ಜನಾನುರಾಗಿ ಸೇವಕನಿಗೆ ಸಿಕ್ಕಿತು ಸರ್ಕಾರದಲ್ಲಿ ಸ್ಥಾನ. ಯಲ್ಲಾಪುರದ ಶಿವರಾಮ ಹೆಬ್ಬಾರ ಸಚಿವರಾಗಿ ಪ್ರಮಾಣವಚನ.

Source: SO News | By Laxmi Tanaya | Published on 4th August 2021, 10:27 PM | State News | Don't Miss |

ಬೆಂಗಳೂರು : ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಸಿಎಂ ಬಸವರಾಜ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಬುಧವಾರ ರಾಜಭವನದಲ್ಲಿ ಅವರು ಎರಡನೇ ಬಾರೀ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನನ್ನ ಪ್ರೀತಿಯ ಕ್ಷೇತ್ರದ ಜನತೆಯ ಆಶೀರ್ವಾದದಿಂದ ಇಂದು ಎರಡನೇ ಬಾರಿಗೆ ಕರ್ನಾಟಕ ರಾಜ್ಯ ಬಿಜೆಪಿ ಸರಕಾರದ ಸಂಪುಟ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ.

ನನಗೆ ಮತ್ತೊಮ್ಮೆ ಸಚಿವನಾಗಿ ಸೇವೆ ಮಾಡುವುದಕ್ಕೆ ಅವಕಾಶ ನೀಡಿದ  ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ,  ಮಾಜಿ ಮುಖ್ಯಮಂತ್ರಿಗಳಾದ  ಬಿ.ಎಸ್.ಯಡ್ಡಿಯೂರಪ್ಪ ನವರಿಗೆ  ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾಜಿ ಯವರಿಗೆ,  ರಾಜ್ಯಾಧ್ಯಕ್ಷ ನಳಿನ ಕುಮಾರ ಕಟೀಲ್ ಅವರಿಗೆ ಹಾಗೂ ಕೇಂದ್ರದ ಹಾಗೂ ರಾಜ್ಯದ ಎಲ್ಲಾ ನಾಯಕರಿಗೆ, ಪಕ್ಷದ ಪದಾಧಿಕಾರಿಗಳಿಗೆ ನನ್ನನ್ನು ಪ್ರೀತಿಸಿ ಬೆಳೆಸುತ್ತಿರುವ  ಕ್ಷೇತ್ರದ ಸಮಸ್ತ ಜನತೆಗೆ ಹಾಗೂ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳನ್ನ ಹೆಬ್ಬಾರ ಸಲ್ಲಿಸಿದ್ದಾರೆ.

ತಮ್ಮೆಲ್ಲರ ನಿರೀಕ್ಷೆಗಳಿಗೆ ತಕ್ಕಂತೆ ಕ್ಷೇತ್ರದ ಹಾಗೂ ರಾಜ್ಯದ ಜನತೆಗೆ ಚುತ್ಯಿ ಬರದಂತೆ ರಾಜ್ಯದ ಏಳಿಗೆಗಾಗಿ   ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತೆನೆಂದು  ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...