ಜಿಲ್ಲೆಯಲ್ಲಿ ಯಾವುದೇ ಕೋವಿಡ್ ಪ್ರಕರಣವಿಲ್ಲ. ಸಾರ್ವಜನಿಕರು ಗಾಬರಿ ಪಡದೇ ಸುರಕ್ಷತೆಗಾಗಿ ಮುಂಜಾಗೃತಾ ಕ್ರಮ ವಹಿಸಬೇಕು : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Source: SO News | By Laxmi Tanaya | Published on 21st December 2023, 10:35 PM | State News | Don't Miss |

ಧಾರವಾಡ : ಕಳೆದ ಒಂದು ವಾರದಿಂದ ದೇಶದಲ್ಲಿ ಕೋವಿಡ್ ರೋಗ ಮತ್ತೆ ಸದ್ದು ಮಾಡುತ್ತಿದೆ. ಅನೇಕ ರಾಜ್ಯ ಹಾಗೂ ನಮ್ಮ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೊಸ ತಳಿಯ ರೋಗಾಣು ಪತ್ತೆಯಾಗಿರುವ ವರದಿಯಾಗಿದೆ. ಆದರೆ ಧಾರವಾಡ ಜಿಲ್ಲೆಯಲ್ಲಿ ಇಂದಿನವರೆಗೂ ಮತ್ತೆ ಯಾವುದೇ ಸ್ವರೂಪದ ಕೋವಿಡ್ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೋವಿಡ್ ಬಗ್ಗೆ ಗಾಬರಿಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. 
 ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೋವಿಡ್-19 ರ ಅಂಕಿ–ಅಂಶಗಳು, ಕೇರಳದಲ್ಲಿನ ಕೋವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19 ರ ಉಪತಳಿ ಜೆಎನ್.1 (JN.1)  ವರದಿ, ಚಳಿಗಾಲದ ಹವಾಮಾನ, ಕ್ರಿಸ್ಮಸ್ ಹಾಗೂ ಹೊಸ ವμರ್Áಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ ಸಂಭವನೀಯ ಜನದಟ್ಟಣೆಯನ್ನು    ಗಮನದಲ್ಲಿರಿಸಿಕೊಂಡು ಕೆಲವು ಸಲಹಾತ್ಮಕ ಮಾರ್ಗಸೂಚಿಗಳನ್ನು ಶಿಫಾರಸ್ಸು ಮಾಡಿದೆ. ಈ ಅಂಶಗಳನ್ನು ಜಿಲ್ಲೆಯ ಸಾರ್ವಜನಿಕರು ಸಹ ಪಾಲಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
 60 ವರ್ಷ ಹಾಗೂ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು, ವಿಶೇಷವಾಗಿ ಕಿಡ್ನಿ, ಹೃದಯ, ಲೀವರ್ ಮತ್ತು ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು ಜನದಟ್ಟಣೆ, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಸಾಧ್ಯವಾದಷ್ಟು ತೆರಳದಂತೆ   ಅವರು ತಿಳಿಸಿದ್ದಾರೆ.
ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು. ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡಬಾರದೆಂದು ತಿಳಿಸಿದ್ದಾರೆ.

ಉತ್ತಮ ವೈಯಕ್ತಿಕ ಸ್ವಚ್ಚತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಮುಂಗೃತೆಯ ಪಾಲನೆಯು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು, ದುರ್ಬಲರನ್ನು (Vulnerable)  ಅವಶ್ಯವಿದ್ದಲ್ಲಿ ಮಾತ್ರವೇ ಭೇಟಿ ಮಾಡಬೇಕು. ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು ಮಾಸ್ಕ್ ಧರಿಸುವಂತೆ ಸಲಹೆ ನೀಡಿದ್ದಾರೆ.

 ಅಂತರರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ಕ್ ಧರಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.  

ಧಾರವಾಡ ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗೃತಾ ಕ್ರಮಗಳು :  ಜಿಲ್ಲೆಯಲ್ಲಿ ಕೋವಿಡ್–19 ನಿಯಂತ್ರಣಕ್ಕಾಗಿ ಎಲ್ಲ ಅಗತ್ಯ ಕ್ರಮಗಳನ್ನು ಕೈಕೊಳ್ಳಲಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ, ಧಾರವಾಡ ಜಿಲ್ಲಾ ಆಸ್ಪತ್ರೆ   ಮತ್ತು ಕಲಘಟಗಿ, ನವಲಗುಂದ ಮತ್ತು ಕುಂದಗೋಳ ತಾಲೂಕಾ ಆಸ್ಪತ್ರೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್-19 ರ ಚಿಕಿತ್ಸೆಗಾಗಿ ವಿವಿಧ ಆಸ್ಪತೆಗಳಲ್ಲಿ ಒಟ್ಟು 5,450 ಹಾಸಿಗೆಗಳು ಲಭ್ಯವಿವೆ. 1,666 ಆಕ್ಸಿಜನ್ ಹಾಸಿಗೆಗಳು, 565 ಐ.ಸಿ.ಯು. ಹಾಸಿಗೆಗಳು, 205 ವೆಂಟಿಲೇಟರ್ಸ್ ಹಾಸಿಗೆಗಳು, 500 ಆಕ್ಷಿಜನ್ ಕಾನಸೆಂಟ್ರೇಟರ್ಸ್, 1,307  ಆಕ್ಷಿಜನ್ ಸಿಲಿಂಡರ್‍ಗಳು, 15 ಪಿ.ಎಸ್.ಎ ಪ್ಲ್ಯಾಂಟ್‍ಗಳು ಹಾಗೂ 21 ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಸ್ಟೋರೆಜ್ ಟ್ಯಾಂಕ್‍ಗಳು ಲಭ್ಯವಿದ್ದು, ಎ  ಸುಸ್ಥಿತಿಯಲ್ಲಿವೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆ   ಮತ್ತು  ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಯಲ್ಲಿ ಕೋವಿಡ್–19 ಪರೀಕ್ಷೆ ಕೈಗೊಳ್ಳಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ.  ಮತ್ತು ಆಸ್ಪತ್ರೆ ಮುಖ್ಯಸ್ಥರಿಗೆ ಕೂಡಾ ಕೋವಿಡ್–19 ನ್ನು ಎದುರಿಸುವ ನಿಟ್ಟಿನಲ್ಲಿ ಅಗತ್ಯ ಸೌಲಭ್ಯಗಳೊಂದಿಗೆ ಸನ್ನದ್ಧರಾಗುವಂತೆ ಸೂಚಿಸಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ರ ಪ್ರಕರಣವು ವರದಿಯಾಗಿಲ್ಲಾ. ಸಾರ್ವಜನಿಕರು ಯಾವುದೇ ಗಾಬರಿ ಪಡುವ ಅಗತ್ಯವಿಲ್ಲ. ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲನೆ ಮಾಡಬೇಕು ಹಾಗೂ ಕೋವಿಡ್-19 ರ ಲಕ್ಷಣಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...