ವಿಷಪೂರಿತ ರಸಾಯನಿಕಗಳ ಬಳಕೆಗೆ ಕಡಿವಾಣ ಅಗತ್ಯ - ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ

Source: so news | Published on 18th January 2020, 11:58 PM | State News | Don't Miss |

ಧಾರವಾಡ : ಡಾ.ಸ್ವಾಮಿನಾಥನ್ ವರದಿ ಪ್ರಕಾರ ಕಬ್ಬನ್ನೂ ಸೇರಿ ವಿವಿಧ 26 ಬೆಳೆಗಳಿಗೆ ನಿಗದಿತ ಬೆಲೆ ನೀಡಲು ಶಿಫಾರಸ್ಸು ಮಾಡಲಾಗಿದೆ. ಇದನ್ನು ಅನುμÁ್ಠನಗೊಳಿಸಿ ರೈತರ ಹಿತಕಾಯುವ ಕಾರ್ಯ ಮಾಡಲು ಪ್ರಧಾನ ಮಂತ್ರಿಗಳು ಮುಂದಾಗಿದ್ದಾರೆ. ರೈತರು ಅತಿಯಾದ ವಿಷಪೂರಿತ ರಸಾಯನಿಕಗಳ ಬಳಕೆ ಕೈಬಿಟ್ಟು, ಸಾವಯವ ಪದ್ಧತಿ ಅಳವಡಿಕೆಗೆ ಆದ್ಯತೆ ನೀಡಿ ಆರೋಗ್ಯ ಮತ್ತು ಆರ್ಥಿಕ ಸಾಮಥ್ರ್ಯ ವೃದ್ಧಿಸಬೇಕು ಎಂದು ಉಪಮುಖ್ಯಮಂತ್ರಿ, ಸಹಕಾರ ಕೃಷಿ ಸಚಿವ ಹಾಗೂ ಕೃಷಿ ವಿವಿ ಸಹಕುಲಾಧಿಪತಿ ಲಕ್ಷ್ಮಣ ಸವದಿ ಹೇಳಿದರು.

ಕೃಷಿಮೇಳದಲ್ಲಿ ವಿವಿಧ ಪ್ರಕಟಣೆಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಪ್ರತಿವರ್ಷ ಸೆಪ್ಟಂಬರ್, ಅಕ್ಟೋಬರ್ ತಿಂಗಳಿನಲ್ಲಿ ಧಾರವಾಡ ಕೃಷಿಮೇಳ ನಡೆಯುತ್ತಿತ್ತು.ಈ ಬಾರಿ ನೆರೆ ಹಾಗೂ ಪ್ರವಾಹದ ಕಾರಣದಿಂದ ಮುಂದೂಡಲಾಗಿತ್ತು.ಕೃಷಿಮೇಳ ಆಚರಣೆ ಕೈಬಿಡುವುದು ಬೇಡ ಎಂಬ ಆಶಯದಿಂದ ಈಗ ಆಯೋಜಿಸಲಾಗಿದೆ.

ಬರಗಾಲದಿಂದ, ನೀರಿನ ಅಂತರ್ಜಲ ಮಟ್ಟದ ಕುಸಿತವಾಗಿರುವ ಭಾಗಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಯೋಜನೆ ರೂಪಿಸಿ, 800 ಕೋಟಿ ರೂ.ಗಳನ್ನು ಒದಗಿಸಲಾಗಿದೆ.ಬೆಳಗಾವಿ ,ವಿಜಯಪುರ,ಬಾಗಲಕೋಟ ಭಾಗಗಳ ಕಬ್ಬು ಬೆಳೆಗಾರರು ಮಣ್ಣಿನ ಆರೋಗ್ಯ ಕಾಪಾಡಲು ಒತ್ತು ನೀಡಬೇಕು. ಸಾವಯವ ಕೃಷಿಗೆ ಆದ್ಯತೆ ನೀಡಿದರೆ ಜಗತ್ತಿನ ಜನರ ಆರೋಗ್ಯ ಕಾಪಾಡಬಹುದು.ವಿಷಪೂರಿತ ಆಹಾರ ಸೇವನೆಯಿಂದ ಮಹಾರಾಷ್ಟ್ರದ ಒಂದು ಗ್ರಾಮದಲ್ಲಿ ಶೇ.32 ರಷ್ಟು ಜನ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.ಇದಕ್ಕೆ ಅತಿಯಾದ ವಿಷಕಾರಿ ರಸಾಯನಿಕಗಳ ಬಳಕೆಯೇ ಕಾರಣ ಎಂದು ಪರೀಕ್ಷೆಯಿಂದ ತಿಳಿದು ಬಂದಿದೆ.ಕೃಷಿ ಇಲಾಖೆಯ ಅಧಿಕಾರಿಗಳು ವಿಷಪೂರಿತ ರಸಾಯನಿಕಗಳ ಮಾರಾಟ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...