ಭಟ್ಕಳ ಹನೀಫಾಬಾದ್‌ನಲ್ಲಿ ಮನೆ ಕಳ್ಳತನ ಲಕ್ಷಾಂತರ ರುಪಾಯಿ ನಗದು, ಚಿನ್ನಾಭರಣ ಕಳುವು

Source: S O News service | By I.G. Bhatkali | Published on 25th October 2021, 11:58 AM | Coastal News | Don't Miss |

ಭಟ್ಕಳ: ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಮನೆಯ ಬಾಗಿಲನ್ನು ಮುರಿದು ಒಳ ಹೊಕ್ಕಿರುವ ಕಳ್ಳರು ಲಕ್ಷಾಂತರ ರುಪಾಯಿ ನಗದು ಹಾಗೂ ಚಿನ್ನಾಭರಣ ಗಳೊಂದಿಗೆ ಪರಾರಿಯಾಗಿರುವ ಘಟನೆ ಶನಿವಾರ ರಾತ್ರಿ 9 ಗಂಟೆಯಿಂದ ರವಿವಾರ ಬೆಳಿಗ್ಗೆ 10 ಗಂಟೆಯ ಅವಧಿಯಲ್ಲಿ ನಡೆದಿದೆ.

ಕಳ್ಳತನಕ್ಕೆ ಒಳಗಾದ 'ಗುಲ್ ಈ ನಾಜ್' ಹೆಸರಿನ ಈ ಮನೆಯು ಎಮ್.ಜಿ.ಇಲಿಯಾಸ್ ಎಂಬುವವರಿಗೆ ಸೇರಿದ್ದಾಗಿದೆ. ಮನೆಯಲ್ಲಿನ 2 ಕಪಾಟುಗಳನ್ನು ಒಡೆದು ತೆರೆಯಲಾಗಿದ್ದು, ರು.1.5 ಲಕ್ಷ ನಗದು, ಒಂದು ಚಿನ್ನದ ಸರ, ಒಂದು ಚಿನ್ನದ ಕಿವಿಯೋಲೆ, ಒಂದು ರಿಂಗ್ ಅನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ.

ಹಣ, ಚಿನ್ನಾಭರಣಗಳಿಗಾಗಿ ಹುಡುಕಾಟ ನಡೆಸಿ ಕಳ್ಳರು ಬಟ್ಟೆ ಬರೆಗಳನ್ನು ಚೆಲ್ಲಾಪಿಲ್ಲಿಯಾಗಿ ಎಸೆದಿರುವುದು ಕಂಡು ಬಂದಿದೆ. ಎಮ್. ಜೆ.ಇಲಿಯಾಸ ಸಹೋದರಿ ಮನೆಯಲ್ಲಿನ ಮದುವೆ ಕಾರ್ಯಕ್ರಮದ ನಿಮಿತ್ತ ಶನಿವಾರ ರಾತ್ರಿ 9 ಗಂಟೆಯ ಸುಮಾರಿಗೆ ಮನೆಯವರೆಲ್ಲರೂ ಮನೆ ಬಿಟ್ಟು ತೆರಳಿದ್ದು, ರವಿವಾರ 10 ಗಂಟೆಗೆ ವಾಪಸ್ಸಾಗಿದ್ದಾರೆ. ರಾಡ್‌ನ್ನು ಬಳಸಿ ಮನೆಯ ಬಾಗಿಲನ್ನು ಒಡೆದು ತೆರೆಯಲಾಗಿರುವುದು ಕಂಡು ಬಂದಿದೆ.

ಭಟ್ಕಳ ಗ್ರಾಮೀಣ ಠಾಣಾ ಎಸ್ಯ ರತ್ನಾ ಕುರಿ ಸಿಬ್ಬಂದಿಗಳೊಡನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳದಲ್ಲಿ ಮತ್ತೆ ಮನೆ ಕಳ್ಳತನ ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ.

Read These Next

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ : ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ...

ಉತ್ತರಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು. 75ಲಕ್ಷ ರೂ ಮೌಲ್ಯದ ಸ್ವತ್ತು ವಶಕ್ಕೆ.

ಕಾರವಾರ : ಉತರಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳನ್ನ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ...

ಮನೆ ಮನೆಗೆ ಲಸಿಕಾ ಮಿತ್ರ : ಜಿಲ್ಲೆಯಲ್ಲಿ ಹೆಚ್ಚಳವಾಯಿತು ಲಸಿಕೆ ಪಡೆಯುವವರ ಸಂಖ್ಯೆ

ಉಡುಪಿ : ಕೋವಿಡ್ ನಿಂದ ಗರಿಷ್ಠ ಸುರಕ್ಷತೆ ಪಡೆಯಲು 2 ಡೋಸ್ ಲಸಿಕೆಯನ್ನು ಪಡೆಯುವುದು ಅಗತ್ಯವಾಗಿದ್ದು, ಈಗಾಗಲೇ ಮೊದಲನೇ ಡೋಸ್ ಪಡೆದವರು ...

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಶ್ರೀಕೃಷ್ಣ ಮಠದಿಂದ ಉತ್ತಮ ಬೆಂಬಲ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣ ಕಾರ್ಯಕ್ರಮಗಳಿಗೆ ಶ್ರೀಕೃಷ್ಣ ಮಠ ಜಿಲ್ಲಾಡಳಿತಕ್ಕೆ ನೀಡುತ್ತಿರುವ ಬೆಂಬಲ ಹಾಗೂ ...