ಸಿಬಿಐ, ಇ.ಡಿ ಸೇರಿ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಮೊದಲ ಬಾರಿಗೆ ನಿರ್ಣಯ ಮಂಡಿಸಿದ ರಾಜ್ಯ ಪಶ್ಚಿಮ ಬಂಗಾಳ

Source: The New Indian Express | By MV Bhatkal | Published on 20th September 2022, 12:07 AM | National News |

ಕೋಲ್ಕತ್ತ: ಜಾರಿ ನಿರ್ದೇಶನಾಲಯ (ಇಡಿ)  ಸಿಬಿಐ ಸೇರಿದಂತೆ ಇತರ ಕೇಂದ್ರೀಯ ಸಂಸ್ಥೆಗಳ ವಿರುದ್ಧ ಪಶ್ಚಿಮ ಬಂಗಾಳ ನಿರ್ಣಯ ಅಂಗೀಕರಿಸಿದೆ. ಈ ರೀತಿ ನಿರ್ಣಯ ಅಂಗೀಕರಿಸಿದ ಮೊದಲ ರಾಜ್ಯ ಪಶ್ಚಿಮ ಬಂಗಾಳವಾಗಿದೆ. 

ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಪಕ್ಷಗಳ ಪದಾಧಿಕಾರಿಗಳನ್ನು ನಿರ್ದಿಷ್ಟವಾಗಿ ಆಯ್ಕೆ ಮಾಡಿ ಟಾರ್ಗೆಟ್ ಮಾಡಲಾಗುತ್ತಿದೆ ಹಾಗೂ ಭಯದ ವಾತಾವರಣ ಮೂಡಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಗಂಭೀರ ಆರೋಪ ಮಾಡಿದೆ. 

ಶಾಲಾ ನೇಮಕಾತಿ ಹಗರಣ, ಗೋವು ಕಳ್ಳಸಾಗಣೆ, ಕಲ್ಲಿದ್ದಲು ಕಳ್ಳತನ ಪ್ರಕರಣಗಳೂ ಸೇರಿದಂತೆ ರಾಜ್ಯದಲ್ಲಿ ಉನ್ನತ ಮಟ್ಟದ ಪ್ರಕರಣಗಳನ್ನು ಕೇಂದ್ರ ಏಜೆನ್ಸಿಗಳು ತನಿಖೆ ನಡೆಸುತ್ತಿರುವಾಗಲೇ ರಾಜ್ಯ ಸರ್ಕಾರ ಈ ನಿರ್ಣಯ ಕೈಗೊಂಡಿದೆ. 
ಟಿಎಂಸಿ ಶಾಸಕರಾದ ನಿರ್ಮಲ್ ಘೋಷ್ ಹಾಗೂ ತಪಸ್ ರಾಯ್ ನಿರ್ಣಯವನ್ನು ಮಂಡಿಸಿದರು. "ಕೇಂದ್ರೀಯ ಏಜೆನ್ಸಿಗಳು ಪಶ್ಚಿಮ ಬಂಗಾಳ ಆಡಳಿತಾ ರೂಢ ನಾಯಕರನ್ನು ಟಾರ್ಗೆಟ್ ಮಾಡುತ್ತಿದ್ದು, ಭಯದ ವಾತಾವರಣ ಮೂಡಿಸುತ್ತಿದೆ ಎಂದು ನಿರ್ಣಯದಲ್ಲಿ ಹೇಳಲಾಗಿದ್ದು, ಇದರಲ್ಲಿ ಹಿರಿಯ ಸಚಿವ ಫಿರ್ಹಾದ್ ಹಕೀಮ್ ಹಾಗೂ ಸುಬ್ರತಾ ಮುಖರ್ಜಿ ಅವರನ್ನು  ನಾರದಾ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ 2021 ರ ವಿಧಾನಸಭಾ ಚುನಾವಣೆಯ ನಂತರ ಸಿಬಿಐ ಬಂಧಿಸಿರುವುದನ್ನು ಉಲ್ಲೇಖಿಸಲಾಗಿದೆ.

ಬಿಜೆಪಿ ನಾಯಕರ ಹೆಸರು ಚಿಟ್ ಫಂಡ್ ಹಗರಣದಲ್ಲಿದ್ದರೂ, ಏಜೆನ್ಸಿಗಳು ಕೇವಲ ಹಗರಣದ ಒಂದು ಭಾಗವನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ನಿರ್ಣಯ ಮಂಡಿಸಿದೆ. ಕೇಂದ್ರೀಯ ಏಜೆನ್ಸಿಗಳು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಉರುಳಿಸುವ ಪಿತೂರಿ ಮತ್ತು ಭಯದ ರಾಜಕೀಯವನ್ನು ಹೆಚ್ಚಿಸುವುದಕ್ಕೆ ಸಹಕರಿಸುತ್ತಿವೆ ಎಂದು ನಿರ್ಣಯದಲ್ಲಿ ಆರೋಪಿಸಲಾಗಿದೆ.

ಇನ್ನು ಪಶ್ಚಿಮ ಬಂಗಾಳ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಈ ಬಗ್ಗೆ ಮಾತನಾಡಿದ್ದು, ಇದೆಲ್ಲದರ ಹಿಂದೆ ಪ್ರಧಾನಿ ಮೋದಿ ಇದ್ದಾರೆ ಎಂದು ತಾವು ನಂಬುವುದಿಲ್ಲ ಎಂದು ಹೇಳಿದ್ದು, ಬಿಜೆಪಿ ನಾಯಕರ ಒಂದು ಗುಂಪು ಅವರ ಹಿತಾಸಕ್ತಿಗಳನ್ನು ಪೂರೈಸಲು ಕೇಂದ್ರ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಸಿಬಿಐ ಈಗ ಅಮಿತ್ ಶಾ ನಿರ್ವಹಿಸುತ್ತಿರುವ ಕೇಂದ್ರ ಗೃಹ ಸಚಿವಾಲಯಕ್ಕೆ ಉತ್ತರದಾಯಿಯಾಗಿದೆ ಎಂದು ಹೇಳಿದ್ದಾರೆ. 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...