ಸಾರ್ವಜನಿಕರು ಜಿಲ್ಲಾ ಮೆಗಾ ಲೋಕ ಅದಾಲತ್‍ಗೆ ಸಹಕರಿಸಿ. ಜಿಲ್ಲಾ ಬೃಹತ್ ಲೋಕ್ ಅದಾಲತ್ ಗೆ ವಸ್ತ್ರಮಠ ಚಾಲನೆ

Source: SO News | By Laxmi Tanaya | Published on 3rd August 2021, 10:47 PM | State News | Don't Miss |

ಮಂಡ್ಯ - ಕಕ್ಷಿದಾರರು, ವಕೀಲರು ನ್ಯಾಯಾಲಯದಲ್ಲಿ ಇರುವಂತಹ ರಾಜಿಯಾಗುವಂತ ವ್ಯಾಜ್ಯಗಳನ್ನು ರಾಜಿ ಮಾಡಿಕೊಂಡು ಮುಕ್ತಾಯಗೊಳಿಸಿಕೊಳ್ಳಲು ಮೆಗಾ ಲೋಕ್ ಅದಾಲತ್ ಸಹಾಯಕಾರಿಯಾಗಿದ್ದು  ಸಾರ್ವಜನಿಕರು ಸಹಕರಿಸಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಸ್ತ್ರಮಠ ಹೇಳಿದರು.

ರಾಜ್ಯಾದ್ಯಂತ ಆಗಸ್ಟ್ 14ರಂದು ಮೆಗಾ ಲೋಕ್ ಅದಾಲತ್ ನಡೆಯಲಿದ್ದು, ಇದರನ್ವಯ ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯಾಲಯಗಳಲ್ಲಿ ಆಗಸ್ಟ್ 14 ರವರೆಗೆ ನಡೆಯಲಿರುವ ಮೆಗಾ ಲೋಕ್ ಅದಾಲತ್‍ನ ಜಾಥ ಕಾರ್ಯಕ್ರಮಕ್ಕೆ ಜಿಲ್ಲೆಯ ನ್ಯಾಯಾಂಗಣದ ಪಕ್ಕದಲ್ಲಿರುವ ಎ.ಡಿ.ಆರ್ ಕಟ್ಟಡದ ಮುಂಭಾಗ  ಹಸಿರು ನಿಶಾನೆ ತೋರುವ ಮೂಲಕ ವಸ್ತ್ರಮಠರವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಬ್ಯಾಂಕ್‍ಗಳಲ್ಲಿ ಇತ್ಯರ್ಥವಾಗದೆ ಉಳಿದಿರುವ ವ್ಯಾಜ್ಯಗಳನ್ನು, ಮೋಟರ್ ಆಕ್ಸಿಡೆಂಟ್ ಕೇಸ್‍ಗಳು, ರಾಜಿಯಾಗುವಂತಹ ಕ್ರಮಿನಲ್ ಕೇಸ್‍ಗಳನ್ನು ಕೂಡ ರಾಜಿಸಂಧಾನಕ್ಕೆ ತೆಗೆದುಕೊಂಡಿದ್ದೇವೆ ಎಂದರು.
 ಜಿಲ್ಲೆಯಲ್ಲಿ ಪಾವತಿ ಮಾಡದೇ ಇರುವ ನೀರಿನ ಶುಲ್ಕ, ಮನೆಕಂದಾಯಕ್ಕೆ ಸಂಬಂಧಿಸಿದ ವ್ಯಾಜ್ಯಗಳನ್ನೂ ಇಲ್ಲಿ ಇತ್ಯರ್ಥಪಡಿಸಲಾಗುವುದು ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬಹುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳಾದ ಎ.ಎಂ ನಳಿನಿಕುಮಾರಿ, ವಕೀಲರ ಸಂಘದ ಅಧ್ಯಕ್ಷರಾದ ಸಿ.ಎಲ್.ಶಿವಕುಮಾರ್ ಹಾಗೂ ನ್ಯಾಯಾಧೀಶರುಗಳು ಮತ್ತಿತರರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...