ಮಾಧ್ಯಮಗಳು ಸಾರ್ವಜನಿಕರಿಗೆ ಆತ್ಮವಿಶ್ವಾಸವನ್ನು ತುಂಬಿಸಬೇಕು: ಡಾ.ಎಂ.ವಿ.ವೆಂಕಟೇಶ್

Source: so news | Published on 14th November 2019, 12:15 AM | State News | Don't Miss |

ಮಂಡ್ಯ:- ಪ್ರಕೃತಿ ವಿಕೋಪವನ್ನು ಮಾನವೀಯ ದೃಷ್ಠಿಯಿಂದ ನೋಡಿ ವಿಕೋಪ ನಿಯಂತ್ರಣ ಮಾಡಲು ಸರ್ಕಾರದ ಜೊತೆಗೆ ಸಾರ್ವಜನಿಕರು, ಸಂಘ ಸಂಸ್ಥೆಗಳು ಹಾಗೂ ಮಾಧ್ಯಮದವರು ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು.
ನಗರದ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಡಳಿತ ತರಬೇತಿ ಸಂಸ್ಥೆ ಮೈಸೂರು ಹಾಗೂ ಮಂಡ್ಯ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಂಡ್ಯ ಹಾಗೂ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಕಾರದ ಸಹಯೋಗದಲ್ಲಿ “ವಿಕೋಪ ನಿರ್ವಹಣೆಯಲ್ಲಿ ಮಾಧ್ಯಮಗಳ ಪಾತ್ರ” ಕುರಿತಂತೆ ನಡೆದ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಆಸ್ತಿ ಪಾಸ್ತಿಗಳನ್ನು ಮತ್ತು ಸಾವನ್ನು ಆದಷ್ಟು ಕಡಿಮೆ ಮಾಡುವಂತಹ ಜವಾಬ್ದಾರಿ ಎಲ್ಲರಿಗೂ ಇದೆ. ವಿಕೋಪ ನಿರ್ವಹಣೆಯಲ್ಲಿ ಆಡಳಿತವನ್ನು ಹಿಡಿದಂತಹ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮಾಧ್ಯಮದವರ ಪಾತ್ರ ಬಹಳ ಮಹತ್ತರವಾಗಿ ಮತ್ತು ವಿಶೇಷತೆಯಿಂದ ಕೂಡಿದೆ. ಯಾವುದೇ ಒಂದು ಪ್ರಕೃತಿ ವಿಕೋಪವಾದರೆ ಸಾರ್ವಜನಿಕರಿಗೆ ಪ್ರಥಮವಾಗಿ ಸಂಪರ್ಕ ಸೇತುವೆಯಾಗಿ ಸೋಷಿಯಲ್ ಮಿಡಿಯಾ, ಎಲೆಕ್ಟ್ರಾನಿಕ್ ಮಿಡಿಯಾ ಮತ್ತು ಮುದ್ರಣ ಮಾಧ್ಯಮ ಕಾರ್ಯನಿರ್ವಹಿಸುತ್ತವೆ. ಹೀಗಾಗಿ ಮಾಧ್ಯಮಗಳು ಇಂತಹ ಸಂದರ್ಭದಲ್ಲಿ ಸಾರ್ವಜನಿಕರಿಗೆ ಆತ್ಮ ವಿಶ್ವಾಸವನ್ನು ತುಂಬಿಸುವಂತಹ ಮಹತ್ತರವಾದ ಕೆಲಸವನ್ನು ಮಾಡಬೇಕು ಎಂದು ತಿಳಿಸಿದರು.
