ಫಲ ಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

Source: S.O. News Service | By MV Bhatkal | Published on 26th January 2020, 8:10 PM | Coastal News | Don't Miss |

ಕೋಲಾರ, : ನಂ. 176-4020 ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಹಾಗೂ ಕೃಷಿ ಇಲಾಖೆ ಕೋಲಾರ ಇವರ ವತಿಯಿಂದ ಹಮ್ಮಿಕೊಂಡಿದ್ದ ಫಲ-ಪುಷ್ಪ ಪ್ರದರ್ಶನ 2020 ಕ್ಕೆ ಅಬಕಾರಿ ಉದ್ಯಮಶೀಲತೆ,
ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ
ಹೆಚ್. ನಾಗೇಶ್ ಅವರು ಚಾಲನೆ ನೀಡಿದರು.ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿಧ ಸ್ಥಬ್ದ
ಚಿತ್ರಗಳ ಪ್ರದರ್ಶನ, ಡಾ. ಎಂ ಮರೀಗೌಡರ ಮರಳಿನ ಕೆತ್ತನೆ, ದೊಣ್ಣೆ ಮೆಣಸಿನಕಾಯಿ ಮನೆ, ತೋಟಗಾರಿಕೆ, ರೇಷ್ಮೆ,ಮೀನುಗಾರಿಕೆ ಇಲಾಖೆ ಹಾಗೂ ವಿವಿಧ ಇಲಾಖಾ ಮಳಿಗೆಗೆಳು,
ಸಮಗ್ರ ಪೀಡೆ ನಿರ್ವಹಣೆ ಪ್ರಾತ್ಯಕ್ಷತೆ,ಆಧುನಿಕ ಪದ್ಧತಿಯಲ್ಲಿ ಬೆಳೆಗಳ ಪ್ರಾತ್ಯಕ್ಷತೆ, ಹಸಿರು ಮನೆಯಲ್ಲಿ
ಇಂಗ್ಲೀಷ್ ಸೌತೆಕಾಯಿ, ಕೈತೋಟ ಮತ್ತು ತಾರಸಿ ತೋಟ, ಜೇನು ಸಾಕಣೆ ಪ್ರಾತ್ಯಕ್ಷತೆ, ಹೈಡ್ರೋಪೋನಿಕ್ಸ್ ಮಾದರಿ ಪ್ರದರ್ಶನ,ಹಣ್ಣು ಮತ್ತು ತರಕಾರಿಗಳಲ್ಲಿ ವಿವಿಧ ಕಲಾಕೃತಿಗಳ ಕೆತ್ತನೆ
ಮುಂತಾದವುಗಳನ್ನು ವೀಕ್ಷಿಸಿದರು.ಈ ಪ್ರದರ್ಶನದಲ್ಲಿ ತೋಟಗಾರಿಕೆ ಬೆಳೆಗಳ ಸಸ್ಯ ಸಂತೆ ಸಹ
ಆಯೋಜನೆ ಮಾಡಲಾಗಿದ್ದು, ಮಾವು, ಸೀಬೆ, ನೇರಳೆ, ಗೋಡಂಬಿ, ದಾಳಿಂಬೆ, ಅಂಜೂರ, ವಾಟರ್ ಆಪಲ್, ನುಗ್ಗೆ, ಕರಿಬೇವು, ಸೀತಾಫಲ, ಬೆಣ್ಣೆ ಹಣ್ಣು, ಬೆಟ್ಟದ ನೆಲ್ಲಿ, ನಿಂಬೆ, ಆರೆಂಜ್ ಹುಣಸೆ, ಚಕೋತ, ಹಲಸು ಹಾಗೂ ಅಲಂಕಾರಿಕ ಗಿಡಗಳು, ಕೈತೋಟಕ್ಕೆ ಬೀಜದ ಕಿಟ್ರಿ ಯಾಯಿತಿ ದರದಲ್ಲಿ ಮಾರಾಟಕ್ಕೆ ದೊರೆಯುತ್ತಿದ್ದು, ವಿವಿಧ ಇಲಾಖೆಗಳಿಂದ ಮಾರಾಟ ಮಳಿಗೆಗಳನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ಇವುಗಳ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.ಇದೇ ಸಂದರ್ಭದಲ್ಲಿ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದಿಂದ ಆಯ್ಕೆಯಾದ 10 ಜನ ಪ್ರಗತಿಪರ ರೈತರಿಗೆ 25,000 ರೂ ನಗದು ಬಹುಮಾನ ಹಾಗೂ ಪ್ರತಿ ತಾಲ್ಲೂಕು ಮಟ್ಟದಿಂದ ಆಯ್ಕೆಯಾದ ತಲಾ 5 ರೈತರಿಗೆ 10,000 ರೂ ಪ್ರೋತ್ಸಾಹ ಧನ
ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.ಇದೇ ಸಂದರ್ಭದಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ
ಸಂಸದರಾದ ಎಸ್ ಮುನಿಸ್ವಾಮಿ, ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಶ್ರೀನಿವಾಸಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಸಿ.ಎಸ್ ವೆಂಕಟೇಶ್, ಉಪಾಧ್ಯಕ್ಷರಾದ ಯಶೋಧ
ಕೃಷ್ಣಮೂರ್ತಿ, ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್, ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...