ಮಂಗಳೂರಿನಲ್ಲಿ ಮಕ್ಕಳ ಮಾರಾಟ ಮಾಡುತ್ತಿದ್ದ ಮೂವರ ಬಂಧನ.

Source: SO News | By Laxmi Tanaya | Published on 5th March 2021, 6:48 PM | Coastal News |

ಮಂಗಳೂರು : ಮೂರ್ನಾಲ್ಕು ತಿಂಗಳ ಮಕ್ಕಳನ್ನು ಕಾನೂನುಬಾಹಿರವಾಗಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ.

 ಆರೋಪಿಯೊಂದಿಗೆ ಮತ್ತಿಬ್ಬರು ಮಹಿಳೆಯರನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತ ಆರೋಪಿಯನ್ನು ಮುಲ್ಕಿ ನಿವಾಸಿ ರಾಯನ್ (30) ಎಂದು ಗುರುತಿಸಲಾಗಿದೆ. ಬಂಧಿತನನ್ನು ಮಂಗಳೂರಿನ ಕದ್ರಿ ಹೋಟೆಲ್ ಒಂದರಲ್ಲಿ ಸೆರೆ ಹಿಡಿಯಲಾಗಿದೆ. 

ಮಗುವನ್ನು ಖರೀದಿಸಿ ಮಾರಾಟ ಮಾಡಿದ ಕವಿತಾ ಮತ್ತು ಕವಿಲಿಂಡಾ  ಮಗು ಕರುಣಿಸಿದ ಮರಿಯಮ್ಮಳನ್ನು ವಶಕ್ಕೆ ಪಡೆಯಲಾಗಿದೆ . ರಯಾನ್ ಹಾಸನದ ಸುಮಾರು 5 ತಿಂಗಳ ಮಗುವನ್ನು ಕಾರ್ಕಳದ ಕವಿತಾರಿಗೆ ಸುಮಾರು 5 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಿದ್ದಾನೆ. ಮಗುವನ್ನು ಖರೀದಿಸಿದ ಕವಿತಾ ಅದನ್ನು ಮತ್ತೆ ಮರಿಯಮ್ಮ ಎಂಬುವಳಿಗೆ ಮಾರಾಟ ಮಾಡಿದ್ದಾಳೆ. ಸದ್ಯ ಕವಿತಾ ಮತ್ತು ಮರಿಯ ಮ್ಮಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ.

Read These Next

ಕೋವಿಡ್ ಸೋಂಕಿತರು ಮೃತಪಟ್ಟರೇ ಮನಾಪಾಲಿಕೆಯಿಂದ ಅಂತ್ಯಸಂಸ್ಕಾರದ ವೆಚ್ಚ: ಶಾಸಕ ವೇದವ್ಯಾಸ ಕಾಮತ್.

ಮಂಗಳೂರು : ಮಹಾನಗರ ಪಾಲಿಕೆ ವ್ಯಾಾಪ್ತಿಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅಂತ್ಯ ಸಂಸ್ಕಾರದ ವೆಚ್ಚವನ್ನು ಮಂಗಳೂರು ...

ಮದುವೆಗೆ 50 ಜ‌ನರಿಗಷ್ಟೆ ಅನುಮತಿ. ನಿಯಮ ಮೀರಿದರೇ ಕ್ರಮ. ಮಂಗಳೂರು ಡಿಸಿ ಮತ್ತು ಪೊಲೀಸ್ ಕಮಿಷನರ್ ಮಾಹಿತಿ.

ಮಂಗಳೂರು : ರಾಜ್ಯ ಸರ್ಕಾರದಿಂದ ಹೊಸ ಕೋವಿಡ್ ಗೈಡ್ ಲೈನ್ಸ್ ಪ್ರಕಟಗೊಳಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ...

ಕಾರವಾರ : ವ್ಯಕ್ತಿ ನಾಪತ್ತೆ

ಬಡಕಲು ದೇಹ, ಗೋದಿ ಮೈ ಬಣ್ಣ, 5.4 ಎತ್ತರÀ, ಇಂಗ್ಲೀಷ ಮತ್ತು ಕನ್ನಡ ಮಾತನಾಡುವ 59 ವರ್ಷ ಪ್ರಾಯದ ಕುಮಟಾದ ಸಾಣಕಲ ಕೇರಿ ನಿವಾಸಿ ಮಹಾಬಲೇಶ್ವರ ...