ರಾಜ್ಯದಲ್ಲಿ 1.78 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Source: Prajavani | Published on 9th August 2020, 11:55 PM | State News | Don't Miss |

 

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್‌‌ 08ರ ಸಂಜೆ 5 ಗಂಟೆಯಿಂದ ಆಗಸ್ಟ್‌‌ 09ರ ಸಂಜೆ 5ರ ವರೆಗೆ ಒಟ್ಟು 5,985 ಹೊಸ ಕೋವಿಡ್–19 ಪ್ರಕರಣಗಳು ದೃಢಪಟ್ಟಿದ್ದು, 107 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,78,087 ಆಗಿದ್ದು, ಸಾವಿನ ಸಂಖ್ಯೆ 3,198ಕ್ಕೆ ಏರಿಕೆಯಾಗಿದೆ. ಈವರೆಗೆ 93,908 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 80,973 ಪ್ರಕರಣಗಳು ಸಕ್ರಿಯವಾಗಿವೆ. 678 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 4,670 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 
ಇಂದು ಬೆಂಗಳೂರಲ್ಲಿ 22, ಮೈಸೂರಿನಲ್ಲಿ 12 ಸಾವು
ಅತಿ ಹೆಚ್ಚು ಸೋಂಕು (74,185) ಪ್ರಕರಣಗಳು ವರದಿಯಾಗಿರುವ ರಾಜಧಾನಿ ಬೆಂಗಳೂರಿನಲ್ಲಿ. ಇಂದು 22 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 1,240ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 12 ಜನರು ಸಾವಿಗೀಡಾಗಿದ್ದು, ಸಾವಿನ ಸಂಖ್ಯೆ 235ಕ್ಕೆ ಏರಿಕೆಯಾಗಿದೆ. ಇಲ್ಲಿ ಇದುವರೆಗೆ ಒಟ್ಟು 7,311 ಪ್ರಕರಣಗಳು ವರದಿಯಾಗಿವೆ.
ಕೋವಿಡ್19 ಮಾಹಿತಿ: 9ನೇ ಆಗಸ್ಟ್ 2020

ಒಟ್ಟು ಪ್ರಕರಣಗಳು: 1,78,087
ಮೃತಪಟ್ಟವರು: 3,198
ಗುಣಮುಖರಾದವರು: 93,908
ಹೊಸ ಪ್ರಕರಣಗಳು: 5,985
ಇಂದು ನಡೆಸಲಾದ ಪರೀಕ್ಷೆಗಳು

Read These Next

ನೂತನ ರಾಷ್ಟ್ರೀಯ ಶಿಕ್ಷಣ ನೀತಿ -2020ನ್ನು ಚಳಿಗಾಲದ ಅಧಿವೇಶನದಲ್ಲಿ ಚರ್ಚೆಗೆ ಒಳಪಡಿಸುವಂತೆ  ಎಸ್.ಐ.ಓ ರಾಜ್ಯಾಧ್ಯಕ್ಷ ನಿಹಾಲ್ ಕಿದಿಯೂರು ಸರ್ಕಾರಕ್ಕೆ ಆಗ್ರಹ

ಭಟ್ಕಳ:  ಒಕ್ಕೂಟ ವ್ಯವಸ್ಥೆಯ ಅಡಿಯಲ್ಲಿ ರಚಿತವಾಗಿರುವ ಪ್ರಜಾಪ್ರಭುತ್ವ ಭಾರತ ದೇಶದಲ್ಲಿ ಸರ್ಕಾರವು ಯಾವುದೇ ರೀತಿಯ ಕಾನೂನು ಅಥವಾ ...

ಉಡುಪಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಎನ್‌ಡಿಆರ್‌ಎಫ್ ಬಳಕೆ-ಗೃಹ ಸಚಿವ ಬೊಮ್ಮಾಯಿ

ಉಡುಪಿ: ಕಳೆದ ಎರಡು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕೆಲವು ...

ಶಿವಮೊಗ್ಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ, ಹೊಸ ರೈಲು ಸಂಪರ್ಕ ಮತ್ತು ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ...

ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಗಂಗಾಧರ ಹಿರೇಗುತ್ತಿ ಆಯ್ಕೆ

ಕೋಟ : ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪ್ರತಿ ವರ್ಷ ಮುಂಗಾರು ಪತ್ರಿಕೆಯ ಸಂಪಾದಕ ದಿ| ವಡ್ಡರ್ಸೆ ರಘುರಾಮ ಶೆಟ್ಟಿ ...