ಮಂಗಳೂರು: ಸಂವಿಧಾನ ವಿರೋಧಿಸುವವರೇ ದೇಶದ್ರೋಹಿಗಳು: ಬಿ.ಕೆ. ಹರಿಪ್ರಸಾದ್

Source: VB | By S O News | Published on 2nd August 2021, 8:16 PM | Coastal News |

ಮಂಗಳೂರು: ದೇಶದ ಸಂವಿಧಾನ ರಚನೆಯಾದ ಬಳಿಕ ಮೇಲ್ವರ್ಗ, ಹಿಂದುಳಿದ ವರ್ಗ, ಕೆಳವರ್ಗದವರಿಗೆ ಸಮಾನ ಹಕ್ಕು ಬಂದಿದೆ. ಅಂತಹ ಸಂವಿಧಾನವನ್ನು ವಿರೋಧಿ ಸುವವರೇ ನಿಜವಾದ ದೇಶದ್ರೋಹಿಗಳು ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದರು.

ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಹಿಂದುಳಿದ ವರ್ಗಗಳ ದ.ಕ. ಜಿಲ್ಲಾ ಘಟ ಕದ ಅಧ್ಯಕ್ಷ ವಿಶ್ವಾಸ್‌ ಕುಮಾರ್‌ದಾಸ್‌ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ದೇಶದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಷ್ಟ್ರವು ಕವಲುದಾರಿಯಲ್ಲಿದೆ. ಸಂವಿಧಾನ ಬದಲಾವಣೆ ಮಾಡುವ ಹುನ್ನಾರ ನಡೆಯುತ್ತಿದೆ. ಕೆಳವರ್ಗ, ಹಿಂದುಳಿದ ವರ್ಗವನ್ನು ತುಳಿಯಲಾ ಗುತ್ತಿದೆ. ನಮಗೆ ಯಾವತ್ತೂ ನಾಥರಾಂ ಗೋಡ್ಸೆಯ ಚಿಂತನೆ ಬೇಕಾಗಿಲ್ಲ. ಮಹಾತ್ಮಾ ಗಾಂಧಿಯ ಚಿಂತನೆ ಬೇಕಿದೆ. ಪ್ರತಿಯೊಬ್ಬ ಭಾರತೀಯನಿಗೆ ಸಂವಿಧಾನವೇ ಮುಖ್ಯ ವಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ, ಅಧಿಕಾರ, ನ್ಯಾಯ ನೀಡುವ ಶಕ್ತಿ ಸಂವಿಧಾನಕ್ಕಿದೆ. ಇಂತಹ ಪವಿತ್ರ ಸಂವಿಧಾನವನ್ನು ರಾಷ್ಟ್ರಪ್ರೇಮ-ರಾಷ್ಟ್ರ ಭಕ್ತಿಯ ಹೆಸರಿನಲ್ಲಿ ಬದಲಾವಣೆ ಮಾಡಲು ಹೊರಟಿರುವುದು ಖಂಡನೀಯ ಎಂದರು.

ಜಾತಿ-ಧರ್ಮದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಎತ್ತಿಕಟ್ಟಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸಂವಿಧಾನ ರಕ್ಷಣೆ ಮಾಡಿದರೆ ಮಾತ್ರ ಈ ರಾಷ್ಟ್ರಕ್ಕೆ ಉಜ್ಜಲ ಭವಿಷ್ಯವಿದೆ. ಬಹುಸಂಖ್ಯಾತರಾಗಿರುವ ಹಿಂದುಳಿದ ವರ್ಗದವರು ತಮ್ಮ ನ್ಯಾಯ, ರಕ್ಷಣೆಗಾಗಿ ಸಂಘಟಿತರಾಗಬೇಕು ಎಂದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ, ಬಿಜೆಪಿ ಹಿಂದುತ್ವ ವಿಚಾರವನ್ನು ಮುಂದಿಟ್ಟುಕೊಂಡು ರಾಜ್ಯ, ಕೇಂದ್ರದಲ್ಲಿ ಅಧಿಕಾರ ಪಡೆದಿದೆ. ಆದರೆ ಈಗ ಪಶ್ಚಾತ್ತಾಪ ಪಡುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರ ತರುವಲ್ಲಿ ಹಿಂದುಳಿದ ವರ್ಗದ ಸಂಘಟನಾತ್ಮಕ ಪಾತ್ರ ಹಿರಿದಾಗಿದೆ ಎಂದರು.

ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಶಾಸಕ ಯು.ಟಿ. ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಐವನ್ ಡಿಸೋಜ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಎಐಸಿಸಿ ಕಾರ್ಯದರ್ಶಿ ಪಿ.ವಿ. ಮೋಹನ್, ಪಕ್ಷದ ಮುಖಂಡರಾದ ಸುರೇಶ್ ಬಲ್ಲಾಳ್, ಎ.ಸಿ. ಭಂಡಾರಿ, ಶಾಲೆಟ್ ಪಿಂಟೋ, ಸದಾಶಿವ ಉಳ್ಳಾಲ್, ಶಶಿಧರ್ ಹೆಗ್ಡೆ, ಜೋಕಿಂ ಡಿಸೋಜ, ಲಾರೆನ್ಸ್ ಡಿಸೋಜ, ರಾಜಶೇಖರ ಕೋಟ್ಯಾನ್, ಪ್ರಭಾಕರ ಶ್ರೀಯಾನ್, ಗಣೇಶ್ ಪೂಜಾರಿ ಉಪಸ್ಥಿತರಿದ್ದರು.

Read These Next

ಅಂಕೋಲಾದ ಅನ್ನದಂಗಳದಲ್ಲಿ ಮಾತುಕತೆ ಕಾರ್ಯಕ್ರಮ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ. ಕೃಷಿಕರೊಂದಿಗೆ ಸಂವಾದ

ಕಾರವಾರ : ರೈತರ ಏಳಿಗೆಯ ಜೊತೆ ಕೃಷಿಯಲ್ಲಿ ದೇಶ ಸ್ವಾವಲಂಬಿಯಾಗುವ ದೃಷ್ಟಿಯಲ್ಲಿ ಕೇಂದ್ರ ಸರ್ಕಾರವು ರೈತ ಸ್ನೇಹಿ ಸರ್ಕಾರವಾಗಿ ...

ಶಾಲಾ ಕಾಲೇಜುಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಪರಿಶೀಲನೆ.

ಉಡುಪಿ : ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಪಾಲನೆ ಮಾಡುತ್ತಿರುವ ...

ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ - ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ : ಮುಂದಿನ ಎರಡು ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ...