ಕೋವಿಡ್ ಜನತೆ ಆತಂಕ ಪಡುವ ಅಗತ್ಯವಿಲ್ಲ. ಡಿ.2 ರಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರ ಭೇಟಿ : ಸಿಎಂ ಬಸವರಾಜ ಬೊಮ್ಮಾಯಿ

Source: SO News | By Laxmi Tanaya | Published on 1st December 2021, 7:58 PM | State News | Don't Miss |

ಹುಬ್ಬಳ್ಳಿ : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜನತೆ ಆತಂಕ ಪಡುವ ಅಗತ್ಯವಿಲ್ಲ. ನಾಳೆ ಡಿ.2 ರಂದು ನವದೆಹಲಿಗೆ ತೆರಳುತ್ತಿದ್ದು, ಕೇಂದ್ರ ಆರೋಗ್ಯ ಸಚಿವರನ್ನು ಭೇಟಿಯಾಗಿ  ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

 ಖಾಸಗಿ ಹಾಗೂ ಪಕ್ಷದ  ಕಾರ್ಯಕ್ರಮಗಳಲ್ಲಿ  ಭಾಗವಹಿಸಲು ಬುಧವಾರ ಬೆಳಿಗ್ಗೆ ಹುಬ್ಬಳ್ಳಿಗೆ ಆಗಮಿಸಿದ ಅವರು , ವಿಮಾನ ನಿಲ್ದಾಣದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

 ಬೆಂಗಳೂರು ಹಾಗೂ ಮಂಗಳೂರು ವಿಮಾನ ನಿಲ್ದಾಣಗಳಿಗೆ ಆಗಮಿಸುವ ವಿದೇಶಿ ಪ್ರಯಾಣಿಕರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೋವಿಡ್ ವರದಿ ನೆಗೆಟಿವ್ ಇದ್ದರೂ ಸಹ ಕನಿಷ್ಠ ಒಂದು ವಾರ ಕಾಲ ತಮ್ಮ ಮನೆಗಳಲ್ಲಿಯೇ ಇರಲು ಅಂತಹ ಪ್ರಯಾಣಿಕರಿಗೆ ಸೂಚಿಸಲಾಗಿದೆ. ಅವರ ಚಲನ ವಲನಗಳ ಮೇಲೆಯೂ ನಿಗಾವಹಿಸಲಾಗಿದೆ ಎಂದರು.

 ನಾಳೆ ಡಿಸೆಂಬರ್ 2 ರಂದು ನವದೆಹಲಿ ಪ್ರವಾಸ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ, ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್ ನಿರೋಧಕ ಮೊದಲ ಮತ್ತು ಎರಡನೇ ಡೋಸ್ ನೀಡಿ 6-7 ತಿಂಗಳುಗಳಾಗಿರುವುದರಿಂದ ಈಗ ಬೂಸ್ಟರ್ ಡೋಸ್ ನೀಡಬಹುದೇ ಎಂಬುದರ ಕುರಿತು ಚರ್ಚಿಸಲಾಗುವುದು. ಕೇರಳ ಗಡಿಯಲ್ಲಿ ಬಿಗಿ ಕ್ರಮಗಳನ್ನು ಜಾರಿ ಮಾಡಲಾಗಿದೆ.

 ಕಳೆದ ವಾರ ಧಾರವಾಡ ಎಸ್ ಡಿ ಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾಣಿಸಿಕೊಂಡ ಕೋವಿಡ್ ನಿಯಂತ್ರಿಸಲು ಆಸ್ಪತ್ರೆ ಸುತ್ತಮುತ್ತ 500 ಮೀಟರ್ ವ್ಯಾಪ್ತಿಯಲ್ಲಿನ ಸಾವಿರ ಜನರನ್ನೂ ಸೇರಿ, ಸುಮಾರು 7 ಸಾವಿರ ಜನರನ್ನು ತಪಾಸಣೆ ಮಾಡಲಾಗಿದೆ. ಅವರಲ್ಲಿ 306 ಜನರಲ್ಲಿ ಸೋಂಕು ದೃಢವಾಗಿದೆ. ಏಳು ದಿನಗಳ ನಂತರ ಮತ್ತೆ ಅವರನ್ನು ಪರೀಕ್ಷೆ ಮಾಡಿದಾಗ ಇಬ್ಬರಲ್ಲಿ ಮಾತ್ರ ಸೋಂಕು ಕಂಡು ಬಂದಿದೆ.

