ಫೆಲೆಸ್ತೀನ್ ಸಮಸ್ಯೆ-ಒಂದು ಅವಲೋಕನ' ವಿಚಾರ ಸಂಕಿರಣ ಇಸ್ರೇಲ್ ನರಮೇಧ ಅಂತರ್‌ರಾಷ್ಟ್ರೀಯ ಅಪರಾಧ: ಬಿ.ಟಿ.ವೆಂಕಟೇಶ್

Source: Vb | By I.G. Bhatkali | Published on 3rd November 2023, 8:27 AM | State News | National News |

ಬೆಂಗಳೂರು: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ನರಮೇಧ ಒಂದು ರೀತಿಯ ಅಂತರ್‌ ರಾಷ್ಟ್ರೀಯ ಅಪರಾಧವಾಗಿದೆ. ಸಿರಿಯಾ, ಕಾಂಬೋಡಿಯಗಳಲ್ಲಿ ನಡೆದ ಹತ್ಯೆಗಳಿಗೂ, ಈಗಿನ ಇಸ್ರೇಲ್ ನರಮೇಧಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಖ್ಯಾತ ವಕೀಲ ಬಿ.ಟಿ.ವೆಂಕಟೇಶ್ ಖಂಡಿಸಿದ್ದಾರೆ. ಗುರುವಾರ ನಗರದ ಕ್ಲೀನ್ ರಸ್ತೆಯ ಬಿಐಎಫ್‌ಟಿ ಸಭಾಂಗಣದಲ್ಲಿ ಸಾಲಿಡಾರಿಟಿ ಯೂತ್ ಮೂಮೆಂಟ್ ಕರ್ನಾಟಕ ಸಂಘಟನೆಯ ವತಿಯಿಂದ ನಡೆದ 'ಫೆಲೆಸ್ತೀನ್‌ ಸಮಸ್ಯೆ- ಒಂದು ಅವಲೋಕನ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಇಸ್ರೇಲ್ ಜನಾಂಗೀಯ ದ್ವೇಷವನ್ನು ಮೆರೆಯುತ್ತಿದೆ. ಇಂತಹ ಮನಸ್ಥಿತಿಯನ್ನು ಇಡೀ ಜಗತ್ತು ಖಂಡಿಸಬೇಕು ಎಂದರು.

ಚಿಂತಕ ಶಿವಸುಂದರ್ ಮಾತನಾಡಿ ಇಸ್ರೇಲ್ ಫೆಲೆಸ್ತೀನ್‌ನ ಅಸಹಾಯಕ, ಅಮಾಯಕ ನಾಗರಿಕರ ಮೇಲೆ ದಾಳಿ ನಡೆಸಿ ನರಮೇಧ ಮಾಡುತ್ತಿದೆ. ಇದಕ್ಕೆ ಅಮೆರಿಕ ಹಾಗೂ ಯೂರೋಪಿನ ಬಲಿಷ್ಠ ರಾಷ್ಟ್ರಗಳು ತಮ್ಮ ಸ್ವಾರ್ಥ ಜಿಯೊ-ಪೊಲಿಟಿಕಲ್ ಆಸಕ್ತಿಗಳಿಗಾಗಿ ಸಂಪೂರ್ಣ ಬೆಂಬಲ ನೀಡಿವೆ ಎಂದರು.

ಇಸ್ರೇಲ್ ನಡೆಸುತ್ತಿರುವ ಯುದ್ದದ ನಿಜವಾದ ಉದ್ದೇಶ ಫೆಲೆಸ್ತೀನ್ ರೈತಾಪಿಗಳ ಹಾಗೂ ಗಾಝಾ ನಿವಾಸಿಗಳ ನರಮೇಧ ನಡೆಸಿ ಫೆಲೆಸ್ತೀನನ್ನು ಕಬಳಿಸುವುದೇ ಆಗಿದೆ ಎಂಬುದರಲ್ಲಿ ಸಂದೇಹವಿಲ್ಲ ಎಂದು ಅವರು ವಿವರಿಸಿದರು.

ವಿಚಾರ ಸಂಕಿರಣದಲ್ಲಿ ಸಾಲಿಡಾರಿಟಿ ಯೂತ್ ಮೂಮೆಂಟ್ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಲಬೀದ್‌ಶಾಫಿ, ಜೆಐಎಚ್ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಮುಹಮ್ಮದ್ ಸಾದ್ ಬೆಳಗಾಮಿ ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...