ಹೊಸದಿಲ್ಲಿ: ಕನಿಷ್ಠ ಬೆಂಬಲ ಬೆಲೆ ವಿಷಯದಲ್ಲಿ ಹಸಿ ಸುಳ್ಳು ಹೇಳುತ್ತಿರುವ ಪ್ರಧಾನಿ; ರೈತ ಸಂಘದ ಟೀಕೆ

Source: VB | By JD Bhatkali | Published on 21st February 2021, 1:35 PM | National News |

ಹೊಸದಿಲ್ಲಿ: ಕೃಷಿ ಕಾಯ್ದೆಯ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಸಿ ಸುಳ್ಳುಗಳ ಮೂಲಕ ದೇಶದ ಜನತೆಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ಹೇಳಿದೆ.

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅತ್ಯುನ್ನತ ಹುದ್ದೆಯಲ್ಲಿರುವ, ದೇಶದಲ್ಲಿ ಉನ್ನತ ಅಧಿಕಾರ ಹೊಂದಿರುವ ವ್ಯಕ್ತಿ ಹಸಿ ಸುಳ್ಳು ಹೇಳುತ್ತಾ ದೇಶದ ಜನರ ದಾರಿ ತಪ್ಪಿಸಿ ರೈತರ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಎಐಕೆಎಸ್‌ನ ಮುಖಂಡ ಹನ್ನಾನ್ ಮೊಲ್ಲಾ ಶುಕ್ರವಾರ ಹೇಳಿದ್ದಾರೆ.

ಫೆಬ್ರವರಿ 8ರಂದು ರಾಜ್ಯಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ ಕನಿಷ್ಠ ಬೆಂಬಲ ಬೆಲೆ ಪದ್ಧತಿ ರದ್ದಾಗುವುದಿಲ್ಲ. ಕನಿಷ್ಠ ಬೆಂಬಲ ಬೆಲೆ ಇತ್ತು, ಈಗಲೂ ಇದೆ ಮತ್ತು ಮುಂದೆಯೂ ಇರಲಿದೆ ಎಂದು ಹೇಳಿಕೆ ನೀಡಿದ್ದರು. ಇದನ್ನು ಉಲ್ಲೇಖಿಸಿದ ಹನ್ನಾನ್, ವಾಸ್ತವದಲ್ಲಿ ಪ್ರಧಾನಿ ಸತ್ಯವನ್ನು ಮರೆಮಾಚಿ ಜನರನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ.

ಸ್ವಾಮಿನಾಥನ್ ವರದಿಯ ಶಿಫಾರಸುಗಳನ್ನು ಸರಕಾರ ಅನುಷ್ಠಾನಗೊಳಿಸುತ್ತದೆ ಎಂದು ಈ ಹಿಂದೆ ಭರವಸೆ ನೀಡಿದ್ದರೂ, ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಯಾವ ಪ್ರಯತ್ನವನ್ನೂ ನಡೆಸಿಲ್ಲ ಎಂದು ಆರೋಪಿಸಿದರು.

ಈಗ ರೂಪಿಸಿರುವ ಕನಿಷ್ಠ ಬೆಂಬಲ ಬೆಲೆ ಪ್ರತಿಫಲದಾಯಕವಾಗಿಲ್ಲ ಮತ್ತು ಕೇವಲ 6 ಶೇ. ರೈತರಿಗೆ ಮಾತ್ರ ಒದಗಿಸಲಾಗಿದೆ. ಇದರಲ್ಲಿ ಉತ್ಪಾದನಾ ವೆಚ್ಚದಲ್ಲಿ ಎಲ್ಲಾ ವೆಚ್ಚವನ್ನೂ ಸೇರಿಸಿಲ್ಲ. ಆದರೆ  ಸ್ವಾಮಿನಾಥನ್ ಆಯೋಗವು ಎಲ್ಲಾ ಉತ್ಪಾದನಾ ವೆಚ್ಚ ಹಾಗೂ 50 ಶೇ. ಹೆಚ್ಚುವರಿ ಮೊತ್ತವನ್ನು ಕನಿಷ್ಠ ಬೆಂಬಲ ಬೆಲೆಯಾಗಿ ಒದಗಿಸುವಂತೆ ಶಿಫಾರಸು ಮಾಡಿದೆ. ಈಗ ರೈತರಿಗೆ ನೀಡಲಾಗುತ್ತಿದೆ ಎಂದು ಪ್ರಧಾನಿ ಪ್ರತಿಪಾದಿಸುವ ಮೊತ್ತಕ್ಕಿಂತ 20 ಶೇ. ಕಡಿಮೆ ಮೊತ್ತ ರೈತರಿಗೆ ದೊರಕುತ್ತಿದೆ. ಅಲ್ಲದೆ ಕೇವಲ 60 ಶೇ. ರೈತರು, ಕೇವಲ ಎರಡು ಬೆಳೆಗಳಿಗೆ ಮಾತ್ರ ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನ ಪಡೆಯುತ್ತಿದ್ದಾರೆ. ಈಗಿರುವ ಮಾರುಕಟ್ಟೆ ವ್ಯವಸ್ಥೆಯಲ್ಲಿ ಎಲ್ಲಾ ರೈತರಿಗೂ ಮಾರುಕಟ್ಟೆಯವರು ರೂಪಿಸಿದ ಕನಿಷ್ಠ ಬೆಂಬಲ ಬೆಲೆಯ ಪ್ರಕಾರ, 23 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ದೊರಕುತ್ತಿದೆ ಎಂದವರು ಹೇಳಿದ್ದಾರೆ.

Read These Next

ಗೋಕರ್ಣ ಮಹಾಬಲೇಶ್ವರ ದೇವಾಲಯದ ಹೊಣೆ ಇನ್ಮುಂದೆ ನಿವೃತ್ತ ನ್ಯಾಯಾಧೀಶ ಬಿ.ಎನ್.ಶ್ರೀಕೃಷ್ಣ ನೇತೃತ್ವದ ಸಮಿತಿಗೆ. ರಾಮಚಂದ್ರಪುರ ಮಠಕ್ಕೆ ಹಿನ್ನಡೆ.

ನವದೆಹಲಿ : ‌ಉತ್ತರಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣದ ಪುರಾಣ ಪ್ರಸಿದ್ದ ಶ್ರೀ ಮಹಾಬಲೇಶ್ವರ ದೇವಾಲಯವನ್ನ ಸುಪ್ರೀಂಕೋರ್ಟ್ ನಿವೃತ್ತ ...

ಪಶ್ಚಿಮಬಂಗಾಳ: ರೋಡ್‌ ಶೋನಲ್ಲಿ ಸೇರಿದ ಭಾರೀ ಜನಸ್ತೋಮ; ಇಷ್ಟೊಂದು ಜನ ಸೇರಿದ್ದು ನೋಡಿರಲೇ ಇಲ್ಲ; ಮೋದಿ

ಪಶ್ಚಿಮಬಂಗಾಳದ ಅಸ್ಸನ್‌ಸೋಲ್‌ನಲ್ಲಿ ಶನಿವಾರ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಜನಸಂದಣಿಗೆ ಶ್ಲಾಘನೆ ...