1ರಿಂದ 9ನೇ ತರಗತಿಗಳಿಗೆ ಪೈನಲ್ ಪರೀಕ್ಷೆಯಿಲ್ಲ. ವಿದ್ಯಾಗಮ, ಆನ್‌ಲೈನ್ ಚಟುವಟಿಕೆ ಆಧರಿಸಿ ಮೌಲ್ಯಾಂಕನ ವಿಶ್ಲೇಷಣೆ ಫಲಿತಾಂಶ

Source: SO News | By Laxmi Tanaya | Published on 21st April 2021, 7:58 AM | State News | Don't Miss |

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ  ಒಂದನೇ ತರಗತಿಯಿಂದ ಒಂಭತ್ತನೇ ತರಗತಿಗಳಿಗೆ ಪರೀಕ್ಷೆ ನಡೆಸೋದಿಲ್ಲ. ವಿದ್ಯಾಗಮ, ಆನ್‌ಲೈನ್ ಸೇರಿದಂತೆ ಇನ್ನಿತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಆಧರಿಸಿ ಮೌಲ್ಯಾಂಕನ ವಿಶ್ಲೇಷಣೆ ಮೂಲಕ ಫಲಿತಾಂಶ ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

 ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಕ್ಕಳ ತರಗತಿ, ವಾರ್ಷಿಕ ಮೌಲ್ಯಾಂಕನ, ಪರೀಕ್ಷೆ ಕುರಿತಂತೆ ಚರ್ಚಿಸಲು ಶಿಕ್ಷಕರ ಸಂಘಟನೆ, ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು, ಪೋಷಕರ ಪ್ರತಿನಿಧಿಗಳು ಮತ್ತು ಶಿಕ್ಷಣ ತಜ್ಞರ ಸಭೆಗಳನ್ನು ನಡೆಸಿ ಎಲ್ಲ ಆಯಾಮಗಳನ್ನು ಗಮನದಲ್ಲಿಟ್ಟುಕೊಂಡು, ಮೌಲ್ಯಾಂಕನ ವಿಶ್ಲೇಷಣೆ ಫಲಿತಾಂಶ ನೀಡಲು ನಿರ್ಧರಿಸಲಾಗಿದೆ ಎಂದರು. 

1ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು, ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್‌ಲೈನ್ ಮೂಲಕ ತರಗತಿ ನಿರ್ವಹಿಸಿದ್ದಲ್ಲಿ ಆ ಸಂದರ್ಭದಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹಕೆಲಸ ಇತರ ಚಟುವಟಿಕೆಗಳನ್ನಾಧರಿಸಿ ಶಾಲಾ ಹಂತದಲ್ಲಿ ಸಿಸಿಇ ನಿಯಮಗಳಂತೆ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಮುಂದಿನ ತರಗತಿಗೆ ಭಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಕೈ ಏ.30ರೊಳಗೆ ನಿರ್ವಹಿಸಿ ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

 ಒಂದರಿಂದ ಐದನೇ ತರಗತಿವರೆಗೆ ಶಾಲಾ ಹಂತದಲ್ಲಿ ಮಕ್ಕಳ ಪ್ರಗತಿ ವಿಶ್ಲೇಷಿಸಿ ಎಲ್ಲ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ಯ ಭಡ್ತಿ ನೀಡಲಾಗುವುದು ಹಾಗೂ ಈ ಮಕ್ಕಳಿಗೆ ಪ್ರತ್ಯೇಕ ಆನ್ ಲೈನ್ ಇಲ್ಲವೇ ಆಫ್ ಲೈನ್ ಮೂಲಕ ಮೌಲ್ಯಾಂಕನ ಮಾಡಬಾರದು.

1ರಿಂದ 9ನೇ ತರಗತಿಗಳ ಮಕ್ಕಳು ಭೌತಿಕವಾಗಿ ತರಗತಿಗಳಿಗೆ ಹಾಜರಾಗುತ್ತಿದ್ದರು. ದೂರದರ್ಶನ,  ಇ-ಕಲಿಕಾ, ಆನ್‌ಲೈನ್‌ ಸೇರಿದಂತೆ ವಿವಿಧ ಪ್ರಕಾರದಲ್ಲಿ ಪಾತ ಪ್ರವಚನ ಆಲಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಈವರೆಗೂ ಪೂರೈಸಿದ ಚಟುವಟಿಕೆಗಳನ್ನು ಆಧರಿಸಿ ಮಾತ್ರ ಮೌಲ್ಯಂಕನ ಮಾಡಲು ತಿಳಿಸಿರುವುದರಿಂದ ಈ ಮಕ್ಕಳಿಗೆ ಪ್ರತ್ಯೇಕ ಆನ್‌ಲೈನ್ -ಆಫ್ ಲೈನ್ ಮೂಲಕ ಮೌಲ್ಯಾಂಕನ ಮಾಡಬಾರದು.

