ಕೋರೋನಾ ಲಾಕ್ ಡೌನ್ ಸಂದರ್ಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯ.

Source: SO News | By Laxmi Tanaya | Published on 11th June 2021, 7:37 PM | Coastal News | Don't Miss |

ಭಟ್ಕಳ : ಕೊರೋನ ಲಾಕ್ ಡೌನ್ ನಿಂದ ನಿರ್ಗತಿಕ ಕುಟುಂಬ ಗಳು ಕೆಲಸ ಇಲ್ಲದೆ ತೊಂದರೆಯಲ್ಲಿ ಇರುವುದನ್ನು ಮನಗಂಡು ಧರ್ಮಸ್ಥಳದ ಧರ್ಮಾಧಿಕಾರಿ ಅವರ ನೆರವಿಗೆ ಸ್ಪಂದಿಸುವುದರ ಮೂಲಕ ಸಾಮಾಜಿಕ ಕಳಕಳಿ ತೋರಿದ್ದಾರೆಂದು
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಭಟ್ಕಳ್ ಯೋಜನಾಧಿಕಾರಿ ಚಂದ್ರಹಾಸ್. ಡಿ ಹೇಳಿದ್ದಾರೆ.

ಅವರು ಶಿರಾಲಿ ಜನತಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶಿರಾಲಿ ವಲಯ ಮಟ್ಟದ ಅರ್ಹ 9 ಫಲಾನುಭವಿಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡುತ್ತಿದ್ದರು. ಉತ್ತರ ಕನ್ನಡ ಜಿಲ್ಲೆಯ ಆಸ್ಪತ್ರೆಗೆ ಆಕ್ಸಿಜನ್ ಮತ್ತು ಅಗತ್ಯ ವಸ್ತುಗಳನ್ನು ನೀಡಿ ಬಡವರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಎಂದರು.

ಕಿಟ್ ವಿತರಿಸಿ ಮಾತನಾಡಿದ ಮಾಜಿ ತಾಲೂಕು ಪoಚಾಯತ್ ಸದಸ್ಯ ವಿಷ್ಣು ದೇವಾಡಿಗ, ಕೋರೋನದಿಂದ ಜನರು ಸಂಕಷ್ಟಕ್ಕೆ ಸಿಲುಕಿರುವುದನ್ನು ಮನಗಂಡು ಅರ್ಹ ಬಡಕುಟುಂಬಗಳಿಗೆ ಅಗತ್ಯ ದಿನಸಿ ಕಿಟ್ ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್ ಒದಗಿಸುವುದರ ಮೂಲಕ ಸಾಮಾಜಿಕ ಕಳಕಳಿ ತೋರಿರುವುದು ಶ್ಲಾಘನೀಯ ಎಂದರು. 

ಪ್ರಾರಂಭದಲ್ಲಿ ಮೇಲ್ವಿಚಾರಕಿ ಶ್ರೀಮತಿ ರೇಷ್ಮಾ ಸ್ವಾಗತಿಸಿದರು. ಜಯಶ್ರೀ ನಾಯಕ್ ವಂದಿಸಿದರು. ಈ ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ರವೀಂದ್ರ ನಾಯಕ್ ಜ್ಯೋತಿ ಆಚಾರಿ ಮುಂತಾದವರು ಉಪಸ್ಥಿತರಿದ್ದರು.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...