ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜ ಆಗಬೇಕೆಂಬ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್.

Source: so news | By MV Bhatkal | Published on 7th May 2021, 6:23 PM | National News |

ನವದೆಹಲಿ: ಕೊರೊನಾ ಸೋಂಕಿನ 2ನೇ ಅಲೆ ತೀವ್ರವಾಗಿ ಕರ್ನಾಟಕದ ದಿನದ ಹೆಲ್ತ್ ಬುಲೆಟಿನ್ ನಲ್ಲಿ ಕರ್ನಾಟಕದಲ್ಲಿ 50 ಸಾವಿರ ಕೊರೊ‌ನಾ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ಮೇ 5 ರಂದು ಬೆಂಗಳೂರಿ‌ನ ಹೈಕೋರ್ಟ್ ತುರ್ತಾಗಿ ಕೇಂದ್ರಸರ್ಕಾರ ವೈದ್ಯಕೀಯ ಆಕ್ಸಿಜನ್ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗೆ ಹೆಚ್ಚಿಸಬೇಕೆಂದು ಆದೇಶಿಸಿತ್ತು.
ಆದರೆ ನಿನ್ನೆ ಮೇ 6 ರಂದು ಬೆಂಗಳೂರಿನ ಹೈಕೋರ್ಟ್ ನೀಡಿದ್ದ ಈ ಆದೇಶ ಪ್ರಶ್ನಿಸಿ ಕೇಂದ್ರಸರ್ಕಾರದ ಪರ ಸಾಲಿಟಿರಲ್ ಜನರಲ್ ತುಷಾರ್ ಮೆಹ್ತಾ ಅವರು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಕರ್ನಾಟಕ ಸರ್ಕಾರದ ದಾಖಲೆಗಳನ್ನು ಪರಿಶೀಲಿಸಲು ಅವಕಾಶ ನೀಡಲು ಕೋರಿ ತಕ್ಷಣಕ್ಕೆ 1200 ಮೆಟ್ರಿಕ್ ಟನ್ ವೈದ್ಯಕೀಯ ಆಕ್ಸಿಜನ್ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ಇಂದು ನಡೆದ ಸುಪ್ರೀಂಕೋರ್ಟಿನ ವಿಚಾರಣೆಯಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದಿಸಿದರು.
ಆದರೆ ಕೊನೆಗೆ ಸುಪ್ರೀಂಕೋರ್ಟ್ ಕೇಂದ್ರಸರ್ಕಾರದ ಈ ವಾದವನ್ನು ತಳ್ಳಿಹಾಕಿ ಕೊರೊನಾ ಸೋಂಕಿನ 2ನೇ ದಾಳಿಯಲ್ಲಿ ಸಿಲುಕಿ ದೇಶದ 2ನೇ ಅಗ್ರರಾಜ್ಯವಾದ ಕರ್ನಾಟಕ ತತ್ತರಿಸುವಂತೆ ರಕ್ಷಿಸಲು 1,200 ಮೆಟ್ರಿಕ್ ಟನ್ ವೈದ್ಯಕೀಯ ಆಕ್ಸಿಜನ್ ಪೂರೈಸಬೇಕೆಂಬ ಕರ್ನಾಟಕ ಹೈಕೋರ್ಟ್ ನ ಆದೇಶದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ಆದರೆ ಸೂಕ್ತ ಸಂದರ್ಭದಲ್ಲಿ‌ ಮಾತ್ರ ಈ ವಿಚಾರದಲ್ಲಿ ಮಧ್ಯೆಪ್ರವೇಶಿಸುತ್ತೇವೆ ಎಂದು ಹೇಳಿದ ಸುಪ್ರೀಂಕೋರ್ಟ್ ಕೇಂದ್ರಸರ್ಕಾರದ ಅರ್ಜಿಯನ್ನು ತಿರಸ್ಕರಿಸಿ ಕರ್ನಾಟಕಕ್ಕೆ ತಕ್ಷಣ ಪ್ರತಿದಿನ 1,200 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಸಬೇಕೆಂಬ ಬೆಂಗಳೂರಿನ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿಯಿತು.
ಹಾಗಾಗಿ ಇದೀಗ ಕರ್ನಾಟಕದಲ್ಲಿ ಕೊರೊನಾ ಸೋಂಕಿತರಿಗೆ ಆಸ್ಪತ್ರೆಗಳ ಮೂಲಕಮ ಆಕ್ಸಿಜನ್ ಪೂರೈಕೆ ಸಕಾಲದಲ್ಲಿ ದೊರಕಲಿದೆ

Read These Next

ಹೊಸದಿಲ್ಲಿ: ಧೂಳು ತಿನ್ನುತ್ತಿರುವ5,500ಕ್ಕೂ ಅಧಿಕ ವೆಂಟಿಲೇಟರ್‌ಗಳು ಉ.ಪ್ರ., ಗುಜರಾತ್, ಕರ್ನಾಟಕ ಮುಂಚೂಣಿಯಲ್ಲಿ

ಕೊರೋನ ಎರಡನೇ ಅಲೆಯಲ್ಲಿ ವೆಂಟಿಲೇಟರ್‌ಗಳ ಕೊರತೆಯಿಂದಾಗಿ ಹಲವಾರು ರೋಗಿಗಳು ಸಾವನ್ನಪ್ಪಿದ್ದರೆ, ವಿವಿಧ ರಾಜ್ಯಗಳಲ್ಲಿ ಈ ಜೀವರಕ್ಷಕ ...