# ಈ ಮೌಲ್ಯಾಂಕನದ ಉದ್ದೇಶ ವಿದ್ಯಾರ್ಥಿಗಳನ್ನು ಉತ್ತೀರ್ಣ, ಅನುತ್ತೀರ್ಣ ಎಂದು ತೀರ್ಮಾನಿಸುವುದಲ್ಲ. ಬದಲಾಗಿ ಅವರ ಕಲಿಕೆಯ ಪ್ರಗತಿ ಹಾಗೂ ಕೊರತೆಯನ್ನು ತಿಳಿದು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಸೇತು-ಬಂಧ ಕಾರ್ಯಕ್ರಮವನ್ನು ನಡೆಸಿ ಈ ಕೊರತೆಯನ್ನು ತುಂಬಲು ಕ್ರಮ ವಹಿಸಲು ಶಾಲಾ ಯೋಜನೆಯನ್ನು ತಯಾರಿಸಲಾಗುತ್ತದೆ.

ಸಿಬಿಎಸ್ಸಿ, ಐಸಿಎಸ್ಪಿ ಮಂಡಳಿ ಪರೀಕ್ಷೆಗಳನ್ನು ಪೂರ್ಣಗೊಳಿಸಲಾಗಿದೆ ಹಾಗೂ ರಾಜ್ಯ ಪಠ್ಯಕ್ರಮ ಕಲಿಸುವ ಶಾಲೆಗಳಲ್ಲಿ ಈಗಾಗಲೇ ಸಂಕಲನಾತ್ಮಕ ಮೌಲ್ಯಾಂಕನವನ್ನು ಪೂರ್ಣಗೊಳಿಸಲಾಗಿದೆ. ಹಾಗೆಯೇ ಕೆಲ ಶಾಲೆಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಪರೀಕ್ಷೆಗಿಂತ ಕಲಿಕೆ ಮುಖ್ಯ: 
ಪರೀಕ್ಷೆಗಿಂತ ಕಲಿಕೆ ಮುಖ್ಯವಾಗಿದ್ದು, ಪರೀಕ್ಷೆಗಳ ಮೂಲ ಉದ್ದೇಶವೇ ಕಲಿಕೆಯಲ್ಲಿನ ತೊಡಕುಗಳನ್ನು ಗುರುತಿಸಿ ಕಲಿಕೆಯನ್ನು ಮತ್ತಷ್ಟು ಉತ್ತಮಗೊಳಿಸುವುದು, ಹಾಗೆಯೇ ಎಲ್ಲ ಮಕ್ಕಳು ಕಲಿಕಾ ಮಟ್ಟವನ್ನು ಸಾಧಿಸಬೇಕಾಗಿರುವುದರಿಂದ ಇಲಾಖೆ ವಿಶೇಷವಾಗಿ ‌ಸೇತುಬಂಧ ಹಾಗೂ ವೇಗವರ್ಧಿತ ಕಲಿಕಾ ಕಾರ್ಯಕ್ರಮದ ಮೂಲಕ ಮುಂದಿನ ಶೈಕ್ಷಣಿಕ ವರ್ಷ 2021-22 ಪ್ರಾರಂಭವಾಗುವ ಮುನ್ನ ಎಲ್ಲ ಮಕ್ಕಳು ತರಗತಿವಾರು ವಿಷಯವಾರು ನಿಗದಿತ ಕಲಿಕೆಯನ್ನು ಪೂರ್ಣಗೊಳಿಸುವ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ನಿರಂತರ ಮೌಲ್ಯಮಾಪನದ ಅನ್ವಯ ಸಂಕಲನಾತಕ ಮೌಲ್ಯಾಂಕನ ಮಾಡಬಹುದೆಂಬ ಸಲಹೆಗಳನ್ನು ಶಿಕ್ಷಣ ತಜ್ಞರು ವ್ಯಕ್ತಪಡಿಸಿದ್ದಾರೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Read These Next

ಕೋವಿಡ್ ನಿಯಂತ್ರಣ ಕುರಿತು ತಜ್ಞ ವೈದ್ಯರ ಸಲಹೆ ಕೇಳಿದ ಸಿಎಂ. ಬಳ್ಳಾರಿ ತಜ್ಞ ವೈದ್ಯ ಡಾ.ಶ್ರೀನಿವಾಸಲು ಭಾಗಿ. ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ: ಸಿಎಂ ಬಿಎಸ್‍ವೈ

ಬಳ್ಳಾರಿ : ಕೋವಿಡ್ ಕರ್ತವ್ಯ ನಿರತ ವೈದ್ಯರು ಹಾಗೂ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ...

