ನಕಲಿ ಚುನಾವಣಾ ಗುರುತಿನ ಚೀಟಿ, ಆಧಾರ್ ಸೃಷ್ಟಿ ಮೂವರ ಬಂಧನ

Source: Vb | By I.G. Bhatkali | Published on 22nd October 2023, 7:54 AM | State News |

ಬೆಂಗಳೂರು: ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡ್, ಚಾಲನೆ ಪರವಾನಿಗೆ ಸೇರಿದಂತೆ ವಿವಿಧ ದಾಖಲೆಗಳನ್ನು ನಕಲಿಯಾಗಿ ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿರುವುದಾಗಿ ವರದಿಯಾಗಿದೆ.

ಮೌನೇಶ್ ಕುಮಾರ್, ಭಗತ್‌ ಹಾಗೂ ರಾಘವೇಂದ್ರ ಬಂಧಿತರು.

ಸಚಿವ ಭೈರತಿ ಸುರೇಶ್‌ ಬೆಂಬಲಿಗನಾಗಿ ಗುರುತಿಸಿಕೊಂಡಿದ್ದ ಮೌನೇಶ್ ಕುಮಾರ್, ಹೆಬ್ಬಾಳ ಠಾಣಾ ವ್ಯಾಪ್ತಿಯ ಕನಕ ನಗರದಲ್ಲಿ ಎಂಎಸ್‌ಎಲ್ ಟೆಕ್ನ ಸೊಲ್ಯೂಶನ್ ಎಂಬ ಕಚೇರಿ ನಡೆಸುತ್ತಿದ್ದ. ಇದೇ ಕಚೇರಿ ಮೇಲೆ ಅ.20ರಂದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಮೌನೇಶ್ ಕುಮಾರ್ ಹಾಗೂ ಭಗತ್ ಮತ್ತು ರಾಘವೇಂದ್ರನನ್ನು ಬಂಧಿಸಿದ್ದಾರೆ. ಯಾವುದೇ ಕ್ಷೇತ್ರದ ಚುನಾವಣಾ ಗುರುತಿನ ಚೀಟಿ ಅಥವಾ ಯಾವುದೇ ವಿಳಾಸ ಅಥವಾ ಫೋಟೊಗೆ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ಆರೋಪ ಮೌನೇಶ್ ವಿರುದ್ಧ ಕೇಳಿ ಬಂದಿತ್ತು. ಸದ್ಯ ಹೆಬ್ಬಾಳ ಪೊಲೀಸರು ಕೂಡ ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಕಂಪ್ಯೂಟರ್‌ಗಳು ಕೆಲವು ಆಧಾರ್ ಮತ್ತು ಚುನಾವಣಾ ಗುರುತಿನ ಚೀಟಿಯನ್ನು ತಯಾರು ಮಾಡಲು ಬಳಸುತ್ತಿದ್ದ ಸಲಕರಣೆಗಳನ್ನು ಜಪ್ತಿ ಮಾಡಿದ್ದಾರೆ ಎಂದು ಗೊತ್ತಾಗಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...