ಬೆಂಗಳೂರು: ದ್ವಿತೀಯ ಪಿಯು ರಿಪೀಟರ್‌ಗಳ ತೇರ್ಗಡೆಗೆ ಮನವಿ ಸರಕಾರದ ನಿಲುವು ಕೇಳಿದ ಹೈಕೋರ್ಟ್

Source: VB | By S O News | Published on 16th June 2021, 2:06 PM | State News |

ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡುವ ಸರಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ಪುನರಾವರ್ತಿತ(ರಿಪೀಟರ್) ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿಲುವು ತಿಳಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.

2020-21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸು ಮಾಡುವ ಸರಕಾರದ ಆದೇಶ ಪ್ರಶ್ನಿಸಿ ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್‌ನ ಎಸ್.ವಿ.ಸಿಂಗೇಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಪುನರಾವರ್ತಿತ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಕುರಿತು ಪರಿಶೀಲಿಸಿ ನಿಲುವು ತಿಳಿಸುವಂತೆ ರಾಜ್ಯ ಸರಕಾರಕ್ಕೆ ಸೂಚಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಆರ್.ಪಿ. ಸೋಮಶೇಖರಯ್ಯ ವಾದಿಸಿ,

 

2020-21ನೇ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಉತ್ತೀರ್ಣಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯು ಪಾಸು ಮಾಡಲು ಮುಂದಾಗಿದೆ. ಇದೇ ಸೌಲಭ್ಯವನ್ನು ಪುನರಾವರ್ತಿತ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು. ಇಲ್ಲದಿದ್ದರೆ ತಾರತಮ್ಯ ಮಾಡಿದಂತಾಗುತ್ತದೆ ಎಂದು ಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ, ಪ್ರಥಮ ಪಿಯು ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಉತ್ತೀರ್ಣಗೊಳಿಸುವ ಕುರಿತು ರಾಜ್ಯ ಸರಕಾರ ತನ್ನ ನಿಲುವು ತಿಳಿಸ ತನ್ನ ಬೇಕು ಎಂದು ಸೂಚಿಸಿ ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿತು.

ಅರ್ಜಿದಾರರ ಮನವಿ ಏನು?

2020-21 ಶೈಕ್ಷಣಿಕ ವರ್ಷದಲ್ಲಿ 7 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಬೇಕಿತ್ತು. ಆದರೆ, ಕೊರೋನ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೇ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸು ಮಾಡಲು ಸರಕಾರ ನಿರ್ಧರಿಸಿದೆ. ಪ್ರಥಮ ಪಿಯು ಪರೀಕ್ಷೆ ಅಂಕ ಪರಿಗಣಿಸಿ ಉತ್ತೀರ್ಣ ಮಾಡುವ ಸಂಬಂಧ ಜೂನ್ 3ರಂದು ರಾಜ್ಯ ಸರಕಾರ ನೋಟಿಫಿಕೇಷನ್ ಹೊರಡಿಸಿದೆ. ಆದರೆ, ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿ ಗಳಿಗೆ ಈ ಅನುಕೂಲ ಕಲ್ಪಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ. ರಾಜ್ಯದಲ್ಲಿ 95 ಸಾವಿರ ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಅವರನ್ನೂ ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡಬೇಕು. ಇಲ್ಲದಿದ್ದರೆ ಸರಕಾರದ ನೋಟಿಫಿಕೇಷನ್‌ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.


 

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!