ಗ್ರೀನ್ ಎಂಡ್ ಕ್ಲೀನ್ ಎನರ್ಜಿ ಘೋಷಣೆಯಡಿ ಕ್ಷಮತಾ ಮಹೋತ್ಸವ. ಇಂಡಿಯನ್ ಆಯಿಲ್ ಕಾರ್ಪೋರೇಶನ್ ನಿಂದ ಸೈಕ್ಲಾಥಾನ್

Source: SO News | By Laxmi Tanaya | Published on 1st February 2021, 6:31 PM | State News | Sports News | Don't Miss |

ಕಾರವಾರ: ನಗರದ  ಬೈತಖೋಲ್ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನ ಟರ್ಮಿನಲ್ ಆಶ್ರಯದಲ್ಲಿ ಸಂರಕ್ಷಣಾ ಕ್ಷಮತಾ ಮಹೋತ್ಸವದ ಅಂಗವಾಗಿ ರವಿವಾರ ಬೆಳಿಗ್ಗೆ ಕಾರವಾರ ನಗರದಲ್ಲಿ ಸೈಕೋಥಾನ್ ನಡೆಯಿತು.

ಕಾರವಾರ ಪೊಲೀಸ್ ಉಪಾಧೀಕ್ಷಕ ಅರವಿಂದ ಕಲಗುಜ್ಜಿ ಸೈಕ್ಲೋಥಾನ್‌ಗೆ ಚಾಲನೆ ನೀಡಿದರು. ನಗರದ ಮಾಲಾದೇವಿ ಕ್ರೀಡಾಂಗಣದಿಂದ ನಗರದ ಸವಿತಾ, ಸುಭಾಷ ಮತ್ತು ಬಿಲ್ಡ್ ಸರ್ಕಲ್, ಸಾಗಿ ಕಾಜುಬಾಗ ರಸ್ತೆ ಮೂಲಕ ಪುನಃ ಮಾಲಾದೇವಿ ಮೈದಾನಕ್ಕೆ ಸೈಕಲ್ ಪಟುಗಳು ವಾಪಸ್ಸಾದರು. ಸುಮಾರು 250 ರಷ್ಟು ಜನರು ಸೈಕ್ಲಾಥಾನಲ್ಲಿ ಪಾಲ್ಗೊಂಡಿದ್ದರು.

  ಪೆಟ್ರೋಲಿಯಂ ಉತ್ಪನ್ನಗಳು ವ್ಯರ್ಥವಾಗದಂತೆ ತಡೆಯುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪತ್ರಕರ್ತರು,  ವಿದ್ಯಾರ್ಥಿಗಳು, ಯುವಕ-ಯವತಿಯವರು  ಸೈಕಲ್ ತುಳಿಯುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎನ್. ಬಗಲಿ, ಐಓಸಿಯ ಚೀಪ್ ಟರ್ಮಿನಲ್ ಮ್ಯಾನೇಜರ್ ಶಕೀಲ್ ಅಝೀರ್, ಇನ್‌ಸ್ಪಿಸ್ತೂಶನಲ್ ಬುಸಿನೆಸ್ ಮ್ಯಾನೇಜರ್ ಶಂಕರ ಸುಬ್ಬಯ್ಯ, ಉತ್ತರ ಕನ್ನಡ ಸಹಾಯಕ ಮ್ಯಾನೇಜರ್ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

Read These Next

ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ

ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ...

ಮಂಗಳೂರು: ಮುಖ್ಯಮಂತ್ರಿಗೆ ಕೊಲೆ ಬೆದರಿಕೆ; ಹಿಂದೂ ಮಹಾಸಭಾ ರಾಜ್ಯ ಪ್ರ.ಕಾರ್ಯದರ್ಶಿ ಬಂಧನ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಬಹಿರಂಗವಾಗಿ ಕೊಲೆ ಬೆದರಿಕೆಯೊಡ್ಡಿದ ಪ್ರಕರಣದಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ...

ಐತಿಹಾಸಿಕ ಸ್ವರ್ಣ ಗೆದ್ದ ಸುಮಿತ್, ಅವನಿ; ಭಾರತಕ್ಕೆ ಒಂದೇ ದಿನ 2 ಚಿನ್ನ ಸಹಿತ ಐದು ಪದಕ

ಪ್ಯಾರಾಲಿಂಪಿಕ್ ಗೇಮ್ಸ್‌ನಲ್ಲಿ ಪ್ಯಾರಾಲಿಂಪಿಕ್ಸ್ ಅಂಟಿಲ್ ಎಫ್64 ಸ್ಪರ್ಧೆಯಲ್ಲಿ 68.55 ಮೀ.ದೂರಕ್ಕೆ * ಜಾವಲಿನ್ ಎಸೆದು ತನ್ನದೇ ವಿಶ್ವ ...

ಲಸಿಕಾ ಮೇಳದಲ್ಲಿ ಗುರಿ ತಲುಪಿದ ಉತ್ತರಕನ್ನಡ ಆರೋಗ್ಯ ಇಲಾಖೆ. ಯಶಸ್ಸಿಗೆ ಕಾರಣರಾದವರಿಗೆ ಡಿಸಿ ಅಭಿನಂದನೆ.

ಕಾರವಾರ : ದೇಶಾದ್ಯಂತ ನಡೆದ ಬೃಹತ್ ಕೋವಿಡ್ ಲಸಿಕಾ ಮೇಳದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ನೀಡಲಾದ 85000 ಗುರಿಯನ್ನು ತಲುಪಿಸುವಲ್ಲಿ ...

ಈ ಬಾರಿ ಅರ್ಥಪೂರ್ಣ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ನಿರ್ಧಾರ: ಡಾ. ಕೆ.ಸಿ ನಾರಾಯಣಗೌಡ

ಮಂಡ್ಯ : ಅಕ್ಟೋಬರ್ 9, 10 ಮತ್ತು 11 ರಂದು ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣ ದಸರಾ ಆಚರಣೆಗೆ ...