ಸಾರ್ವಜನಿಕರ ಅಸಮಧಾನ. ನೈಟ್ ಕರ್ಪ್ಯೂ ಹಿಂದಕ್ಕೆ ಪಡೆದ ರಾಜ್ಯ ಸರ್ಕಾರ.

Source: SO News | By Laxmi Tanaya | Published on 24th December 2020, 6:59 PM | State News |

ಬೆಂಗಳೂರು : ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 5ರವರೆಗೆ ವಿಧಿಸಿದ್ದ ನೈಟ್ ಕರ್ಪ್ಯೂ ಆದೇಶವನ್ನ ಸರ್ಕಾರ ಹಿಂದಕ್ಕೆ ಪಡೆದಿದೆ.

ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ನೈಟ್ ಕರ್ಪ್ಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಡಿಸೆಂಬರ್ 24ರಿಂದ ಜನವರಿ2ರವರೆಗೆ ರಾತ್ರಿ 11 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಪ್ಯೂ ವಿಧಿಸಲಾಗಿತ್ತು. ರಾಜ್ಯದ ವಿವಿದೆಡೆಯಿಂದ ಸರ್ಕಾರದ ವಿರುದ್ಧ ಆಕ್ರೋಶ ಮೊಳಗಿದ್ದರಿಂದ ಸರ್ಕಾರ ಕರ್ಪ್ಯೂ ರದ್ದು ಮಾಡಿದೆ.

ವಿದೇಶಗಳಲ್ಲಿ ಕೊರೋನಾ ರೂಪಾಂತರ ವೈರಸ್ ಹರಡುವ ಭೀತಿಯಿಂದ ಆದೇಶ ಮಾಡಲಾಗಿತ್ತು. ಸಾರ್ವಜನಿಕರು ಮುಂದೆ ಸ್ವಯಂ ನಿರ್ಬಂಧ ಹೇರಿಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಜಾಗೃತರಾಗಿರುವಂತೆ ಸಿಎಂ ತಿಳಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...