ಹೊಸ ಶಿವಸೇನೆ ಕಟ್ಟುವೆವು; ಉದ್ಧವ್ ಠಾಕ್ರೆ

Source: Vb | By I.G. Bhatkali | Published on 26th June 2022, 12:16 PM | National News | Don't Miss |

ಮುಂಬೈ: ಬೇಕಾದವರು ಪಕ್ಷ ತ್ಯಜಿಸ ಬಹುದು. ಹೊಸ ಶಿವಸೇನೆ ರೂಪಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.

ಪಕ್ಷದ ಕಾರ್ಪೊರೇಟರ್‌ಗಳನ್ನು ಕುರಿತು ವೀಡಿಯೊ ಕಾನ್ಫರೆನ್ಸ್ ನಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ಶಿವಸೇನೆಯ ಸಾಮಾನ್ಯ ಕಾರ್ಯಕರ್ತರು ತನ್ನ ಸಂಪತ್ತು. ಅವರು ತನ್ನೊಂದಿಗೆ ಇರುವವರೆಗೆ ತಾನು ಇತರರ ಟೀಕೆಗಳ ಕುರಿತು ತಲೆಕೆಡಿಸಿಕೊಳ್ಳಲಾರೆ ಎಂದಿದ್ದಾರೆ.

ಶಿವಸೇನೆಗೆ ಅದರದ್ದೇ ಜನರು ದ್ರೋಹ ಎಸಗಿದರು ಎಂದು ಹೇಳಿದ ಅವರು, ಸೇನೆಯ ಬಹುಪಾಲು ಶಾಸಕರು ಗುವಾಹಟಿಯಲ್ಲಿ ಬೀಡು ಬಿಟ್ಟಿರುವ ಏಕನಾಥ್ ಶಿಂದೆ ಅವರೊಂದಿಗೆ ಸೇರಿದ ಬಳಿಕ ತನ್ನ ಸರಕಾರ ಬಿಕ್ಕಟ್ಟು ಎದುರಿಸಿತು ಎಂದರು.

“ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿಮ್ಮಲ್ಲಿ ಹಲವರು ಆಕಾಂಕ್ಷಿಗಳಾಗಿದ್ದರೂ ನಾವು ಈಗಿನ ಬಂಡಾಯಗಾರರಿಗೆ ಟಿಕೆಟ್ ಗಳನ್ನು ನೀಡಿದ್ದೆವು. ನಿಮ್ಮ ಕಠಿಣ ಪರಿಶ್ರಮದಿಂದ ಚುನಾಯಿತರಾದ ಬಳಿಕ ಇವರು ಅಸಮಾಧಾನ ಗೊಂಡಿದ್ದಾರೆ. ಆದರೆ ಈ ನಿರ್ಣಾಯಕ ಸಂದರ್ಭದಲ್ಲಿ ನೀವು ಪಕ್ಷದ ಜೊತೆಗೆ ನಿಂತಿದ್ದೀರಿ. ನಾನು ನಿಮಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಕಾಗದು'' ಎಂದು ಅವರು ಹೇಳಿದರು.

“ಮೈತ್ರಿಕೂಟದ ಪಾಲುದಾರರಿಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸುವಂತೆ ನಾನು ಏಕನಾಥ್ ಶಿಂದೆಗೆ ಹೇಳಿದ್ದೆ. ಸೇನೆ ಬಿಜೆಪಿಯೊಂದಿಗೆ ಕೈ ಜೋಡಿಸಬೇಕು ಎಂದು ಶಾಸಕರು ತನಗೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ತಿಳಿಸಿದ್ದರು. ಅವರನ್ನು ನನ್ನ ಬಳಿ ಕರೆದುಕೊಂಡು ಬನ್ನಿ, ನಾವು ಈ ಬಗ್ಗೆ ಚರ್ಚಿಸೋಣ ಎಂದು ಹೇಳಿದ್ದೆ.

ಬಿಜೆಪಿ ನಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದೆ, ಅದು ಭರವಸೆಗಳಿಗೆ ಗೌರವ ನೀಡಲಿಲ್ಲ. ಹಲವು ಬಂಡಾಯ ಶಾಸಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದುದರಿಂದ ಅವರು ಬಿಜೆಪಿಯೊಂದಿಗೆ ಹೋದರೆ, ಅದು ರದ್ದುಗೊಳ್ಳುತ್ತದೆ. ಅವರು ನನ್ನೊಂದಿಗಿದ್ದರೆ ಜೈಲಿಗೆ ಹೋಗಬೇಕಾಗುತ್ತದೆ' ಎಂದು ಠಾಕ್ರೆ ತಿಳಿಸಿದರು. ಒಂದು ವೇಳೆ ಶಿವಸೇನೆ ಕಾರ್ಯಕರ್ತರು ಮುಖ್ಯಮಂತ್ರಿಯಾಗುವುದಿದ್ದರೆ, ನೀವು ಬಿಜೆಪಿಯೊಂದಿಗೆ ಹೋಗಿ. ಆದರೆ, ನೀವು ಕೇವಲ ಉಪ ಮುಖ್ಯಮಂತ್ರಿ ಆಗುವುದಿದ್ದರೆ, ನನಗೆ ತಿಳಿಸಿ, ನಾನು ನಿಮ್ಮನ್ನು ಉಪ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಶಿಂದೆಯನ್ನು ಪರೋಕ್ಷವಾಗಿ ಉಲ್ಲೇಖಿಸಿ ಉದ್ಧವ್ ಠಾಕ್ರೆ ಹೇಳಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...