ಮಲ ಹೊರುವ ಪದ್ದತಿ ಇನ್ನು ಜೀವಂತ : ಹಿರೇಮನಿ ವಿಷಾದ

Source: sonews | By Staff Correspondent | Published on 26th August 2019, 10:57 PM | Coastal News | Don't Miss |

ಕಾರವಾರ: ಸರಕಾರ ಮಲ ಹೊರುವ ಪದ್ದತಿಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದರೂ ಸಹ ಇನ್ನು ಜೀವಂತವಾಗಿರುವುದನ್ನು ಕಂಡು, ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ವಿಷಾದ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿಂದು ಸ್ಥಳಿಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇತ್ತಿಚಿಗೆ ನಗರದ ಖಾಸಗಿ ಕಟ್ಟಡದ ಶೌಚಾಲಯ ಗುಂಡಿ ಸ್ವಚ್ಚಗೊಳಿಸುವಾಗ  ಪೌರಕಾರ್ಮಿಕ ಕೋಟಯ್ಯ ಪೆದ್ದಬಾಲಯ್ಯ ಬುನಾದಿ ಮೃತಪಟ್ಟಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದ್ದು, ಇಂತಹ ಪ್ರಕರಣಗಳಿಗೆ ಇನ್ನು ಮುಂದೆ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು. 

ಇಂತಹ ಪ್ರಕರಣಗಳು ಮರಕಳಿಸದಿರುವಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಶೌಚಾಲಯ ಗುಂಡಿ ಸ್ವಚ್ಚಗೊಳಿಸಲು ಪೌರಕಾರ್ಮಿಕ ನೇರವಾಗಿ ಇಳಿಯದಂತೆ ಹಾಗೂ ಸಾರ್ವಜನಿಕರು ಇಂತಹ ಕಾರ್ಯಗಳಿಗೆ ಪೌರಕಾರ್ಮಿಕರನ್ನು ನೇಮಿಸದಂತೆ ಜನ ಜಾಗೃತಿ ಮೂಡಿಸಬೇಕು. ಶೌಚಾಲಯ ಗುಂಡಿಗಳನ್ನು ಸ್ವಚ್ಚಗೊಳಿಸಲು ಜೆಟ್ಟಿಂಗ್ ಮಶೀನ್‍ಗಳನ್ನೇ ಬಳಸಬೇಕೆಂಬ ಕರಪತ್ರಗಳನ್ನು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳೊಂದಿಗೆ ಮನ-ಮನೆಗಳಿಗೆ ಹಂಚಬೇಕು.  ಇನ್ನು ಮುಂದೆ  ಮರಣ ಪ್ರಕರಣಗಳು ಕಂಡು ಬಂದಲ್ಲಿ ಕಟ್ಟಡದ ಮಾಲಿಕರೊಂದಿಗೆ ಸಂಬಂಧಿಸಿದ ಅಧಿಕಾರಿಯೂ ಸೆರೆಮನೆವಾಸ ಅನುಭವಿಸಬೇಕಾಗುವುದು ಎಂದು ತಿಳಿಸಿದರು. 
  
2022 ರೊಳಗಾಗಿ ಸಪಾಯಿ ಕರ್ಮಚಾರಿಗಳಿಗಾಗಿಯೇ ಸಮಾನ ಕೆಲಸಕ್ಕೆ ಸಮಾನ ವೇತನ, ಆರೋಗ್ಯ, ಸ್ವಂತ ಮನೆ ನಿರ್ಮಾಣ ಹಾಗೂ ಅವರ ಮಕ್ಕಳಿಗೆ ಶಿಕ್ಷಣ ಒದಗಿಸುವುದು ಆಯೋಗದ ಮುಖ್ಯ ಉದ್ದೇಶವಾಗಿದೆ.  

ಈ ಹಿನ್ನಲೆಯಲ್ಲಿ ಸಪಾಯಿ ಕರ್ಮಚಾರಿ ಅವಲಂಬಿತರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 25 ಲಕ್ಷ ರೂ ವರೆಗೆ ಸಾಲ, ವಸತಿ, ಆರೋಗ್ಯ ವಿಮೆ ಸೌಲಭ್ಯ ಹಾಗೂ ಮಕ್ಕಳಿಗೆ ಶಿಕ್ಷಣ ಕೊಡಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು, ಕೇಂದ್ರ ಹಾಗೂ ರಾಜ್ಯ ಸರಕಾರಗಳಿಂದ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ಎಲ್ಲ ಪೌರ ಕಾರ್ಮಿಕರಿಗೆ ತಲುಪಿಸಬೇಕೆಂದು ಸೂಚಿಸಿದರು. 

ಸಪಾಯಿ ಕರ್ಮಚಾರಿಗಳಿಗೆ ಯಾವುದೇ ರೀತಿಯ ಸೇವಾ ಭದ್ರತೆ ಇಲ್ಲ.   ಇವರನ್ನು ಖಾಯಂಗೊಳಿಸಿದರೆ ಮಾತ್ರ  ವಿಕಾಸಹೊಂದಲು ಸಾಧ್ಯವಾಗುತ್ತದೆ. ಈ ಬಗ್ಗೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳಲಾಗುವುದು.  ಗುತ್ತಿಗೆ ಆದಾರದಲ್ಲಿ ಕೆಲಸ ಮಾಡುತ್ತಿರುವ ಸಪಾಯಿ ಕರ್ಮಚಾರಿಗಳನ್ನು ಇನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.  

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಹರೀಶಕುಮಾರ ಕೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಮ್. ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜ, ಪೌರಾಯುಕ್ತ ಎಸ್. ಯೋಗೇಶ್ವರ, ಉಪವಿಭಾಗಾಧಿಕಾರಿ ಅಭಿಜೀನ್ ಸೇರಿದಂತೆ ಇತರರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...