ಕಾರವಾರ ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಬಂಧನ. ಸಿಇಎನ್ ಪೊಲೀಸರ ಕಾರ್ಯಾಚರಣೆ.

Source: SO News | By Laxmi Tanaya | Published on 13th October 2020, 7:57 AM | Coastal News | Don't Miss |

ಕಾರವಾರ : ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಯುವಕರನ್ನು ಬಂಧಿಸಿದ ಘಟನೆ ಶಿರವಾಡದ  ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.

ಜಿಲ್ಲಾ ಅಪರಾಧ ಪತ್ತೆ ದಳದ ಇನ್ಸಪೆಕ್ಟರ್ ಸೀತಾರಾಮ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಕಾರವಾರ ತಾಲೂಕಿನ ಶಿರವಾಡದ ಬಂಗಾರಪ್ಪನಗರ ನಿವಾಸಿ ಕಿಶನ ಮೋಹನ್ ಬಾಂದೇಕರ (೨೭) , ಗೋವಾ ಕಾಣಕೋಣ ನಿವಾಸಿ ಗಂಗೇಶ ಗಜಾನನ ಪಾಥರಪೆಕರ (೨೭) ಮತ್ತು ಗೋಹಿಲ್ ಗಣೇಶ ಬೈರೆಲಿ (೨೯) ಬಂಧಿತರು.

ಶಿರವಾಡದ ರೈಲ್ವೆ ನಿಲ್ದಾಣದಲ್ಲಿ ಮೂವರು ಗಾಂಜಾ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಜಿಲ್ಲಾ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣಾ ಇನ್ಸಪೆಕ್ಟರ ಸೀತಾರಾಮ ಪಿ ನೇತೃತ್ವದ ತಂಡವು ಮೂವರು ಆರೋಪಿಗಳನ್ನು ಬಂಧಿಸಿ, ಅವರ ಬಳಿ ದೊರೆತ 20 ಸಾವಿರ ರೂ. ಮೌಲ್ಯದ 1.40 ಕೆಜಿ ಗಾಂಜಾವನ್ನು ಮತ್ತು ಕಳ್ಳ ಸಾಗಾಣಿಕೆ ಗೆ ಬಳಸಲಾದ ಕಾರು, ಬೈಕ್ ಮತ್ತು ಮೊಬೈಲ್‌ನ್ನು ವಶಕ್ಕೆ ಪಡೆದುಕೊಂಡಿದೆ.

ಕಾರ್ಯಾಚರಣೆಯಲ್ಲಿ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ ಸಿಬ್ಬಂದಿಗಳಾದ ಉಮೇಶ್ ನಾಯ್ಕ, ನಾಗರಾಜ ನಾಯ್ಕ್, ಸುದರ್ಶನ ನಾಯ್ಕ, ಮಂಜುನಾಥ ಹೆಗಡೆ. ಹನುಮಂತ ಕಬಾಡಿ, ಸುರೇಶ ನಾಯ್ಕ, ಶಿವಾನಂದ ತಾನಸಿ, ಶರತಕುಮಾರ ಬಿ ಎಸ್, ನಾರಾಯಣ ಎಮ್ ಎಸ್, ಭರತೇಶ ಸದಲಗಿ, ಚಂದ್ರಶೇಖರ ಪಾಟೀಲ ಇದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...