ರಾಜ್ಯದಲ್ಲಿ ಕೊರೊನಾ, ಲಸಿಕೆ ಪೂರೈಕೆ ಸಂಕಟದ ನಡುವೆ ಡಯಾಲಿಸೀಸ್ ರೋಗಿಗಳಿಗೂ ಆತಂಕ ತಂದ ಸರಕಾರ; ಸೇವೆಯಿಂದ ಹಿಂದೆ ಸರಿಯಲು ಬಿ.ಆರ್.ಶೆಟ್ಟಿ ಫೌಂಡೇಶನ್ ನಿರ್ಧಾರ

ಸರಿಯಾದ ಪೂರ್ವ ತಯಾರಿ, ವ್ಯವಸ್ಥಿತ ಕಾರ್ಯಯೋಜನೆ ಇಲ್ಲದೇ ಕೊರೊನಾ ಸೋಂಕು ನಿಯಂತ್ರಣ, ಲಸಿಕೆ ಪೂರೈಕೆ ಕೆಲಸ ಕಾರ್ಯಗಳ ನಡುವೆ ಬಿದ್ದು ...

ಕುಂದಾಪುರ: ಕುಂದಾಪುರ, ಉಳ್ಳಾಲ, ಕಾಪುವಿನಲ್ಲಿ ಕಡಲ್ಕೊರೆತ, ಮರವಂತೆಯಲ್ಲಿ ತೆಂಗಿನಮರ, ಮೀನುಗಾರಿಕಾ ಶೆಡ್‌ಗಳು ಸಮುದ್ರಪಾಲು, ಸೋಮೇಶ್ವರದಲ್ಲಿ ಆವರಣ ಗೋಡೆ ಕುಸಿತ

ವಾಯುಭಾರ ಕುಸಿತದಿಂದ ಪಶ್ಚಿಮದ ಅರಬಿ ಸಮುದ್ರದಲ್ಲಿ ಉಂಟಾದ ತೌಕ್ತೆ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳಲಾರಂಭಿಸಿದ್ದು

*ಕಲ್ಲಡ್ಕದಲ್ಲಿ ಬಿಜೆಪಿ ಕರ‍್ಯರ‍್ತರಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಅರೋಪಿಗಳ ಮೇಲೆ ಇಲಾಖೆ ಯಾಕಾಗಿ ಕ್ರಮ ಕೈಗೊಳ್ಳತ್ತಿಲ್ಲ : ಎಸ್ ಡಿ ಪಿ ಐ*

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಇಂದು ಲಾಕ್ಡೌನ್ ಅವದಿ ಮುಗಿದ ನಂತರ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸುತ್ತಿದ್ದ ಬಂಟ್ವಾಳ ನಗರ ...

ಉಡುಪಿ: ಕರಾವಳಿಯಲ್ಲಿ ಇಂದು, ನಾಳೆ ರೆಡ್ ಅಲರ್ಟ್, ಅರಬಿ ಸಮುದ್ರದಲ್ಲಿ ತೌಕ್ತೆ ಚಂಡಮಾರುತ ಭೀತಿ

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ 'ತೌಕ್ತೆ' ಹೆಸರಿನ ಚಂಡಮಾರುತ ಉಂಟಾಗಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ...

ಕೋವಿಡ್ ನಿಯಂತ್ರಣ ಕುರಿತು ತಜ್ಞ ವೈದ್ಯರ ಸಲಹೆ ಕೇಳಿದ ಸಿಎಂ. ಬಳ್ಳಾರಿ ತಜ್ಞ ವೈದ್ಯ ಡಾ.ಶ್ರೀನಿವಾಸಲು ಭಾಗಿ. ವೈದ್ಯಕೀಯ ಸಿಬ್ಬಂದಿ ಅಮೂಲ್ಯ ಆಸ್ತಿ: ಸಿಎಂ ಬಿಎಸ್‍ವೈ

ಬಳ್ಳಾರಿ : ಕೋವಿಡ್ ಕರ್ತವ್ಯ ನಿರತ ವೈದ್ಯರು ಹಾಗೂ ತಜ್ಞ ವೈದ್ಯರೊಂದಿಗೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ...

ತೌಕ್ತೆ ಚಂಡಮಾರುತ ದ ಎಫೆಕ್ಟ್ ಗೆ ತತ್ತರಿಸಿದ ಉತ್ತರಕನ್ನಡ ಕರಾವಳಿ. ಮನೆಗಳಿಗೆ ನುಗ್ಗಿದ ನೀರು, ಆಸ್ತಿಪಾಸ್ತಿಗೆ ಹಾನಿ.

ಕಾರವಾರ : ತೌಕ್ತೆ ಚಂಡಮಾರುತದ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ತಟ್ಟಿದೆ. ಪರಿಣಾಮವಾಗಿ ಜಿಲ್ಲೆಯ ಕಡಲಂಚಿನಲ್ಲಿ ...

ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಬಳಕೆಯ ಬಗ್ಗೆ ನೌಕಾದಳದ ಅಧಿಕಾರಿಗಳಿಂದ ಮಾಹಿತಿ

ಪ್ರಸಕ್ತವಾಗಿ ಕೋವಿಡ್ ಕೇಂದ್ರಗಳಿಗೆ ಆಮ್ಲಜನಕ ಬೇಡಿಕೆ ಹೆಚ್ಚುತ್ತಿದ್ದು, ಆಮ್ಲಜನಕ ಬಳಕೆಯ ಸಂದರ್ಭದಲ್ಲಿ ಯಾವುದೇ ಅನಾಹುತ ...