ಕಾಂಗ್ರೆಸ್ ನಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆ ಮಾಡಿಕೊಳ್ಳಬೇಕಿದೆ-ಗುಲಾಂ ನಬಿ ಆಜಾದ್

Source: ANI | Published on 23rd November 2020, 12:31 AM | National News |

 


 
ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ, ಸುಧಾರಣೆಯನ್ನು ಎದುರು ನೋಡುತ್ತಿರುವುದಾಗಿ ಪಕ್ಷದ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಇತರ ಅಭ್ಯರ್ಥಿಗಳು ಇಲ್ಲ, ಪಕ್ಷಕ್ಕೆ ಅಗತ್ಯವಾದದ್ದನ್ನು ನಿರ್ದೇಶಿಸುವವರಲ್ಲಿ ನಾವೆಲ್ಲಾ ನಂಬಿಕೆ ಹೊಂದಿದ್ದೇವೆ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಬಿಹಾರ ವಿಧಾನಸಭಾ ಹಾಗೂ ಉಪ ಚುನಾವಣೆಯಲ್ಲಿ ಕಳಪೆ ಸಾಧನೆ ಬಗ್ಗೆ ಆತಂಕಗೊಂಡಿದ್ದೇವೆ. ಸೋಲಿಗೆ ನಾಯಕತ್ವವನ್ನು ದೂಷಿಸುವುದಿಲ್ಲ, ತಳಮಟ್ಟದ ಕಾರ್ಯಕರ್ತರ ಜೊತೆಗೆ ಸಂಪರ್ಕ ಕಳೆದುಕೊಂಡಿದ್ದೇ ಸೋಲಿಗೆ ಕಾರಣ ಎಂದು ಹೇಳಿದರು.
ಚುನಾವಣೆ ವೇಳೆ ಅಭ್ಯರ್ಥಿಗಳು ಟಿಕೆಟ್ ಸಿಕ್ಕ ಕೂಡಲೇ 5 ಸ್ಟಾರ್ ಹೊಟೇಲ್‌ಗಳಲ್ಲಿ ರೂಂ ಬುಕ್ ಮಾಡಿಬಿಡ್ತಾರೆ. ಪಕ್ಷದ ಪರ ಪ್ರಚಾರಕ್ಕೆ ಕಚ್ಚಾ ರಸ್ತೆಗಳಲ್ಲಿ ತೆರಳೋದಿಲ್ಲ. ಈ 5 ಸ್ಟಾರ್ ಸಂಸ್ಕೃತಿ ಹೋಗುವವರೆಗೂ ಗೆಲುವು ಅಸಾಧ್ಯ ಎಂದು  ಆಜಾದ್ ತಿಳಿಸಿದ್ದಾರೆ.
ನಮ್ಮ ಕಾರ್ಯನಿರ್ವಹಣಾ ವಿಧಾನವನ್ನು ಪ್ರತಿ ಹಂತದಲ್ಲಿಯೂ ಸುಧಾರಣೆ ಮಾಡಿಕೊಳ್ಳಬೇಕಿದೆ. ಇಲ್ಲವಾದರೆ, ಅಭಿವೃದ್ಧಿ ಕಾಣಲು ಸಾಧ್ಯವಿಲ್ಲ ಎಂದಿರುವ ಗುಲಾಂ ನಬಿ ಆಜಾದ್, ಪಕ್ಷದ ವಿವಿಧ ಸ್ಥರಗಳಲ್ಲಿ ನೇಮಕಾತಿಗೆ ಚುನಾವಣೆಗಳು ನಡೆಯಬೇಕಿದೆ ಎಂದು ಆಗ್ರಹಿಸಿದ್ದಾರೆ

Read These Next

ಪಣಜಿ: ಗೋವಾ ಜಿಎಂಸಿಎಚ್‌ನಲ್ಲಿ ಆಮ್ಲಜನಕದ ಕೊರತೆ; 26 ಸೋಂಕಿತರ ಸಾವು ತನಿಖೆಗೆ ಸಚಿವ ರಾಣೆ ಮನವಿ

ಸರಕಾರಿ ಸ್ವಾಮಿತ್ವದ ಗೋವಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ (ಜಿಎಂಸಿಎಚ್)ಯಲ್ಲಿ ಮಂಗಳವಾರ ಬೆಳಗ್ಗೆ 26 ಕೊರೋನ ಸೋಂಕಿತರು ...

ಗಂಗಾ ನದಿಯಲಿ ಇನ್ನಷ್ಟು ಶವಗಳು ಪತ್ತೆ, ಕೊರೋನ ಸಹಿತ ಇನ್ನಿತರ ಸಾಂಕ್ರಾಮಿಕ ಸೋಂಕು ಹರಡುವ ಭೀತಿ

ಉತ್ತರಪ್ರದೇಶದ ಘಾಝಿಪುರದ ಗಂಗಾ ನದಿ ತೀರಕ್ಕೆ ಮಂಗಳವಾರ ಹಲವು ಮೃತದೇಹಗಳು ತೇಲಿ ಬಂದಿವೆ. ಸೋಮವಾರ 100ಕ್ಕೂ ಅಧಿಕ ಮೃತದೇಹಗಳು ತೇಲಿ ...

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜ ಆಗಬೇಕೆಂಬ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್.

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ಸರಬರಾಜ ಆಗಬೇಕೆಂಬ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್.

ಜನರ ಜೀವನವನ್ನು ಕೇಂದ್ರವಾಗಿಸಿ, ನಿಮ್ಮ ಕುರುಡು ದುರಹಂಕಾರವನ್ನಲ್ಲ: ಸೆಂಟ್ರಲ್ ವಿಸ್ಟಾ ಯೋಜನೆ ಕುರಿತು ರಾಹುಲ್ ಗಾಂಧಿ ವಾಗ್ದಾಳಿ

ಕೇಂದ್ರ ಸರ್ಕಾರದ "ಸೆಂಟ್ರಲ್ ವಿಸ್ಟಾ " ಯೋಜನೆ ಕುರಿತು ಟೀಕಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅದೊಂದು "ಕ್ರಿಮಿನಲ್ ವೇಸ್ಟ್" ...