ಹಲ್ಲೆಯಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತ

Source: sonews | By Staff Correspondent | Published on 25th May 2020, 10:48 PM | State News |

ಶ್ರೀನಿವಾಸಪುರ: ತಾಲ್ಲೂಕಿನ ಗೌಡಹಳ್ಳಿ ಗ್ರಾಮದಲ್ಲಿ ಈಚೆಗೆ ನಡೆದ ಹಲ್ಲೆಯಲ್ಲಿ ಗಾಯಗೊಂಡ ವ್ಯಕ್ತಿ ಭಾನುವಾರ ಮೃತಪಟ್ಟಿದ್ದು, ಇದರಿಂದ ಆಕ್ರೋಶಗಗೊಂಡ ಮೃತ ವ್ಯಕ್ತಿಯ ಕುಟುಂಬಸ್ಥರು ಹಾಗೂ ಬೆಂಬಲಿಗರು ಆರೋಪಿಗಳ 4 ಮನೆಗಳಿಗೆ ಬೆಂಕಿ ಹಚ್ಚಿ, 7 ಬೈಕ್ ಹಾಗೂ 1 ಟ್ರಾಕ್ಟರ್‌ ಸುಟ್ಟುಹಾಕಿದ್ದಾರೆ.

ಮೇ.20 ರಂದು ನೀರಿನ ಬಿಲ್‌ ವಿಚಾರದಲ್ಲಿ ಗ್ರಾಮದ ವೆಂಕಟಕೃಷ್ಣಪ್ಪ ಹಾಗೂ ವೆಂಕಟರೆಡ್ಡಿ ಅವರ ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ ಗಾಯಗೊಂಡಿದ್ದ ವೆಂಕಟಕೃಷ್ಣಪ್ಪ (55) ಭಾನುವಾರ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆಯಲ್ಲಿ ವೆಂಕಟರೆಡ್ಡಿ ಮತ್ತು ಅವರ ಬೆಂಬಲಿಗರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ಇದ್ದು ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.

ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜಾಹ್ನವಿ, ಡಿವೈಎಸ್‌ಪಿ ನಾರಾಯಣಸ್ವಾಮಿ, ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ಗಳಾದ ಎನ್‌.ಕೆ.ರಾಘವೇಂದ್ರ ಪ್ರಕಾಶ್‌, ಆಂಜಿನಪ್ಪ, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗಳಾದ ಪ್ರದೀಪ್‌ ಸಿಂಗ್‌, ವಿಠಲ್‌ ತಳವಾರ್‌, ಶೃತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next