ಭಟ್ಕಳ: ಮನೆಯೊಂದರಿಂದ ಕಳ್ಳತನ; ಬಟ್ಟೆ ಬರೆ ಸಮೇತ ಬೆಲೆಬಾಳುವ ವಸ್ತುಗಳು ಕಳುವು

Source: sonews | By Staff Correspondent | Published on 7th August 2017, 7:09 PM | Coastal News | State News | Don't Miss |

ಭಟ್ಕಳ: ಭಟ್ಕಳನಗರದಲ್ಲಿ ಮನೆಗಳ್ಳರ ಮತ್ತೇ ಶುರುವಾಗಿದ್ದು ಇಲ್ಲಿನ ಜಾಮಿಯಾಬಾದ್ ರಸ್ತೆಯಲ್ಲಿ ಅಬೂಬಕರ್ ಮಸೀದಿ ಬಳಿಯ ಮನೆಯೊಂದರಿಂದ ಬಟ್ಟೆಬರೆ, ಟಿ.ವಿ. ಜ್ಯೂಸರ್, ಓವನ್ ಸಮೇತ  ಸುಮಾರು ೧.೭೫ ಲಕ್ಷ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. 

ಮನೆ ಒಡತಿ ಫೈರೋಝಾ ರಫೀಖ್ ತಿಳಿಸುವಂತೆ, ಶನಿವಾರ ಸಂಜೆ ಮನೆಗೆ ಬೀಗ ಹಾಕಿ ಬಂದರ್ ರೋಡ್ ನಲ್ಲಿರುವ ತನ್ನ ತಾಯಿ ಮನೆಗೆ ಹೋಗಿದ್ದು ಸೋಮವಾರ ೧೧.೦೦ಗಂಟೆಗೆ ಮರಳಿ ಮನೆಗೆ ಬಂದು ನೋಡಿದಾಗ ಮನೆಯನ್ನು ಕಳ್ಳರು ದೋಚಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಕೀಲಿಹಾಕಿಕೊಂಡಿರುವ ಎರಡು ಬೆಡ್ ರೂಂ ಗಳು ತೆರೆದುಕೊಂಡಿದ್ದು ಕಪಾಟುಗಳಿಂದ ಬಟ್ಟೆಬರೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಮನೆಯಲ್ಲಿ ಬಳಕೆಯಾಗುವ ಟಿ.ವಿ. ಓವನ್, ಜ್ಯೂಸರ್ ಸಮೇತ ವಿವಿಧ ಬೆಲೆಬಾಳುವ ವಸ್ತುಗಳು ಕಾಣೆಯಾಗಿವೆ ಎಂದು ತಿಳಿಸಿದ್ದಾರೆ. 

ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಗ್ರಾಮೀಣ ಠಾಣೆಯ ಪೊಲೀಸರು ಪರಿಶೀಲನೆಯನ್ನು ನಡೆಸಿದ್ದು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. 

ನಗರದಲ್ಲಿ ಕಳೆದ ಒಂದು ತಿಂಗಳಿನಿಂದ ಮನೆಕಳುವು ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಮನೆಯಲ್ಲಿ ಯಾರು ಇಲ್ಲದ ಸಂದರ್ಭವನ್ನು ಬಳಸಿಕೊಂಡು ಕಳ್ಳರು ತಮ್ಮ ಕೈಚಳಕ ತೋರಿಸುತ್ತಿದ್ದಾರೆ.
 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...