ಪ್ರತಿಯೊಬ್ಬರಲ್ಲಿಯೂ ಪರಿಸರ ಕಾಳಜಿ ಇರಬೇಕು : ಅಕ್ರಂ ಪಾಷ

Source: S.O. News Service | By MV Bhatkal | Published on 3rd July 2019, 3:19 PM | State News | Don't Miss |

ಹಾಸನ: ಪರಿಸರದ ಬಗ್ಗೆ ಪ್ರತಿಯೊಬ್ಬರಿಗೂ ಕಾಳಜಿ ಇರಬೇಕು ಹಾಗೂ ಅದಕ್ಕೆ ಪೂರಕ ಕೆಲಸಗಳಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದ್ದಾರೆ.
ನಗರದ ಈದ್ಗಾ ಮೈದಾನದಲ್ಲಿಂದು 250 ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಜಲಾಮೃತ, ಜಲಮರುಪೂರ್ಣ, ಹಸಿರೀಕರಣ ಇನ್ನಿತರ ಯೋಜನೆಗಳನ್ನು ಪೂರ್ಣಗೊಳಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಅವರು ತಿಳಿಸಿದರು.
ಮುಂಬರುವ ದಿನಗಳಲ್ಲಿ ಎದುರಾಗಬಹುದಾದ ನೀರಿನ ಅಭಾವವನ್ನು ಹೋಗಲಾಡಿಸಲು ಕೆರೆಗಳ ಪುನಷ್ಚೇತನ ಹಾಗೂ ಗಿಡಗಳನ್ನು ನೆಡುವ ಜೊತೆಗೆ ಅವುಗಳನ್ನು ಪೋಷಣೆ ಮಾಡುವುದು ಬಹಳ ಮುಖ್ಯವಾಗಿದ್ದು ಪ್ರತಿಯೊಬ್ಬರಲ್ಲಿಯೂ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ತಿಸಿದರು.
ಇದೇ ವೇಳೆ ಮಾತನಾಡಿದ ಹಸಿರು ಭೂಮಿ ಪ್ರತಿóಷ್ಠಾನದ ಪ್ರಮುಖರಾದ ಆರ್.ಪಿ ವೆಂಕಟೇಶ್ ಮೂರ್ತಿ ಅವರು ಪ್ರತಿಯೊಬ್ಬರು ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಕೆರೆಗಳ ಅಭಿವೃದ್ದಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.
ಸಮಾಜಕ್ಕೆ ತಮ್ಮದೇ ಆದ ರಚನಾತ್ಮಕ ಕೊಡುಗೆಗಳನ್ನು ನೀಡಿ ಪರಿಸಕ್ಕೆ ಪೂರಕ ಕೆಲಸಗಳಲ್ಲಿ ಸರ್ಕಾರದ ಜೊತೆ ಕೈ ಜೋಡಿಸುವ ಮೂಲಕ ಜಿಲ್ಲೆಯನ್ನು ಮಾದರಿಯನ್ನಾಗಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
ಈದ್ಗಾ ಸಮಿತಿಯ ಅಧ್ಯಕ್ಷರಾದ ಅಶ್ವಕ್, ನಗರಸಭಾ ಸದಸ್ಯರುಗಳಾದ ರಫಿಕ್, ಅಶು, ಮಾಜಿ ನಗರಸಭಾ ಸದಸ್ಯರಾದ ಅಬ್ದುಲ್ ರಹೀಂ, ಸಮಾಜ ಸೇವಕರಾದ ಎಸ್.ಎಸ್.ಪಾಷ ಮತ್ತಿತರರು ಹಾಜರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...