ಸಮಾಜದಲ್ಲಿ ಆಗುವಂತಹ ಆಸ್ತಿ-ಪಾಸ್ತಿ ಮತ್ತು ಜೀವಹಾನಿಯನ್ನು ಯಾವ ರೀತಿ ನಿಯಂತ್ರಣ ಮಾಡಬೇಕು ಎಂಬುದರ ಬಗ್ಗೆ ಅಧಿಕಾರಿಗಳಲ್ಲಿ ಮತ್ತು ಸಂಘ ಸಂಸ್ಥೆಯವರಲ್ಲಿ ಜಾಗೃತಿ ಮೂಡಿಸುವುದರ ಮೂಲಕ ಕಾಲಾನುಕಾಲಕ್ಕೆ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಸೂಚನೆಯನ್ನು ನೀಡಬೇಕು. ಪ್ರಕೃತಿ ವಿಕೋಪವಾದಾಗ ಹೆಚ್ಚಿನ ಭಯದ ವಾತಾವರಣ ಸೃಷ್ಠಿಯಾಗಿರುತ್ತದೆ. ಇಂತಹ ಭಯದ ವಾತಾವರಣವನ್ನು ಮತ್ತಷ್ಟು ಹೆಚ್ಚು ಮಾಡದೆ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಬೇಕು. ಆ ಸಂದರ್ಭದಲ್ಲಿ ಭಯದ ವಾತಾವರಣವನ್ನು ಸೃಷ್ಠಿ ಮಾಡಿದರೆ ಅಲ್ಲಿ ಜೀವಕ್ಕೆ ಹಾನಿಯಾದಂತಹ ವ್ಯಕ್ತಿಗಳಿಗೆ, ಪ್ರಾಣಿಗಳಿಗೆ ಅಥವಾ ಸಾರ್ವಜನಿಕರಿಗೆ ತೊಂದರೆಯಾಗಿ ಅಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಅಡಚಣೆಯಾಗುತ್ತದೆ. ಆದ್ದರಿಂದ ಇಂತಹ ವೇಳೆಯಲ್ಲಿ ಸಾರ್ವಜನಿಕರಿಗೆ ವಿಶ್ವಾಸವನ್ನು ತಂದು ಕೊಡಬೇಕು ಎಂದು ಹೇಳಿದರು.
ಈ ಪ್ರಕೃತಿ ವಿಕೋಪ ಸ್ವಾಭಾವಿಕವಾಗಿ ಅಥವಾ ಮಾನವ ನಿರ್ಮಿತದಿಂದ ಉಂಟಾಗುತ್ತದೆ. ಇವುಗಳನ್ನು ನಿಯಂತ್ರಣ ಮಾಡಲು ಪೂರ್ವ ತಯಾರಿ ಮಾಡಿಕೊಂಡಿದ್ದರೆ, ನಾವು ಎಂತಹ ಸಂದಿಗ್ಧ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯ. ಒಂದು ಸಣ್ಣ ಉದಾಹರಣೆ ಹೇಳುವುದಾದರೆ, ಪ್ರತಿ ಸಲವು ಕೂಡ ಒರಿಸ್ಸಾ ಹಾಗೂ ಆಂಧ್ರಪ್ರದೇಶದಲ್ಲಿ ಸೈಕ್ಲೋನ್‍ನಿಂದ ಲಕ್ಷಾಂತರ ಜನರು ಕಷ್ಟಕ್ಕೆ ತುತ್ತಾಗಿ, ಸಾವಿರಾರು ಮನೆಗಳು ಹಾನಿಯಾಗುತ್ತವೆ. ಆದರೆ ಕಳೆದ ಬಾರಿ ಆದಂತಹ ಸೈಕ್ಲೋನ್ ನಿಂದ ಯಾವುದೇ ಮಾನವ ಹಾನಿಯಾಗದಂತೆ ನಮ್ಮ ದೇಶವು ಮುನ್ನೆಚ್ಚರಿಕೆವಹಿಸಿ ಎದುರಾಗುವಂತಹ ಸಂಕಷ್ಟವನ್ನು ಯಶಸ್ವಿಯಾಗಿ ನಿಯಂತ್ರಣ ಮಾಡಿದೆ. ಅದೇ ರೀತಿ ಕರ್ನಾಟಕದ ಕೊಡಗು ಬೆಳಗಾವಿ, ಹಾವೇರಿ ಹಾಗೂ ಮುಂತಾದ ಕಡೆಗಳಲ್ಲಿ ನೆರೆಯಿಂದಾದ ತೊಂದರೆಗಳಿಗೆ ಕರ್ನಾಟಕ ಸರ್ಕಾರ, ಸಾರ್ವಜನಿಕರು ಹಾಗೂ ಮಾಧ್ಯಮದವರು ಕೂಡ ಉತ್ತಮವಾಗಿ ಸ್ಪಂದಿಸಿ ವಿಕೋಪವನ್ನು ಯಶಸ್ವಿಯಾಗಿ ನಿಯಂತ್ರಣ ಮಾಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಟಿ.ಕೆ. ಹರೀಶ್, ಮೈಸೂರು ಆಡಳಿತ ತರಬೇತಿ ಸಂಸ್ಥೆಯ ಸಂವಹನ ಮತ್ತು ಐ.ಟಿ. ಅಧಿಕಾರಿಗಳಾದ ಡಾ.ದಿಲೀಪ್‍ಕುಮಾರ್, ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸಿದ್ದಸ್ವಾಮಿರವರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...