ಅತೃಪ್ತ ಶಾಸಕರು ರಾಜಿನಾಮೆ ನೀಡಿದ್ದು ಏಕೆ? ಇಲ್ಲಿದೆ ಕಾರಣ ಓದಿ..

Source: sonews | By Staff Correspondent | Published on 14th July 2019, 9:50 PM | State News | Don't Miss |

ಬೆಂಗಳೂರು: ಮೈತ್ರಿ ಸರ್ಕಾರದ ಅತೃಪ್ತ ಶಾಸಕರು ತಮ್ಮ ರಾಜಿನಾಮೆಗೆ ಕಾರಣವನ್ನು ತಿಳಿಸುತ್ತ ತಮ್ಮ ಕ್ಷೇತ್ರದ ಮತದಾರರಿಗೆ ವಾಟ್ಸಪ್ ಸಂದೇಶವೊಂದನ್ನು ರವಾನಿಸಿದ್ದಾರೆ ಎಂದು ಹೇಳಲಾಗುತ್ತಿದ್ದು ಆ ಕಾರಣ ಏನು ಎನ್ನುವುದನ್ನು ನೀವೆ ಓದಿ ತಿಳಿದುಕೊಳ್ಳಿ..

ಮೈತ್ರಿ ಸರಕಾರದ ಬಿಕ್ಕಟ್ಟಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಹಸ್ತಕ್ಷೇಪ ಹಾಗೂ ಮೈತ್ರಿ ಸರಕಾರದ ವೈಖರಿ ಪ್ರಮುಖ ಕಾರಣವೆಂದು ಅತೃಪ್ತ ಶಾಸಕರು ವಾಟ್ಸಾಪ್ ಸಂದೇಶದ ಮೂಲಕ ಕ್ಷೇತ್ರದ ಮತದಾರರ ಮೊಬೈಲ್‌ಗಳಿಗೆ ತಿಳಿಸಿದ್ದಾರೆ.

ಅತೃಪ್ತ ಶಾಸಕರ ವಿರುದ್ಧ ಅವರು ಪ್ರತಿನಿಧಿಸುವ ಕ್ಷೇತ್ರದ ಜನತೆ ಪ್ರತಿಭಟನೆ ನಡೆಸಿ, ರಾಜೀನಾಮೆ ಹಿಂಪಡೆಯುವಂತೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ರಾಜೀನಾಮೆಗೆ ಕಾರಣಗಳನ್ನು ನೀಡಿರುವ ಅತೃಪ್ತರು, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಹಸ್ತಕ್ಷೇಪವೇ ಮುಖ್ಯ ಕಾರಣವಾಯಿತು. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿಗೆ ದೂರು ಸಲ್ಲಿಸಿದರೂ ಯಾವುದೆ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಮೈತ್ರಿ ಸರಕಾರದ ಕಾರ್ಯವೈಖರಿ ಸರಿಯಿರಲಿಲ್ಲ. ಕಾಂಗ್ರೆಸ್ ಶಾಸಕರ ಪತ್ರಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಕಚೇರಿಯಿಂದ ಸಕರಾತ್ಮಕವಾದ ಯಾವುದೆ ಪ್ರತಿಕ್ರಿಯೆ ಬರುತ್ತಿರಲಿಲ್ಲ. ಈ ಬಗ್ಗೆ ಪಕ್ಷದ ಅಧ್ಯಕ್ಷ, ಸಮನ್ವಯ ಸಮಿತಿಯ ಅಧ್ಯಕ್ಷರಿಗೆ ದೂರು ಸಲ್ಲಿಸಿದ್ದೆವು. ಅವರಿಂದ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಅನಿವಾರ್ಯವಾಗಿ ರಾಜೀನಾಮೆ ಕೊಡಬೇಕಾದ ಪ್ರಸಂಗ ಬಂದಿದೆ.

ಇನ್ನು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ರಾಜಕೀಯ ಹಸ್ತಕ್ಷೇಪವು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಉಂಟು ಮಾಡಿತು. ಕಳೆದ ಒಂದು ವರ್ಷದಿಂದ ಇದೆಲ್ಲವನ್ನು ಸಹಿಸಿಕೊಂಡು ಬಂದೆವು. ಅದರೆ, ಇದು ಮಿತಿ ಮೀರಿದ ಹಂತ ತಲುಪಿದಾಗ ರಾಜೀನಾಮೆ ಸಲ್ಲಿಸುವುದು ಅನಿವಾರ್ಯವಾಯಿತು ಎಂದು ಅತೃಪ್ತ ಶಾಸಕರು ವಾಟ್ಸಾಪ್ ಮೂಲಕ ತಮ್ಮ ಕ್ಷೇತ್ರದ ಜನತೆಗೆ ಮನವೊಲಿಸುವ ಪ್ರಯತ್ನ ಮಾಡಿದ್ದಾರೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...