಾಗೂ ಇನ್ನಿತರ  ನಿಯಮಾವಳಿಗಳ  ಉಲ್ಲಂಘನೆಯಾಗದಂತೆ ಕ್ರಮವಹಿಸಿ ಎಂದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೈಲಜಾ ಮತದಾನದ ವಿಧಾನ, ಮತದಾನದ ಸಂದರ್ಭದಲ್ಲಿ ಜಾಗರೂಕತೆಯಿಂದ ವಹಿಸಬೇಕಾದ ವಿಧಾನ, ಮತದಾನದ ಕ್ರಮದ ಬಗ್ಗೆ ವಿವರಿಸಿದರು.

ಸಭೆಯಲ್ಲಿ   ಬಿಜೆಪಿ ಅಭ್ಯರ್ಥಿ ಬೂಕಹಳ್ಳಿ ಬಿ.ಸಿ‌ ಮಂಜು, ಬಿಜೆಪಿ ಪಕ್ಷದ ಚುನಾವಣಾ ಏಜೆಂಟ್ ಲಲಾಟಾಕ್ಷ , ಕಾಂಗ್ರೆಸ್‌ ಪಕ್ಷದ ಚುನಾವಣಾ ಏಜೆಂಟ್  ಮಂಜುನಾಥ್,ಜನತಾದಳದ ಚುನಾವಣಾ ಏಜೆಂಟ್ ಬಸವರಾಜು, ಪಕ್ಷೇತರ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...