ದೇಶದಲ್ಲಿ 60 ದಿನಗಳಲ್ಲಿ ಅತಿ ಕಡಿಮೆ ಹೊಸ ಪ್ರಕರಣಗಳು

Source: PTI | By MV Bhatkal | Published on 6th June 2021, 6:38 PM | National News |

ನವದೆಹಲಿ:‘ದೇಶದಲ್ಲಿ 1,14,460 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದು 60 ದಿನಗಳಲ್ಲಿ ವರದಿಯಾದ ಅತಿ ಕಡಿಮೆ ಪ್ರಕರಣಗಳಾಗಿವೆ. ಇದರೊಂದಿಗೆ ದೈನಂದಿನ ಸೋಂಕು ದೃಢ ಪ್ರಮಾಣವು ಶೇಕಡ 5.62ಕ್ಕೆ ಇಳಿಕೆಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಭಾನುವಾರ ತಿಳಿಸಿದೆ.
‘ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 2,88,09,339ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ 2,677 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆಯೂ 3,46,759ಕ್ಕೆ ಹೆಚ್ಚಿದೆ. ಅಲ್ಲದೆ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಲಕ್ಷಕ್ಕಿಂತ ಕಡಿಮೆಯಿದೆ’ ಎಂದು ಸಚಿವಾಲಯವು ಹೇಳಿದೆ.
ಶನಿವಾರ 20,36,311 ‍ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ 36,47,46,522 ‍ಪರೀಕ್ಷೆಗಳನ್ನು ನಡೆಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆಯೂ 14,77,799ಕ್ಕೆ ಇಳಿದಿದ್ದು, ಇದು ಒಟ್ಟು ಪ್ರಕರಣಗಳ ಪೈಕಿ ಶೇಕಡ 5.13ರಷ್ಟು ಪಾಲನ್ನು ಹೊಂದಿದೆ. ಸತತ 13 ದಿನಗಳಿಂದ ಸೋಂಕು ದೃಢ ಪ್ರಮಾಣವು ಶೇಕಡ 10ಕ್ಕಿಂತ ಕಡಿಮೆಯಿದೆ. ದೇಶದ ಚೇತರಿಕೆ ಪ್ರಮಾಣವು ಶೇಕಡ 93.67ಕ್ಕೆ ಹೆಚ್ಚಿದರೆ, ಸಾವಿನ ಪ್ರಮಾಣವು ಶೇಕಡಾ 1.20 ರಷ್ಟಿದೆ.
ಈವರೆಗೆ ದೇಶದಲ್ಲಿ ಕೋವಿಡ್‌ ಲಸಿಕೆಯ 23,13,22,417 ಡೋಸ್‌ಗಳನ್ನು ನೀಡಲಾಗಿದೆ. ದೇಶದಲ್ಲಿ 3,46,759 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಪೈಕಿ ಮಹಾರಾಷ್ಟ್ರ (99,512), ಕರ್ನಾಟಕ(31,260),ತಮಿಳುನಾಡು(26,571), ದೆಹಲಿ(24,557), ಉತ್ತರ ಪ್ರದೇಶ( 21,151), ಪಶ್ಚಿಮ ಬಂಗಾಳ(16,152), ಪಂಜಾಬ್‌(15,009), ಚಂಡೀಗಡ (13,192) ಮಂದಿ ಸಾವಿಗೀಡಾಗಿದ್ದಾರೆ

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...