ದೇಶದಲ್ಲಿ ವಿರೋಧ ಪಕ್ಷ ದುರ್ಬಲವಾಗಿದೆ: ಟಿಕಾಯತ್

Source: PTI | By MV Bhatkal | Published on 10th June 2021, 9:02 PM | National News | Don't Miss |

ಗಾಜಿಯಾಬಾದ್ (ಉ.ಪ್ರದೇಶ): ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿದ ಒಂದು ದಿನದ ಬಳಿಕ ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್ ಒಕ್ಕೂಟದ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್, ದೇಶದ ಪ್ರತಿಪಕ್ಷಗಳು ದುರ್ಬಲವಾಗಿದೆ ಎಂದು ಆರೋಪಿಸಿದ್ದಾರೆ.
ನಾವು ರೈತರು ಬೀದಿಗಳಲ್ಲಿ ಕುಳಿತಿದ್ದೇವೆ, ಪ್ರತಿಪಕ್ಷಗಳು ಪ್ರಬಲವಾಗಿದ್ದರೆ ನಾವದನ್ನು ಮಾಡಬೇಕಾಗಿರಲಿಲ್ಲ. ಪ್ರತಿಪಕ್ಷಗಳು ಬಲಿಷ್ಠವಾಗಿರಬೇಕು. ಇದನ್ನೇ ದೀದಿ ಅವರಿಗೂ ತಿಳಿಸಿರುವುದಾಗಿ' ಹೇಳಿದ್ದಾರೆ.
ಮಮತಾ ಅವರನ್ನು ಭೇಟಿಯಾಗಲು ಕೇಂದ್ರದಿಂದ ಅನುಮತಿ ಪಡೆಯಲಾಗಿತ್ತೇ ಎಂಬುದನ್ನು ಕೇಳಿದಾಗ, ನಾನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯನ್ನು ಭೇಟಿಯಾಗಿದ್ದೇನೆ. ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆಯನ್ನಲ್ಲ. ನಾನು ಅಫ್ಗಾನಿಸ್ತಾನದ ಅಧ್ಯಕ್ಷರನ್ನು ಭೇಟಿ ಮಾಡಿ ಬಂದಿದ್ದೇನೆ. ಇದಕ್ಕಾಗಿ ಕೇಂದ್ರದ ಅನುಮತಿ ಬೇಕೇ? ಸಿಎಂ ಭೇಟಿಯಾಗಲು ವೀಸಾ ಅಗತ್ಯವಿದೆಯೇ?' ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ನೀತಿಗಳ ಬಗ್ಗೆ ನಾವು ಎಲ್ಲ ಮುಖ್ಯಮಂತ್ರಿಗಳನ್ನು ಭೇಟಿಯಾಗುತ್ತೇವೆ. ಉತ್ತರಾಖಂಡದಲ್ಲಿ ಬಿಜೆಪಿ ಸರ್ಕಾರವಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನಾವು ಅವರನ್ನು ಭೇಟಿಯಾಗುತ್ತೇವೆ. ಈ ವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿಲ್ಲ' ಎಂದು ತಿಳಿಸಿದ್ದಾರೆ.
ರಾಕೇಶ್ ಟಿಕಾಯತ್‌ ಮತ್ತು ಯುಧ್‌ವೀರ್ ಸಿಂಗ್ ನೇತೃತ್ವದ ರೈತ ಮುಖಂಡರೊಂದಿಗೆ ಬುಧವಾರ ಸಭೆ ನಡೆಸಿದ್ದ ಮಮತಾ ಬ್ಯಾನರ್ಜಿ, ‘ರೈತರ ಆಂದೋಲನಕ್ಕೆ ನಮ್ಮ ಬೆಂಬಲ ಇರುತ್ತದೆ’ ಎಂದು ಘೋಷಿಸಿದ್ದರು.

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...