ಎರಡು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಕ್ತ ಸಚಿವ ಕೆ.ಎಸ್.ಈಶ್ವರಪ್ಪ ಇಂಗಿತ

Source: SO News | By Laxmi Tanaya | Published on 23rd January 2021, 10:17 PM | State News | Don't Miss |

ಧಾರವಾಡ : ರಾಜ್ಯದಲ್ಲಿ  ಎರಡು ಹಂತದ ಪಂಚಾತರಾಜ್ ವ್ಯವಸ್ಥೆ ಜಾರಿಗೊಳಿಸುವುದು ಸೂಕ್ತ ಎಂಬುದು ನನ್ನ ವೈಯಕ್ತಿಕವಾಗಿ ಅಭಿಪ್ರಾಯವಾಗಿದೆ.ಈ ಕುರಿತು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸಂವಿಧಾನ ತಿದ್ದುಪಡಿ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳಿಸುವ ಉದ್ದೇಶವಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪ ಹೇಳಿದರು.

ಜಿಲ್ಲಾ ಪಂಚಾಯತ ಆವರಣದಲ್ಲಿ 140 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿರುವ ಅಧ್ಯಕ್ಷ,ಉಪಾಧ್ಯಕ್ಷರು,ಸ್ಥಾಯಿ ಸಮಿತಿಗಳ ಅಧ್ಯಕ್ಷರ ನೂತನ ಕೊಠಡಿಗಳ ಕಟ್ಟಡ ಉದ್ಘಾಟಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಮೂರು ಹಂತದ ಪಂಚಾಯತರಾಜ್ ವ್ಯವಸ್ಥೆ ಬದಲಿಗೆ ಎರಡು ಹಂತದ ವ್ಯವಸ್ಥೆ ಜಾರಿಗೊಳ್ಳಬೇಕು ಎಂಬ ಅಭಿಪ್ರಾಯವಿದೆ. ಇದಕ್ಕೆ ಸಂಪೂರ್ಣ ಸಹಮತವಿದೆ. ಸಂವಿಧಾನದಲ್ಲಿ ಮೂರು ಹಂತದ ಪಂಚಾಯತರಾಜ್ ವ್ಯವಸ್ಥೆ ಸೂಚಿಸಿರುವುದರಿಂದ ಅನುಷ್ಠಾನ ಅನಿವಾರ್ಯವಾಗಿದೆ. ಇದನ್ನು ಬದಲಾಯಿಸಲು ಕೋರಿ ರಾಜ್ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು. ಸಂವಿಧಾನಕ್ಕೆ ತಿದ್ದುಪಡಿಯಾದರೆ ಮಾತ್ರ ಬದಲಾವಣೆ ಸಾಧ್ಯ ಎಂದರು.

ಬೃಹತ್, ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಶಾಸಕರಾದ ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ, ಜಿಲ್ಲಾ ಪಂಚಾಯತ ಅಧ್ಯಕ್ಷೆ ವಿಜಯಲಕ್ಷ್ಮೀ ಕೆಂಪೇಗೌಡ ಪಾಟೀಲ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ.ಪಂ.ಸಿಇಓ ಡಾ.ಬಿ.ಸುಶೀಲಾ, ಸದಸ್ಯರಾದ ಚೈತ್ರಾ ಗುರುಪಾದಪ್ಪ ಶಿರೂರ, ರೇಣುಕಾ ಇಬ್ರಾಹಿಂಪುರ,ಚನ್ನಬಸಪ್ಪ ಮಟ್ಟಿ,ಕರಿಯಪ್ಪ ಮಾದರ ಮತ್ತಿತರರು ಇದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...