 ಕೋವಿಡ್ ಕಾರಣದಿಂದಾಗಿ ಹೊಸ ತಾಲೂಕುಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ವಿಳಂಬವಾಗಿದೆ. ಕಚೇರಿ ಸೇರಿದಂತೆ  ಮೂಲ ಸೌಕರ್ಯಗಳನ್ನು ಒದಗಿಸಲು ಕ್ರಮವಹಿಸಲಾಗುವುದು. ಕೋವಿಡ್ ನಿಯಂತ್ರಣಕ್ಕೆ ಮತ್ತೆ ಲಾಕ್ ಡೌನ್ ಮಾಡುವ ವಿಚಾರ ಇಲ್ಲ, ಆತಂಕ ಪಡಬೇಕಾಗಿಲ್ಲ. ಆರ್ಥಿಕ ಚಟುವಟಿಕೆಗಳಿಂದ ಜನತೆ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ವಿವರಿಸಿದರು.

Read These Next

ಯರಗುಪ್ಪಿ ಗ್ರಾಮ ಪಂಚಾಯತ ಪಿಡಿಓ ಅಮಾನತ್ತು. ಪಾರದರ್ಶಕ ತನಿಖೆಗೆ ಜಿಲ್ಲಾ ಪಂಚಾಯತ ಸಿಇಓ ಆದೇಶ

ಧಾರವಾಡ : ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮ ಪಂಚಾಯತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿಯು ಕರ್ತವ್ಯಲೋಪ ಮಾಡಿ, ಕರ್ನಾಟಕ ನಾಗರಿಕ ...

ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ): ಕಲಿಯುವ, ಕಲಿಸುವ, ವಿಧಾನಗಳು ಕುರಿತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಧಾರವಾಡ : ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ (ವಾಲ್ಮಿ)ಯಲ್ಲಿ ಕಲಿಯುವ, ಕಲಿಸುವ, ವಿಧಾನಗಳು ಕುರಿತು ಕಾರ್ಯಾಗಾರ ಗುರುವಾರ ಜರುಗಿತು.

ಸುಸಜ್ಜಿತ ಟ್ರಕ್ ಟರ್ಮಿನಲ್ ನಿರ್ಮಿಸಲು ಸೂಕ್ತ ಜಾಗ ಗುರುತಿಸಲು ಸೂಚನೆ: ಡಿ.ಎಸ್.ವೀರಯ್ಯ

ಶಿವಮೊಗ್ಗ : ಜಿಲ್ಲೆಯಲ್ಲಿ ಸುಸಜ್ಜಿತವಾದ ಟ್ರಕ್ ಟರ್ಮಿನಲ್ ನಿರ್ಮಿಸುವುದು ಅವಶ್ಯವಾಗಿದ್ದು ಶಿವಮೊಗ್ಗ ಸುತ್ತಮುತ್ತ ಸೂಕ್ತ ...

ತಿಂಗಳಾಂತ್ಯದಲ್ಲಿ ಕೋವಿಡ್ ಮೊದಲ ಡೋಸ್ ಪೂರ್ಣಗೊಳಿಸಲು ಮುಖ್ಯಮಂತ್ರಿಗಳ ಕಟ್ಟುನಿಟ್ಟಿನ ಸೂಚನೆ

ಮಂಗಳೂರು: ತಾಲೂಕಿನ ಉಳ್ಳಾಲ, ಕೋಟೆಕಾರು, ಸೋಮೇಶ್ವರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಇದೂವರೆಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆಯದೇ ...

ನಾರಾಯಣಗುರುಗಳ ಸ್ಥಬ್ಧಚಿತ್ರಕ್ಕೆ ಅವಕಾಶ ಕೋರಿ ದಕ ಜಿಲ್ಲಾ ಯುವ ಜೆಡಿಎಸ್‌ ವತಿಯಿಂದ ಪ್ರಧಾನಿಗೆ ಮನವಿ

ಮಂಗಳೂರು: ಬ್ರಹ್ಮ ಶ್ರೀ ನಾರಾಯಣ ಗುರುಗಳ ಮೂರ್ತಿ ಇರುವ ಸ್ಥಬ್ದ ಚಿತ್ರವನ್ನು ಕೇಂದ್ರ ಗಣರಾಜ್ಯೋತ್ಸವದ ಆಯ್ಕೆ ಸಮಿತಿ ...

ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರ ನಿರಾಕರಣೆ ಖಂಡಿಸಿ ಯುವ ಕಾಂಗ್ರೆಸ್ ಕಾಲ್ನಡಿಗೆ ಜಾಥಾ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇಂದ್ರ ಸರಕಾರ ಅವಕಾಶ ...