ಬಜೆಟ್‌ನಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಇರಬೇಕು; ಸಿದ್ದರಾಮಯ್ಯ

Source: Vb News | By I.G. Bhatkali | Published on 21st February 2023, 4:58 PM | State News |

ಬೆಂಗಳೂರು: ಬಜೆಟ್ ಎಂದರೆ ಅಂಕಿಅಂಶಗಳ ಕಸರತ್ತಲ್ಲ, ಪ್ರತಿಯೊಬ್ಬ ಪ್ರಜೆಯ ಲೆಕ್ಕಾಚಾರವಿದು, ಪ್ರತಿ ಮನೆಯ ಗೃಹಿಣಿಯ ಆಯವ್ಯಯವಿದು. ಬಜೆಟ್ ಎಂದರೆ ಹಿನ್ನೋಟ, ಮುನ್ನೋಟ ಎರಡೂ ಇರಬೇಕು. ಜನರ ಸಮಸ್ಯೆಗಳಿಗೆ ನಾವು ಹೇಗೆ ಪರಿಹಾರ ಕೊಡಲು ಪ್ರಯತ್ನ ಮಾಡುತ್ತೇವೆ ಎಂಬ ಮಾಹಿತಿ ಇರಬೇಕು. ಜೊತೆಗೆ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಇರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಕುರಿತ ಚರ್ಚೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 3,09,182 ಕೋಟಿ ರೂ.ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಕಳೆದ ವರ್ಷದ ಬಜೆಟ್ ಗಾತ್ರ 2,65,720 ಕೋಟಿ ರೂ.ಗಳು. ತೆರಿಗೆ ಸಂಗ್ರಹ ಹೆಚ್ಚಾಗಿರುವುದರಿಂದ ಬಜೆಟ್ ಗಾತ್ರ ಹೆಚ್ಚಾಗಿದೆ ಎಂದರು.

ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.26ರಷ್ಟು ತೆರಿಗೆ ಸಂಗ್ರಹದಲ್ಲಿ ಬೆಳವಣಿಗೆ ಇದೆ. ಕಳೆದ ವರ್ಷ ಬಜೆಟ್ ಮಂಡಿಸಿದಾಗ 14,699 ಕೋಟಿ ರೂ. ವಿತ್ತೀಯ ಕೊರತೆ ಇತ್ತು. ಪರಿಷ್ಕೃತ ಅಂದಾಜಿನಲ್ಲಿ 5,095 ಕೋಟಿ ರೂ. ಗೆ ಇಳಿಕೆಯಾಗಿದೆ ಎಂದು ಹೇಳಿದ್ದಾರೆ. ಮುಂದಿನ ವರ್ಷ ತೆರಿಗೆ ಸಂಗ್ರಹ ಹೆಚ್ಚಾಗುವುದರಿಂದ ರಾಜಸ್ವ ಸಂಗ್ರಹದ ಉಳಿಕೆ ಮಾಡುತ್ತೇವೆ ಎಂದಿದ್ದಾರೆ. ಮುಂದಿನ ವರ್ಷ ಈ ಸರಕಾರ ಇರುವುದಿಲ್ಲ, ಬಿಜೆಪಿ ಸರಕಾರ ರಾಜಸ್ವ ಉಳಿಕೆ ಬಜೆಟ್ ಮಂಡನೆ ಮಾಡಲು ಸಾಧ್ಯವಿಲ್ಲ ಎಂದು ಅವರು ಟೀಕಿಸಿದರು.

ಬಜೆಟ್‌ನಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಇರಬೇಕು. ಆದರೆ ಈ ಬಜೆಟ್ ನಲ್ಲಿ ಎಲ್ಲೂ ಜನರಿಗೆ ಸತ್ಯ ಹೇಳುವ ಕೆಲಸ ಮಾಡಿಲ್ಲ. ಬಜೆಟ್ ಮೂಲಕ ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ರಾಜ್ಯಪಾಲರ ಭಾಷಣದ ಬಗ್ಗೆ ವಂದನಾ ನಿರ್ಣಯ ಮಂಡಿಸುವಾಗ 2018ರಲ್ಲಿ ಬಿಜೆಪಿ ಪಕ್ಷ ರಾಜ್ಯದ ಜನರಿಗೆ 600 ಭರವಸೆಗಳನ್ನು ನೀಡಿದ್ದರು, ಅದರಲ್ಲಿ ಕೇವಲ ಶೇ.10ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸಿದ್ದಾರೆ ಎಂದಿದ್ದೆ. ಅದಕ್ಕೆ ಬೊಮ್ಮಾಯಿ ಅವರು ಸಿದ್ದರಾಮಯ್ಯ ಸರಕಾರ ಜನರಿಗೆ ನೀಡಿದ್ದ ಭರವಸೆಗಳಲ್ಲಿ ಶೇ.30 ಭರವಸೆಗಳನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.

ನಮ್ಮ ಪ್ರಣಾಳಿಕೆಯನ್ನು ತೆಗೆದುಕೊಂಡು ಬಂದಿದ್ದೇನೆ, ನಾವು ಹೇಳಿದ್ದೆಷ್ಟು, ಈಡೇರಿಸಿದ್ದೆಷ್ಟು? ನೀವು ಹೇಳಿದ್ದೆಷ್ಟು? ಈಡೇರಿಸಿದ್ದೆಷ್ಟು? ಎಂದು ಇಲ್ಲಿ ಚರ್ಚೆಯಾಗಲಿ, ಸುಳ್ಳು ಹೇಳಿ ಜನರಿಗೆ ತಪ್ಪು ಸಂದೇಶ ಹೋಗಬಾರದು. ಚರ್ಚೆಗೆ ನಾನು ಸಿದ್ಧನಿದ್ದೇನೆ, ಇದನ್ನು ಸವಾಲಾಗಿ ಸ್ವೀಕರಿಸಿ ಯಾರಾದರೂ ಚರ್ಚೆಗೆ ಬರುವುದಾದರೆ ಬರಲಿ, ಬಿಜೆಪಿ ಸರಕಾರದ ಶೇ.90ರಷ್ಟು ಭರವಸೆಗಳು ಈಡೇರಿಕೆಯಾಗದೆ ಹಾಗೆಯೇ ಉಳಿದಿದೆ. ಕಳೆದ ಬಜೆಟ್‌ನಲ್ಲಿ ಸರಕಾರ 206 ಹೊಸ ಕಾರ್ಯಕ್ರಮಗಳನ್ನು ಹೇಳಿತ್ತು, ಅದರಲ್ಲಿ 57 ಕಾರ್ಯಕ್ರಮಗಳನ್ನು ಇವತ್ತಿನವರೆಗೆ ಜಾರಿ ಮಾಡಲು ಆಗಿಲ್ಲ ಎಂದು ಅವರು ಟೀಕಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...